AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ 12 ಅಂತರಾಜ್ಯ ಕಳ್ಳರ ಬಂಧನ: 61 ಬೈಕ್​ಗಳು ವಶಕ್ಕೆ​

ಬೆಂಗಳೂರಿನಲ್ಲಿ 12 ಅಂತಾರಾಜ್ಯ ಬೈಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 51 ಲಕ್ಷ ರೂ. ಮೌಲ್ಯದ 61 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದೇವಸ್ಥಾನಗಳು, ಜಾತ್ರೆಗಳು ಮತ್ತು ನೋ ಪಾರ್ಕಿಂಗ್‌ಗಳಲ್ಲಿ ಬೈಕ್‌ಗಳನ್ನು ಕದ್ದಿದ್ದರು. ಕೆಲವು ಆರೋಪಿಗಳು ಕದ್ದ ಬೈಕ್‌ಗಳಲ್ಲಿಯೇ ಸರಗಳ್ಳತನವನ್ನೂ ಮಾಡುತ್ತಿದ್ದರು.

ಬೆಂಗಳೂರಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ 12 ಅಂತರಾಜ್ಯ ಕಳ್ಳರ ಬಂಧನ: 61 ಬೈಕ್​ಗಳು ವಶಕ್ಕೆ​
ಬೆಂಗಳೂರಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ 12 ಅಂತರಾಜ್ಯ ಕಳ್ಳರ ಬಂಧನ: 61 ಬೈಕ್​ಗಳು ವಶಕ್ಕೆ​
Shivaprasad B
| Edited By: |

Updated on:Nov 15, 2024 | 2:59 PM

Share

ಬೆಂಗಳೂರು, ನವೆಂಬರ್​ 15: ಬೈಕ್​ ಕಳ್ಳತನ (Bike Thefts) ಮಾಡುತ್ತಿದ್ದ 12 ಅಂತರಾಜ್ಯ ಕಳ್ಳರನ್ನು ಬಂಧನ ಮಾಡಲಾಗಿದೆ. ನಗರದ ಆರ್​.ಟಿ.ನಗರ, ಸೋಲದೇವನಹಳ್ಳಿ, ಬಾಗಲಗುಂಟೆ, ಚಿಕ್ಕಜಾಲ, ಎಲೆಕ್ಟ್ರಾನಿಕ್​ ಸಿಟಿ, ಬಾಣಸವಾಡಿ, ಕಾಡುಗೋಡಿ ಪೊಲೀಸರಿಂದ ಆರೋಪಿಗಳ ಬಂಧನ ಮಾಡಿದ್ದು, ಒಟ್ಟು 51 ಲಕ್ಷ ಮೌಲ್ಯದ 61 ಬೈಕ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇವಸ್ಥಾನ, ಜಾತ್ರೆ ಮತ್ತು ನೋ ಪಾರ್ಕಿಂಗ್​​ಗಳಲ್ಲಿ ಖದೀಮರಿಂದ ಕಳ್ಳತನ ಮಾಡಲಾಗುತ್ತಿತ್ತು.

ಆರೋಪಿಗಳು ಹಲವು ಮಾದರಿಯಲ್ಲಿ ಬೈಕ್​ಗಳನ್ನು ಕಳ್ಳತನ ಮಾಡುತ್ತಿದ್ದರು. ಬೈಕ್​ಗಳು ಕದ್ದಿದ್ದಲ್ಲದೇ ಅದೇ ಬೈಕ್​​ಗಳಲ್ಲಿ ಸರಗಳ್ಳತನ ಕೂಡ ಮಾಡುತ್ತಿದ್ದರು.

ಆರ್​ಎಕ್ಸ್ ಬೈಕ್​ಗಳನ್ನೇ ಟಾರ್ಗೆಟ್ ಮಾಡಿ ಕಳವು

ಇದೇ ರೀತಿಯಾಗಿ ಆರ್​ಎಕ್ಸ್ ಬೈಕ್​ಗಳನ್ನೇ ಟಾರ್ಗೆಟ್ ಮಾಡಿ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಇಮ್ರಾನ್​ ಮತ್ತು ಸಮೀರ್​​ನನ್ನು ಬಂಧಿಸಿದ ಆರ್​.ಟಿ.ನಗರ ಪೊಲೀಸರು ಬಂಧಿಸಿದ್ದಾರೆ. ವೆಹಿಕಲ್ ಬಿಡಿ ಭಾಗಗಳನ್ನು ಬಿಚ್ಚಿ ಓಎಲ್​ಎಕ್ಸ್ ಮೂಲಕ ಮಾರಾಟ ಮಾಡುತ್ತಿದ್ದರು. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ: ಬಸವನಗುಡಿ PSI ವಿರುದ್ಧ ಆಯುಕ್ತರಿಗೆ ದೂರು

ಇನ್ನು ನಗರದಲ್ಲಿ ತಡರಾತ್ರಿ ತೆರೆದ ಮನೆಗಳನ್ನು ಟಾರ್ಗೆಟ್​​ ಮಾಡಿ ಮೊಬೈಲ್​, ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಗಲು ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು ರಾತ್ರಿ ವೇಳೆ ಮನೆಗಳ್ಳತನ ಮಾಡ್ತಿದ್ದರು.

ಉತ್ತರಾಖಂಡ ಮೂಲದ ಜತಿನ್​​, ಮನೀಶ್​​​​ ಬಂಧಿತರು. ಕದ್ದ ಬೈಕ್​ಗಳಲ್ಲಿಯೇ ಹೋಗಿ ಕಳ್ಳತನ ಮಾಡುತ್ತಿದ್ದ ಆರೋಪಿಗಳು. ಬಂಧಿತರಿಂದ 14 ಲಕ್ಷ ಮೌಲ್ಯದ 11 ಬೈಕ್​ಗಳು, 21 ಮೊಬೈಲ್​​ಗಳು, 21 ಗ್ರಾಂ ಚಿನ್ನಾಭರಣವನ್ನು ಎಲೆಕ್ಟ್ರಾನಿಕ್​ ಸಿಟಿ ಠಾಣೆ ಪೊಲೀಸರು ವಶಕ್ಕೆ ಪಡೆದ್ದಾರೆ.

ಕಾಲುವೆಗೆ ಕನ್ನ

ವಿಜಯಪುರ: ಜಿಲ್ಲೆಯಲ್ಲಿ ಕೆರೆಗಳ ಪಾಲಾಗಬೇಕಿದ್ದ ಕಾಲುವೆ ನೀರು ಉಳ್ಳವರ ಪಾಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಕೃಷ್ಣಾ ಮೇಲ್ದಂಡೆ ಯೋಜನೆಯ ಪೈಕಿ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ನೀರು ನೀರುಗಳ್ಳರ ಪಾಲಾಗುತ್ತಿದೆ. ಇಂಡಿ ತಾಲೂಕಿನ ಕೆಂಗೇರಿ ಗ್ರಾಮದಿಂದ ಕಲ್ಲಾಳದತ್ತ ಸಾಗುವ ಕಾಲುವೆಗೆ ಕನ್ನ ಹಾಕಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲೆ ಮಾಲೀಕ ಪೊಲೀಸ್​ ವಶಕ್ಕೆ

ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಕಾಲುವೆಗಳಿಂದ ಇಂಡಿ ತಾಲೂಕಿನ ಹತ್ತಾರು ಕೆರೆಗಳಿಗೆ ನೀರು ಭರಿಸಲಾಗುತ್ತಿದೆ. ಈ ನೀರನ್ನು ಯಾವುದೇ ಕೃಷಿ ಚುಟುವಟಿಕೆಗಳಿಂದ ಬಳಕೆ ಮಾಡಬಾರದು ಎಂದು ನಿಯಮ ಜಾರಿ ಮಾಡಲಾಗಿದೆ. ಕೃಷಿ ಚಟುವಟಿಕೆಗಳಿಗೆ ನೀರು ಬಳಕೆ ಮಾಡಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ಕೆಬಿಜೆಎನ್ಎಲ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:54 pm, Fri, 15 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್