ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು

Death threat to K Gopalaiah: ಮಾಜಿ ಕಾರ್ಪೊರೇಟರ್ ಪದ್ಮರಾಜು ಜೀವ ಬೆದರಿಕೆ ಹಾಕಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ ಎಂದು ಬಿಜೆಪಿ ಶಾಸಕ ಕೆ ಗೋಪಾಲಯ್ಯ ಹೇಳಿದ್ದಾರೆ. ಸದ್ಯ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪದ್ಮರಾಜು ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು
ಕೆ ಗೋಪಾಲಯ್ಯ
Follow us
TV9 Web
| Updated By: Ganapathi Sharma

Updated on:Feb 14, 2024 | 10:28 AM

ಬೆಂಗಳೂರು, ಫೆಬ್ರವರಿ 14: ಬಿಜೆಪಿ ಶಾಸಕ (BJP MLA) ಕೆ ಗೋಪಾಲಯ್ಯಗೆ (K Gopalaiah) ಜೀವ ಬೆದರಿಕೆ (Death Threat) ಒಡ್ಡಿದ ಆರೋಪದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜು, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್​ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದರು.

ಈ ವಿಚಾರವಾಗಿ ಶಾಸಕ ಕೆ ಗೋಪಾಲಯ್ಯ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದು, ಅವನು ಮಾತನಾಡಿರುವ ವಿಚಾರಗಳನ್ನು ಈಗ ಬಹಿರಂಗಪಡಿಸಲು ಆಗದು. ಆತ ಇದಕ್ಕೂ ಮೊದಲು ಬೇರೆ ಶಾಸಕರಿಗೆ ಕೂಡ ಬೆದರಿಕೆ ಹಾಕಿದ್ದ. ಪದ್ಮರಾಜು​​ ಮಗಳಿಗೂ ನಾನೇ ಕೆಲಸ ಕೊಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ಪದ್ಮರಾಜು​​ ಬೆದರಿಕೆ ಹಾಕಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ. ಪದ್ಮರಾಜುನನ್ನ ಗಡಿಪಾರು ಮಾಡುವಂತೆ ಆಗ್ರಹಿಸುತ್ತೇನೆ ಎಂದು ಗೋಪಾಲಯ್ಯ ಹೇಳಿದ್ದಾರೆ.

ಈ ಮಧ್ಯೆ, ವಿಧಾನಸಭೆ ಸ್ಪೀಕರ್​ಗೆ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೂ ಶಾಸಕ ಕೆ.ಗೋಪಾಲಯ್ಯ ದೂರು ನೀಡಿದ್ದಾರೆ.

ಪದ್ಮರಾಜ್ ಪೊಲೀಸ್ ವಶಕ್ಕೆ

ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ನನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಪದ್ಮರಾಜ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪದ್ಮರಾಜ್ ಬಳಿಯಿದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ್ದಕ್ಕೆ ಸೋಮಶೇಖರ್ ಸಮರ್ಥನೆ

ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಿದ್ದನ್ನು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಕಚೇರಿಗೆ ಅವರು ಬಂದು ಮನವಿ ಮಾಡಿದ್ದರಲ್ಲಿ ತಪ್ಪೇನಿಲ್ಲ. ಬಿಜೆಪಿಯರು ಪಕ್ಷ ವಿರೋಧಿ ಅಂತಾ ಪರಿಗಣಿಸಿದ್ರೆ ಪರಿಗಣಿಸಲಿ ಎಂದು ಅವರು ಹೇಳಿದ್ದಾರೆ.

ಪಕ್ಷಕ್ಕೆ ದ್ರೋಹ ಮಾಡಿದವರನ್ನೇ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ರಾಜ ಮಱದೆ ಕೊಟ್ಟು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ನನ್ನನ್ನು ಪಕ್ಷದಿಂದ ಸಸ್ಪೆಂಡ್ ಮಾಡುವುದಾದರೆ ಮಾಡಲಿ. ನಾನು ಅದಕ್ಕೆಲ್ಲ ತಲೆಕಡೆಸಿಕೊಳ್ಳುವುದಿಲ್ಲ. ಜೆಡಿಎಸ್ ಅಭ್ಯರ್ಥಿ ಪರ ನಾನು ಯಾವ ಕಾರಣಕ್ಕೂ ಮತ ಕೇಳುವುದಿಲ್ಲ ಎಂದು ‘ಟಿವಿ9’ಗೆ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಮೈತ್ರಿ ಪಕ್ಷಗಳಿಗೆ ಶಾಕ್ ಕೊಟ್ಟ ಎಸ್​ಟಿ ಸೋಮಶೇಖರ್, ಸ್ವಪಕ್ಷದ ವಿರುದ್ಧವೇ ಕೆಂಡಾಮಂಡಲ

ವಿಧಾನಸಭಾ ಚುನಾವಣೆಯ ಬಳಿಕ ನಿರಂತರವಾಗಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಸೋಮಶೇಖರ್‌ ಅವರು ಮಂಗಳವಾರ ಪಕ್ಷಕ್ಕೆ ಮತ್ತೊಂದು ಆಘಾತ ನೀಡಿದ್ದರು. ವಿಧಾನ ಪರಿಷತ್​ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಬಿಟ್ಟು ಕಾಂಗ್ರೆಸ್​ ಅಭ್ಯರ್ಥಿಗೆ ಮತ ನೀಡುವಂತೆ ಅವರು ಕೇಳಿಕೊಂಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Wed, 14 February 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ