AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್‌ ಮುಕ್ತಿಗೆ ಹೊಸ ಪ್ಲಾನ್​​: ಮೆಟ್ರೋ ಟಿಕೆಟ್ ದರ ಹೆಚ್ಚಳದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಕೃಷ್ಣ ಬೈರೇಗೌಡ

ಬೆಂಗಳೂರು ಬ್ಲೂ ಲೈನ್ ಮೆಟ್ರೋ ಮಾರ್ಗದಲ್ಲಿ ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿವರೆಗೆ ಪರೀಕ್ಷಾರ್ಥ ಸಂಚಾರ ಆರಂಭವಾಗಿದೆ. ಇದು ಟೆಕ್ ಕಾರಿಡಾರ್‌ನ ಭೀಕರ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವ ನಿರೀಕ್ಷೆ ಇದೆ. ಸಚಿವ ಕೃಷ್ಣ ಬೈರೇಗೌಡರು ಪ್ರಗತಿ ಪರಿಶೀಲಿಸಿದ್ದು, ಮೆಟ್ರೋ ಟಿಕೆಟ್ ದರ ಏರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಜಾಪುರ ಡಬಲ್ ಡೆಕ್ಕರ್ ಯೋಜನೆಗೂ ಕೇಂದ್ರದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.

ಬೆಂಗಳೂರು ಟ್ರಾಫಿಕ್‌ ಮುಕ್ತಿಗೆ ಹೊಸ ಪ್ಲಾನ್​​: ಮೆಟ್ರೋ ಟಿಕೆಟ್ ದರ ಹೆಚ್ಚಳದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಕೃಷ್ಣ ಬೈರೇಗೌಡ
ಸಾಂದರ್ಭಿಕ ಚಿತ್ರ Image Credit source: Tv9 kannada
ಅರುಣ್ ಕುಮಾರ್​ ಆರ್​.
| Edited By: |

Updated on: Nov 24, 2026 | 10:09 PM

Share

ಬೆಂಗಳೂರು, ನ. 24: ಸಿಲಿಕಾನ್ ಸಿಟಿ ಬೆಂಗಳೂರಿನ ಮೆಟ್ರೋ ಜಾಲಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಸಿಕ್ಕಿದೆ. ಟೆಕ್ ಕಾರಿಡಾರ್‌ನ ಭೀಕರ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವ ನಿರೀಕ್ಷೆಯಿರುವ ಬ್ಲೂ ಲೈನ್ ಮೆಟ್ರೋ ಮಾರ್ಗದಲ್ಲಿ ಇದೀಗ ಪರೀಕ್ಷಾರ್ಥ ಸಂಚಾರ ಆರಂಭವಾಗಿದೆ. ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿವರೆಗೆ ಮೆಟ್ರೋ ರೈಲು ಯಶಸ್ವಿಯಾಗಿ ಸಂಚರಿಸಿದ್ದು, ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಹಾಗೂ ಟ್ರಯಲ್ ರನ್ ಪ್ರಗತಿಯನ್ನು ಪರಿಶೀಲಿಸಿದ್ದಾರೆ.

ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿವರೆಗೆ ಆರಂಭವಾದ ಮೆಟ್ರೋ ರೈಲಿನ ಪರೀಕ್ಷಾರ್ಥ ಸಂಚಾರದ ವೇಳೆ, ಇಂದು ಬೆಳಗ್ಗೆ ದೊಡ್ಡನೆಕ್ಕುಂದಿ ಮೆಟ್ರೋ ನಿಲ್ದಾಣಕ್ಕೆ ರೈಲು ಆಗಮಿಸಿದೆ. ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳೊಂದಿಗೆ ಕಾಮಗಾರಿ ಪ್ರಗತಿ ಹಾಗೂ ಮಾರ್ಗದ ನಕ್ಷೆಗಳ ಕುರಿತು ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರತಿನಿತ್ಯ ಸುಮಾರು 11ರಿಂದ 12 ಲಕ್ಷ ಜನ ಉದ್ಯೋಗಕ್ಕಾಗಿ ಈ ಟೆಕ್ ಕಾರಿಡಾರ್ ಭಾಗಕ್ಕೆ ಬರುತ್ತಾರೆ. ಬ್ಲೂ ಲೈನ್ ಮೆಟ್ರೋ ಸಂಚಾರ ಆರಂಭವಾದರೆ ಈ ಭಾಗದ ಲಕ್ಷಾಂತರ ಉದ್ಯೋಗಿಗಳು ಹಾಗೂ ವಾಹನ ಸವಾರರಿಗೆ ದೊಡ್ಡ ಮಟ್ಟದ ನೆಮ್ಮದಿ ಸಿಗಲಿದೆ.

ಮುಂದಿನ ಒಂದು ತಿಂಗಳಲ್ಲಿ ಇನ್ನೂ ನಾಲ್ಕು ನಿಲ್ದಾಣಗಳಲ್ಲಿ ಟ್ರಯಲ್ ರನ್ ನಡೆಸಲು ಯೋಜನೆ ರೂಪಿಸಲಾಗಿದೆ. ಸುಮಾರು 20 ಸಾವಿರ ಕೋಟಿ ರೂಪಾಯಿ ವೆಚ್ಚದ ಈ ಯೋಜನೆ ಮುಂದಿನ ಒಂದೂವರೆ ವರ್ಷದಲ್ಲಿ ಪ್ರಯಾಣಿಕರ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಸಚಿವರ ಸ್ಪಷ್ಟನೆ

ಮೆಟ್ರೋ ಟಿಕೆಟ್ ದರ ಏರಿಕೆ ಕುರಿತ ಚರ್ಚೆಗಳ ನಡುವೆ ಸ್ಪಷ್ಟನೆ ನೀಡಿರುವ ಸಚಿವರು, ಸದ್ಯಕ್ಕೆ ಟಿಕೆಟ್ ದರ ಹೆಚ್ಚಳದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಬಿಎಂಆರ್‌ಸಿಎಲ್‌ಗೆ ವಾರ್ಷಿಕ ಸುಮಾರು 600 ಕೋಟಿ ರೂಪಾಯಿ ಆರ್ಥಿಕ ಹೊರೆ ಇದೆ. ಮೆಟ್ರೋ ಆರಂಭವಾಗಿ 15 ವರ್ಷ ಕಳೆದಿರುವುದರಿಂದ ಹಳೆಯ ಉಪಕರಣಗಳ ಬದಲಾವಣೆ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿದೆ. ಕೇವಲ ಟಿಕೆಟ್ ಆದಾಯದಿಂದಲೇ ಮೆಟ್ರೋ ನಿರ್ವಹಣೆ ಸಾಧ್ಯವಿಲ್ಲ. ದೆಹಲಿ ಮೆಟ್ರೋ ಮಾದರಿಯಲ್ಲಿ ಬೆಂಗಳೂರಿನ ಮೆಟ್ರೋಗೂ ಕೇಂದ್ರ ಸರ್ಕಾರ ಹೆಚ್ಚಿನ ಆರ್ಥಿಕ ನೆರವು ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಪ್ರತಿಪಾದಿಸಿದ್ದಾರೆ. ಅಲ್ಲದೆ, ಮೆಟ್ರೋ ಸಾಲದ ಹೊರೆಯನ್ನು ಸದ್ಯ ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಮದುವೆಯಾಗುತ್ತೇನೆ, ಈಗ ಸೇರುವ ಬಾ ಎಂದು ನಂಬಿಸಿ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್: ಕೊನೆಯ ಬಾರಿ ಲಾಡ್ಜ್‌ಗೆ ಬಂದಾಗ ನಡೆದದ್ದೇ ಬೇರೆ

ಸರ್ಜಾಪುರ ಡಬಲ್ ಡೆಕ್ಕರ್ ಯೋಜನೆಗೂ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ

ಬೆಂಗಳೂರಿನ ಸರ್ಜಾಪುರ ರಸ್ತೆಯ ಭವಿಷ್ಯದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಜಾಪುರದಿಂದ ಇಬ್ಬಲೂರು ಜಂಕ್ಷನ್‌ವರೆಗೆ ಡಬಲ್ ಡೆಕ್ಕರ್ ರಸ್ತೆ ಹಾಗೂ ಮೆಟ್ರೋ ನಿರ್ಮಾಣದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರದ ಮುಂದಿಡಲಾಗಿದೆ. ಕಳೆದ 22 ತಿಂಗಳಿಂದ ಕೇಂದ್ರದ ಬಳಿ ಬಾಕಿ ಉಳಿದಿದ್ದ ಈ ಪ್ರಸ್ತಾವನೆ ಕುರಿತು ಇದೀಗ ಕೇಂದ್ರ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ. ಈ ಭಾಗದಲ್ಲಿ ಐಟಿ ಕಂಪನಿಗಳು, ಅಪಾರ್ಟ್‌ಮೆಂಟ್‌ಗಳು ಹಾಗೂ ವಿಲ್ಲಾಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚುವ ಆತಂಕವಿದೆ ಎಂದು ರಾಜ್ಯ ಸರ್ಕಾರ ಕೇಂದ್ರದ ಮುಂದೆ ಬೇಡಿಕೆ ಇಟ್ಟಿದೆ ಎಂದು ಸಚಿವರು ವಿವರಿಸಿದ್ದಾರೆ. ಒಟ್ಟಿನಲ್ಲಿ ಬ್ಲೂ ಲೈನ್ ಮೆಟ್ರೋ ಟ್ರಯಲ್ ರನ್ ಆರಂಭ ಹಾಗೂ ಸರ್ಜಾಪುರ ಡಬಲ್ ಡೆಕ್ಕರ್ ಯೋಜನೆಗೆ ಕೇಂದ್ರದ ಸ್ಪಂದನೆ ಸಿಕ್ಕಿರುವುದು ಬೆಂಗಳೂರಿನ ಜನರಲ್ಲಿ ಭರವಸೆ ಮೂಡಿಸಿದ್ದು, ಈ ಯೋಜನೆಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಂಡು ಜನರ ಬಳಕೆಗೆ ಮುಕ್ತವಾಗುತ್ತವೆಯೇ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
‘ಆಶಾ ಕಾರ್ಯಕರ್ತೆಯರು ಕೇಳುವುದರಲ್ಲಿ ಏನೂ ತಪ್ಪಿಲ್ಲ’: ರಮ್ಯಾ
‘ಆಶಾ ಕಾರ್ಯಕರ್ತೆಯರು ಕೇಳುವುದರಲ್ಲಿ ಏನೂ ತಪ್ಪಿಲ್ಲ’: ರಮ್ಯಾ
ಗೊರಗುಂಟೆಪಾಳ್ಯದಿಂದ ಬೊಮ್ಮಸಂದ್ರಕ್ಕೆ ಹೃದಯ ಸಾಗಣೆ
ಗೊರಗುಂಟೆಪಾಳ್ಯದಿಂದ ಬೊಮ್ಮಸಂದ್ರಕ್ಕೆ ಹೃದಯ ಸಾಗಣೆ
ರಾಜೀನಾಮೆ ನೀಡಲು ಮುಂದಾಗಿದ್ದ ಕೈ ಶಾಸಕರನ್ನು ತಡೆದ ಕೆಪಿಸಿಸಿ ಅಧ್ಯಕ್ಷ
ರಾಜೀನಾಮೆ ನೀಡಲು ಮುಂದಾಗಿದ್ದ ಕೈ ಶಾಸಕರನ್ನು ತಡೆದ ಕೆಪಿಸಿಸಿ ಅಧ್ಯಕ್ಷ
‘100 ವರ್ಷ ಆದರೂ ಮರೆಯೋಕೆ ಸಾಧ್ಯವಿಲ್ಲ’: ಅಂಬರೀಷ್ ಬಗ್ಗೆ ಸುಮಲತಾ ಮಾತು
‘100 ವರ್ಷ ಆದರೂ ಮರೆಯೋಕೆ ಸಾಧ್ಯವಿಲ್ಲ’: ಅಂಬರೀಷ್ ಬಗ್ಗೆ ಸುಮಲತಾ ಮಾತು
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ