Byappanahalli-KR Pura Metro: ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ಮಾರ್ಗ ಜುಲೈ 15ರೊಳಗೆ ಸಂಚಾರಕ್ಕೆ ಮುಕ್ತ

ನಮ್ಮ ಮೆಟ್ರೋದ ಬಹುನಿರೀಕ್ಷಿತ ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ವಿಭಾಗದ 2 ಕಿಲೋಮೀಟರ್ ಮಾರ್ಗ ಜುಲೈ 15 ರೊಳಗೆ ಸಂಚಾರಕ್ಕೆ ಮುಕ್ತವಾಗಲಿದೆ.

Byappanahalli-KR Pura Metro: ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ಮಾರ್ಗ ಜುಲೈ 15ರೊಳಗೆ ಸಂಚಾರಕ್ಕೆ ಮುಕ್ತ
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on:May 16, 2023 | 5:55 PM

ಬೆಂಗಳೂರು: ನಮ್ಮ ಮೆಟ್ರೋದ (Namma Metro) ಬಹುನಿರೀಕ್ಷಿತ ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ವಿಭಾಗದ 2 ಕಿಲೋಮೀಟರ್ ಮಾರ್ಗ ಜುಲೈ 15 ರೊಳಗೆ ಸಂಚಾರಕ್ಕೆ ಮುಕ್ತವಾಗಲಿದೆ. ಬೆನ್ನಿಗಾನಹಳ್ಳಿ ಬಳಿ ಬೆಂಗಳೂರು-ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ ತೆರೆದ ವೆಬ್ ಗರ್ಡರ್ ಅಳವಡಿಕೆ ಕೆಲಸ ಪೂರ್ಣಗೊಳ್ಳದ ಕಾರಣ ಸದ್ಯ ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಜುಲೈ 15ರ ಒಳಗಾಗಿ ಮಾರ್ಗವು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಸದ್ಯ ಬೈಯಪ್ಪನಹಳ್ಳಿ ಮತ್ತು ಜ್ಯೋತಿಪುರ (ಬೆನ್ನಿಗಾನಹಳ್ಳಿ) ಎರಡೂ ಕಡೆಯಿಂದ ಟ್ರ್ಯಾಕ್ ಅಳವಡಿಕೆ ಪ್ರಗತಿಯಲ್ಲಿದೆ ಮತ್ತು ಈ ತಿಂಗಳ ಅಂತ್ಯದ ವೇಳೆಗೆ ಇದು ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕ (MD) ಅಂಜುಮ್ ಪರ್ವೇಜ್ ತಿಳಿಸಿರುವುದಾಗಿ ‘ಮನಿ ಕಂಟ್ರೋಲ್’ ವರದಿ ಮಾಡಿದೆ.

ಟ್ರಾಕ್ಷನ್, ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕೆಲಸಗಳನ್ನು ಜೂನ್ 15 ರೊಳಗೆ ಪೂರ್ಣಗೊಳಿಸಲಾಗುವುದು. ಬಳಿಕ ಪ್ರಾಯೋಗಿಕ ಸಂಚಾರ ಆರಂಭಗೊಳ್ಳಳಿದೆ. ದೂರವು ಕಡಿಮೆ ಇರುವುದರಿಂದ ಪ್ರಾಯೋಗಿಕ ಸಂಚಾರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬಹುದು. ಕೊನೆಯಲ್ಲಿ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರನ್ನು ಪರಿಶೀಲನೆಗೆ ಆಹ್ವಾನಿಸಲಾಗುತ್ತದೆ. ಕೆಆರ್ ಪುರ-ಬೈಯಪ್ಪನಹಳ್ಳಿ ವಿಭಾಗದ ವಾಣಿಜ್ಯ ಕಾರ್ಯಾಚರಣೆಯನ್ನು ಜುಲೈ 15ರೊಳಗೆ ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೇವಲ 24 ನಿಮಿಷದಲ್ಲಿ KR ಪುರಂ-ವೈಟ್‌ಫೀಲ್ಡ್ ನಡುವೆ ಪ್ರಯಾಣ; 10-12 ನಿಮಿಷಗಳ ಅಂತರದಲ್ಲಿ 7 ಮೆಟ್ರೋ ರೈಲುಗಳ ಸೇವೆ ನೀಡಲಿರುವ BMRCL

ಜ್ಯೋತಿಪುರದಲ್ಲಿ (ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ) ನಿಲ್ದಾಣದ ಕಾಮಗಾರಿಯನ್ನು ಪೂರ್ಣಗೊಳಿಸಲು ನಾವು ಈಗಾಗಲೇ ಒಪ್ಪಂದ ಮಾಡಿಕೊಂಡಿರುವ ಸಂಸ್ಥೆ ಸ್ಟಾರ್‌ವರ್ತ್ ಜೊತೆಗೆ ಹೊಸ ಗುತ್ತಿಗೆದಾರ ಗೋದ್ರೇಜ್ ಜತೆಗೂ ಒಪ್ಪಂದ ಮಾಡಿಕೊಂಡಿದ್ದೇವೆ. ರಸ್ತೆಯ ಎರಡೂ ಬದಿಗಳಲ್ಲಿ ನಿಲ್ದಾಣದ ಕೆಲಸವನ್ನು ಏಕಕಾಲದಲ್ಲಿ ನಡೆಸಲಾಗುತ್ತಿದೆ ಮತ್ತು ಇಂಟೀರಿಯರ್ ಕೆಲಸವು ಮುಕ್ತಾಯದ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 25ರಂದು ವೈಟ್‌ಫೀಲ್ಡ್‌ ಮತ್ತು ಕೆಆರ್ ಪುರ ನಡುವಣ ನಮ್ಮ ಮೆಟ್ರೋ ನೇರಳೆ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದರು. ಆದರೆ ಬೆನ್ನಿಗಾನಹಳ್ಳಿ ತನಕ ಮೆಟ್ರೋ ಸೇವೆ ವಿಸ್ತರಣೆಗೆ ಕಾಮಗಾರಿ ಪೂರ್ಣಗೊಳ್ಳದಿರುವುದು ಅಡ್ಡಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Tue, 16 May 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ