​​ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ BMTC; ಆಕ್ಷೇಪ ವ್ಯಕ್ತಪಡಿಸುತ್ತಿರುವ KSRTC

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ಇದೆ. ಆದರೆ ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ ಹಿನ್ನಲೆ ಕೆಎಸ್​ಆರ್​ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

​​ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ BMTC; ಆಕ್ಷೇಪ ವ್ಯಕ್ತಪಡಿಸುತ್ತಿರುವ KSRTC
ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ
Follow us
TV9 Web
| Updated By: Rakesh Nayak Manchi

Updated on:Jan 07, 2023 | 10:12 AM

ಬೆಂಗಳೂರು: ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ (BMTC) ಬಸ್​​ ಸೇವೆ ಚಿಕ್ಕಬಳ್ಳಾಪುರಕ್ಕೂ ವ್ಯಾಪಿಸಿದೆ. ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಹೊಸವರ್ಸದಂದು ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿತ್ತು. ಬಿಎಂಟಿಸಿ ಬಸ್ ಸೇವೆ ಚಿಕ್ಕಬಳ್ಳಾಪುರ (Chikkaballapur)ಕ್ಕೆ ವಿಸ್ತರಿಸಿದ್ದೇ ತಡ, ಎಚ್ಚೆತ್ತ ಕೆಎಸ್​ಆರ್​ಟಿಸಿ (KSRTC) ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್​​ಆರ್​ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ಇದೆ. ಆದರೆ ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ ಹಿನ್ನಲೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕೆಎಸ್​ಆರ್​ಟಿಸಿ ಅಧಿಕಾರಿಗಳು BMTC ನಡೆ ಖಂಡಿಸಿ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಎಂಟಿಸಿ ಸಂಚಾರ ಮಾಡಿದರೆ KSRTCಗೆ ಆದಾಯಕ್ಕೆ ಹೊಡೆತ ಬೀಳುವ ಭೀತಿ ಹಿನ್ನಲೆ ಪತ್ರ ಬರೆಯಲು ಮುಂದಾಗಿದ್ದಾರೆ.

ಇದನ್ನೂ ಓದಿ: ಸಾವರ್ಕರ್ V/S ಟಿಪ್ಪು ಸುಲ್ತಾನ್ ದಂಗಲ್; ಸಾವರ್ಕರ್ ಫೋಟೋ ಶಾಲೆಗಳಲ್ಲಿ ಅಳವಡಿಸಿದರೆ ಕಿತ್ತು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ ಮುಸ್ಲಿಂ ನಾಯಕ

ನಿಯಮದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಸ್ ಓಡಿಸುವುದಕ್ಕೆ ಅನುಮತಿ ಪಡೆದಿರುವ ಬಿಎಂಟಿಸಿಗೆ ಬಿಬಿಎಂಪಿ ವ್ಯಾಪ್ತಿಯಿಂದ 25 ಕಿಮೀ ಮೀಟರ್ ಮಾತ್ರ ಬಸ್ ಓಡಿಸಲು ಅವಕಾಶ ಇದೆ. ಆದರೀಗ ಬೆಂಗಳೂರು ಹೊರವಲಯದ ಚಿಕ್ಕಬಳ್ಳಾಪುರಕ್ಕೂ ವಿಸ್ತರಣೆ ಮಾಡಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿಮೀ ಮೀಟರ್ ಅಂತರವಿದೆ. ನಿಯಮದ ಪ್ರಕಾರ ಬಸ್ ಸಂಚಾರ ವಿಸ್ತರಣೆ ಮಾಡಲು ಅವಕಾಶ ಇಲ್ಲ ಎಂದು ಕೆಎಸ್ಆರ್​ಟಿಸಿ ಅಧಿಕಾರಿಗಳು ಹೇಳುತ್ತಿದ್ದಾರೆ.

ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಜನವರಿ 4ರಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Sat, 7 January 23

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ