AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೆಟ್ರೋ ಮಾರ್ಗದಲ್ಲಿ ಇಂದಿನಿಂದ ಬಿಎಂಟಿಸಿ ಫೀಡರ್ ಬಸ್​ಗಳ ಸಂಚಾರ

ಆರ್.ವಿ.ರಸ್ತೆ ಟು ಬೊಮ್ಮಸಂದ್ರ ಮಾರ್ಗದಲ್ಲಿ ಹಳದಿ ಮೆಟ್ರೋ ಮಾರ್ಗ ಭಾನುವಾರ ಲೋಕಾರ್ಪಣೆ ಆಗಿದೆ. ಇದೇ ರಸ್ತೆಯಲ್ಲಿ ಇಂದಿನಿಂದ ಫೀಡರ್ ಬಸ್‌ಗಳು ರಸ್ತೆಗಳಿಯಲಿವೆ. ಆ ಮೂಲಕ ಮೆಟ್ರೊ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಹತ್ತಕ್ಕೂ ಹೆಚ್ಚು ಬಿಎಂಟಿಸಿ ಫೀಡರ್ ಬಸ್‌ಗಳು ಸಂಚರಿಸಲಿವೆ. ಬಸ್‌ಗಳ ಸಂಚಾರದ ಸಮಯ ಮತ್ತು ಮಾರ್ಗಗಳ ಮಾಹಿತಿ ಇಲ್ಲಿದೆ.

ಈ ಮೆಟ್ರೋ ಮಾರ್ಗದಲ್ಲಿ ಇಂದಿನಿಂದ ಬಿಎಂಟಿಸಿ ಫೀಡರ್ ಬಸ್​ಗಳ ಸಂಚಾರ
ಫೀಡರ್ ಬಸ್
Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 11, 2025 | 11:20 AM

Share

ಬೆಂಗಳೂರು, ಆಗಸ್ಟ್​ 11: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ (Metro Yellow Line) ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಇಂದು ಆರಂಭ ಕೂಡ ಆಗಿದೆ. ಅದೇ ರೀತಿಯಾಗಿ ಆರ್.ವಿ.ರಸ್ತೆ ಟು ಬೊಮ್ಮಸಂದ್ರ ಮಾರ್ಗದಲ್ಲಿ ಇಂದಿನಿಂದ ಫೀಡರ್ ಬಸ್​ಗಳು (BMTC feeder bus) ರಸ್ತೆಗಳಿಗಿಯಲಿವೆ. ಆ ಮೂಲಕ ಬಿಎಂಟಿಸಿ ಮೆಟ್ರೋ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದೆ.

ಈ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಸುಗಮ ಸಂಪರ್ಕವನ್ನು ಒದಗಿಸಲು, ಬಿಎಂಟಿಸಿ ಇಂದಿನಿಂದ ಫೀಡರ್ ಬಸ್ ಸೇವೆಯನ್ನು ಆರಂಭಿಸಿದೆ. ಬೊಮ್ಮಸಂದ್ರದಿಂದ ಹೆಬ್ಬಗೋಡಿ ಹಾಗೂ ಕೋನಪ್ಪನ ಅಗ್ರಹಾರದಿಂದ ಎಲೆಕ್ಟ್ರಾನಿಕ್ ಮಾರ್ಗಗಳಲ್ಲಿ ಫೀಡರ್ ಬಸ್‌ಗಳು ಸಂಚರಿಸಲಿವೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗದ ವಿಶೇಷತೆಗಳೇನು? ಇಲ್ಲಿದೆ ವಿವರ, ಫೋಟೋಸ್​ ನೋಡಿ

ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್‌ನಿಂದ ಬೆಳಗ್ಗೆ 8.20 ರಿಂದ ಸಂಜೆ 4.55ರವರೆಗೆ ನಾಲ್ಕು ಬಸ್​ಗಳು  32 ರೌಂಡ್ಸ್​ಗಳಲ್ಲಿ ಸಂಚರಿಸಲಿವೆ. ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್‌ನಿಂದ ಕೋನಪ್ಪನ ಅಗ್ರಹಾರ, ಹೊಸ ರೋಡ್, ಕಸವನಹಳ್ಳಿ, ಕೈಕೊಂಡ್ರಹಳ್ಳಿ ಮಾರ್ಗದ ಮೂಲಕ ದೊಡ್ಡಕನ್ನೆಲ್ಲಿ ಬಸ್ ನಿಲ್ದಾಣದವರೆಗೆ ಸಂಚರಿಸಲಿವೆ.

ಕೋನಪ್ಪನ ಅಗ್ರಹಾರದಿಂದ ಎಲೆಕ್ಟ್ರಾನಿಕ್ ಸಿಟಿ, ಹುಸ್ಕೂರು ಗೇಟ್, ಚಿಂತಲ ಮಡಿವಾಳ, ಮುತ್ತಾನಲ್ಲೂರು ವೃತ್ತ, ತಿಮ್ಮಸಂದ್ರ ವೃತ್ತ ಮತ್ತು ಚಂದಾಪುರ ವೃತ್ತ ಮಾರ್ಗದಲ್ಲಿ ನಾಲ್ಕು ಬಸ್​ಗಳು 20 ರೌಂಡ್‌ಗಳಲ್ಲಿ ಬೆಳಗ್ಗೆ 8:40 ರಿಂದ ಸಂಜೆ 4:50 ರವರೆಗೆ ಕಾರ್ಯನಿರ್ವಹಿಸಲಿವೆ.

ಬೊಮ್ಮಸಂದ್ರದಿಂದ ಎಲೆಕ್ಟ್ರಾನಿಕ್ ಸಿಟಿ ವಿಪ್ರೋ ಗೇಟ್‌ಗೆ, ತಿರುಪಾಳ್ಯ ವೃತ್ತ, ಎಸ್-ಮಾಂಡೋ-3, ಮತ್ತು ಹೆಬ್ಬಗೋಡಿ ಮಾರ್ಗದಲ್ಲಿ 2 ಬಸ್‌ಗಳು 20 ರೌಂಡ್‌ಗಳಲ್ಲಿ ಸಂಚರಿಸಲಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಹವಾ ಹೇಗಿತ್ತು? ಪ್ರಧಾನಿ ಸಿಲಿಕಾನ್ ಸಿಟಿ ರೌಂಡ್ಸ್​ ಫೋಟೋಸ್

ಯೆಲ್ಲೋ ಲೈನ್‌ನಲ್ಲಿ ಆರ್‌ವಿ ರಸ್ತೆ TO ಬೊಮ್ಮಸಂದ್ರ ನಡುವೆ ಸಂಚಾರ ಮೆಟ್ರೋ ಸಂಚರಿಸಲಿದೆ. ಸಂಚಾರ ಅವಧಿ 35 ರಿಂದ 45 ನಿಮಿಷ ಇರಲಿದೆ. ಒಟ್ಟು 16 ನಿಲ್ದಾಣಗಳು 3 ಮೆಟ್ರೋ ಲೈನ್‌ಗೆ ಸಂಪರ್ಕ ಕಲ್ಪಿಸುತ್ತೆ. ಹಸಿರು, ಗುಲಾಬಿ, ನೀಲಿ ಮಾರ್ಗವನ್ನು ಯೆಲ್ಲೋ ಲೈನ್ ಸಂಪರ್ಕಿಸುತ್ತೆ. ಆರಂಭದಲ್ಲಿ ಪ್ರತೀ 30 ನಿಮಿಷಕ್ಕೊಮ್ಮೆ ರೈಲು ಸಂಚರಿಸಲಿದೆ. ಕನಿಷ್ಠ ದರ 10 ರೂಪಾಯಿಂದ ಗರಿಷ್ಠ 60 ರೂಪಾಯಿವರೆಗೆ ಟಿಕೆಟ್ ದರವಿದೆ. ಬರೋಬ್ಬರಿ 8ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಿದ್ದು, ಸಿಲ್ಕ್‌ಬೋರ್ಡ್ ಟ್ರಾಫಿಕ್‌ ಸಮಸ್ಯೆ ಬಹುಮಟ್ಟಿಗೆ ನಿವಾರಣೆಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:16 am, Mon, 11 August 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!