AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಿಕ್ ಬಸ್‌ ಕಂಪನಿಗಳಿಗೆ ಬಿಎಂಟಿಸಿಯಿಂದ ಬರೋಬ್ಬರಿ 25 ಕೋಟಿ ರೂ. ದಂಡ!

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳಿಂದ ಬೆಂಗಳೂರಿನಲ್ಲಿ ಅಪಘಾತಗಳು ಮತ್ತು ಬ್ರೇಕ್‌ಡೌನ್‌ಗಳು ಹೆಚ್ಚಾಗಿವೆ. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳಪೆ ಸೇವೆ ಮತ್ತು ಒಪ್ಪಂದ ಉಲ್ಲಂಘನೆಗಾಗಿ ಬಿಎಂಟಿಸಿ ನಾಲ್ಕು ಖಾಸಗಿ ಕಂಪನಿಗಳಿಗೆ 25 ಕೋಟಿ ರೂ.ಗೂ ಹೆಚ್ಚು ದಂಡ ವಿಧಿಸಿದೆ. ಸುರಕ್ಷತೆ ಮತ್ತು ಚಾಲಕರ ನಿರ್ಲಕ್ಷ್ಯದ ಬಗ್ಗೆ ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಎಲೆಕ್ಟ್ರಿಕ್ ಬಸ್‌ ಕಂಪನಿಗಳಿಗೆ ಬಿಎಂಟಿಸಿಯಿಂದ ಬರೋಬ್ಬರಿ 25 ಕೋಟಿ ರೂ. ದಂಡ!
ಎಲೆಕ್ಟ್ರಿಕ್ ಬಸ್‌ ಕಂಪನಿಗಳಿಗೆ ಬಿಎಂಟಿಸಿಯಿಂದ ಬರೋಬ್ಬರಿ 25 ಕೋಟಿ ದಂಡ
Kiran Surya
| Updated By: ಭಾವನಾ ಹೆಗಡೆ|

Updated on: Nov 28, 2025 | 10:36 AM

Share

ಬೆಂಗಳೂರು, ನವೆಂಬರ್ 28:  ಬೆಂಗಳೂರು (Bengaluru) ನಗರದಲ್ಲಿ ದಿನದಿಂದ ದಿನಕ್ಕೆ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ಸುಗಳಿಂದ ಆಕ್ಸಿಡೆಂಟ್, ಬ್ರೇಕ್ ಡೌನ್ ಮುಂತಾದ ಸಮಸ್ಯೆಗಳು ಉಂಟಾಗುತ್ತಿದ್ದು, ಪ್ರಯಾಣಿಕರಿಂದ ಹಲವು ಆರೋಪಗಳು ಕೇಳಿ ಬಂದಿವೆ. ಇದೇ ಕಾರಣಕ್ಕೆ ಬಿಎಂಟಿಸಿ ನಿಗಮ ಎಲೆಕ್ಟ್ರಿಕ್ ಬಸ್ ಕಂಪನಿಗಳಿಗೆ ಬರೋಬ್ಬರಿ 25 ಕೋಟಿ ರುಪಾಯಿ ದಂಡ ಹಾಕಲು ಮುಂದಾಗಿದೆ.

ನಾಲ್ಕು ಖಾಸಗಿ ಸಂಸ್ಥೆಗಳಿಗೆ ದಂಡ ಹಾಕಿದ BMTC

ನಗರದಲ್ಲಿ ಎಲೆಕ್ಟ್ರಿಕ್ ಬಸ್​ಗಳಿಂದ ಆಕ್ಸಿಡೆಂಟ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬ್ರೇಕ್ ಡೌನ್, ಬ್ಯಾಟರಿ ಡೌನ್ ಸಮಸ್ಯೆಗಳಿಂದ ನಡುರೋಡಲ್ಲಿ ಬಸ್​ಗಳು ಕೆಟ್ಟು ನಿಲ್ಲುತ್ತಿದ್ದು, ಇದರಿಂದ ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಒಪ್ಪಂದದಂತೆ ಕಾರ್ಯನಿರ್ವಹಿಸದ ನಾಲ್ಕು ಖಾಸಗಿ ಸಂಸ್ಥೆಗಳಿಗೆ 25 ಕೋಟಿಗೂ ಹೆಚ್ಚು ದಂಡ ಹಾಕಲಾಗಿದೆ ಎಂದು ತಿಳಿದು ಬಂದಿದೆ.ಇದೀಗ ಇವಿ ಬಸ್‌ ಚಾಲಕರಿಗೆ ಬಿಎಂಟಿಸಿಯೇ ತರಬೇತಿ ನೀಡುತ್ತಿದ್ದು, ವೇತನ ಪಾವತಿಗೆ ನಿರ್ದಿಷ್ಟ ದಿನಾಂಕವನ್ನೂ ನಿಗದಿಮಾಡಿದೆ.

ಎನ್‌ಟಿಪಿಸಿ ವಿದ್ಯುತ್‌ ವ್ಯಾಪಾರ ನಿಗಮ ಲಿಮಿಟೆಡ್ ಗೆ 9.80 ಕೋಟಿ ರೂ. ದಂಡ, ಸ್ವಿಚ್‌ ಮೊಬಿಲಿಟಿ ಸಂಸ್ಥೆಗೆ 3 ಕೋಟಿ ರೂ. ದಂಡ ವಿಧಿಸಿದ ಬಿಎಂಟಿಸಿ, ಟಿಎಂಎಲ್‌ ಸ್ಮಾರ್ಟ್‌ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್‌ ಲಿಮಿಟೆಡ್ಗೆ 11.99 ಕೋಟಿ ರೂ. ಓಎಚ್‌ಎಂ ಗ್ಲೋಬಲ್‌ ಮೊಬಿಲಿಟಿ ಪ್ರೈವೆಟ್‌ ಲಿಮಿಟೆಡ್‌ಗೆ 67 ಲಕ್ಷ ರೂ. ದಂಡ ಹಾಕಿದೆ ಎಂದು ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ತಿಳಿಸಿದ್ದಾರೆ.

ಇವಿ ಬಸ್​ನಲ್ಲಿ ಸಂಚಾರ ಮಾಡಲು ಭಯ ಆಗುತ್ತದೆ ಎಂದ ಪ್ರಯಾಣಿಕರು

ಈ ಎಲೆಕ್ಟ್ರಿಕ್ ಬಸ್ಗಳು ಜಿಸಿಸಿ (Gross Cost Contracting) ಮಾಡೆಲ್‌ ಅಡಿಯಲ್ಲಿ ಸಂಚಾರ ಮಾಡುತ್ತಿವೆ. 12 ವರ್ಷಗಳ ಅವಧಿಗೆ ಜಿಸಿಸಿಗೆ ಗುತ್ತಿಗೆ ನೀಡಲಾಗಿದ್ದು, ಒಂದು ಕಿ.ಮೀ ನಾನ್ ಎಸಿ ಗೆ 41 ರೂ., ಎಸಿ ಬಸ್ ಗೆ 65 ರೂ.ವರೆಗೆ ಬಿಎಂಟಿಸಿ ನಿಗಮ ಎಲೆಕ್ಟ್ರಿಕ್ ಬಸ್ ಕಂಪನಿಗೆ ಹಣ ನೀಡುತ್ತಿದ್ದು, ಬಿಎಂಟಿಸಿ ನಿಗಮದಿಂದ ಕಂಡಕ್ಟರ್ ಮತ್ತು ಎಲೆಕ್ಟ್ರಿಕ್ ಬಸ್ ಕಂಪನಿಗಳಿಂದಲೇ ಡ್ರೈವರ್ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ ಬೆಂಗಳೂರು: ಬಿಎಂಟಿಸಿ ಚಾಲಕರ ಹೃದಯ ಹಿಂಡುತ್ತಿದೆಯೇ ಅಧಿಕಾರಿಗಳ ಒತ್ತಡ?

ಈ ಬಗ್ಗೆ ಮಾತನಾಡಿದ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ ಪ್ರಯಾಣಿಕರೊಬ್ಬರು, ಹೆಣ್ಣೂರಿನಿಂದ ಹೆಬ್ಬಾಳಕ್ಕೆ ಎಲೆಕ್ಟ್ರಿಕ್ ಬಸ್​ನಲ್ಲಿ ಪ್ರಯಾಣ ಮಾಡುವಾಗ ಬೆಂಕಿ ಕಾಣಿಸಿಕೊಂಡಿತ್ತು. ಅದೃಷವಶಾತ್ ಮಳೆ ಬರುತ್ತಿದ್ದರಿಂದ ಯಾವುದೇ ಅನಾಹುತವಾಗಿಲ್ಲ. ಬಿಎಂಟಿಸಿ ನಿಗಮ ಎಲೆಕ್ಟ್ರಿಕ್ ಬಸ್​ಗಳ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ತುಂಬಾ ವೇಗವಾಗಿ ಮತ್ತು ರ್ಯಾಷ್ ಡ್ರೈವಿಂಗ್ ಮಾಡ್ತಾರೆ. ಹಾಗಾಗಿ ಎಲೆಕ್ಟ್ರಿಕ್ ಬಸ್​ನಲ್ಲಿ ಸಂಚಾರ ಮಾಡಲು ಭಯ ಆಗುತ್ತದೆ. ಯಾವಾಗ ಬ್ಲ್ಯಾಸ್ಟ್ ಆಗತ್ತದೋ ಎನ್ನಿಸುತ್ತದೆ ಎಂದು ಹಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ