AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಪರಮೇಶ್ವರ​ ಒಡೆತನದ ಕಾಲೇಜು ಸೇರಿ, RTO ಕಚೇರಿಗಳಿಗೆ ಬಾಂಬ್​​ ಬೆದರಿಕೆ

ಗೃಹ ಸಚಿವರ ಸಿದ್ದಾರ್ಥ ಮೆಡಿಕಲ್ ಕಾಲೇಜು ಹಾಗೂ ಬೆಂಗಳೂರು, ಕೋಲಾರದ RTO ಕಚೇರಿಗಳಿಗೆ ಇಮೇಲ್ ಮೂಲಕ ಬಾಂಬ್​​ ಬೆದರಿಕೆ ಸಂದೇಶಗಳು ಬಂದಿವೆ. ಸ್ಫೋಟದ ಎಚ್ಚರಿಕೆ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇಂತಹ ಘಟನೆಗಳು ಪದೇ ಪದೇ ವರದಿಯಾಗುತ್ತಿರುವುದು ರಾಜ್ಯದಲ್ಲಿ ಆತಂಕ ಮೂಡಿಸಿದೆ.

ಗೃಹ ಸಚಿವ ಪರಮೇಶ್ವರ​ ಒಡೆತನದ ಕಾಲೇಜು ಸೇರಿ, RTO ಕಚೇರಿಗಳಿಗೆ ಬಾಂಬ್​​ ಬೆದರಿಕೆ
ಸಾಂದರ್ಭಿಕ ಚಿತ್ರImage Credit source: dem.fiu.edu
ಪ್ರಸನ್ನ ಹೆಗಡೆ
|

Updated on: Mar 27, 2026 | 3:03 PM

Share

ಬೆಂಗಳೂರು, ಮಾರ್ಚ್​​ 27: ಗೃಹಸಚಿವ ಡಾ. ಜಿ. ಪರಮೇಶ್ವರ್​​ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜು ಸೇರಿ ಕೋಲಾರ ಮತ್ತು ಬೆಂಗಳೂರಿನ ವಿವಿಧ ಆರ್​​ಟಿಒ ಕಚೇರಿಗಳಿಗೆ ದುಷ್ಕರ್ಮಿಗಳು ಬಾಂಬ್​​ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಇಮೇಲ್​​ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ನಮ್ಮ ಸಹೋದರ ಡಾ.ಅಬ್ದುಲ್​ಗೆ ಅವಮಾನಮಾಡಿರುವ ಹಿನ್ನೆಲೆ 15 ಸಿಲಿಂಡರ್ ತುಂಬಿರುವ ಐಇಡಿ ಪ್ಲಾಂಟ್ ಮಾಡಿದ್ದೇವೆ. ಇಸ್ಲಾಮಿಕ್ ಪ್ರಾರ್ಥನಾ ಸಮಯ ಮಧ್ಯಾಹ್ನ 2 ಗಂಟೆಗೆ SSIMST ಉಡಾಯಿಸಲಾಗುವುದು. ನಾವು ಕೇವಲ ಕಟ್ಟಡವನ್ನು ಮಾತ್ರ ನಾಶಮಾಡಲು ಮುಂದಾಗಿದ್ದು, ಹೀಗಾಗಿ ಸಾಧ್ಯವಾದರೆ ಎಲ್ಲಾ ವಿದ್ಯಾರ್ಥಿಗಳನ್ನು ಹೊರಗಡೆ ಕಳಿಸಿ ಎಂದು ತಿಳಿಸಲಾಗಿದೆ. ಈ ಹಿನ್ನೆಲೆ ಬಾಂಬ್​​ ನಿಷ್ಕ್ರಿಯ ದಳ, ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಬೆಂಗಳೂರಿನ ಆರ್​ಟಿಒ ಕಚೇರಿಗಳಿಗೂ ಗಾಯತ್ರಿ_ಶಾಬಾಜ್@Hotmail.com ಐಡಿಯಿಂದ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದೆ. ಯಶವಂತಪುರ, ರಾಜಾಜಿನಗರ, ಕೋರಮಂಗಲ ಸೇರಿ ನಗರದ ಹಲವು ಆರ್​ಟಿಒ ಕಚೇರಿಗಳನ್ನು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟಿಸುವುದಾಗಿ ಇ-ಮೇಲ್​ ಕಳುಹಿಸಲಾಗಿದೆ. 10 ಬಾಂಬ್ ಸ್ಫೋಟಗೊಳ್ಳುತ್ತೆಂದು ದುಷ್ಕರ್ಮಿಗಳು ಎಚ್ಚರಿಸಿದ್ದಾರೆ. ಬಾಂಬ್​​ ಬೆದರಿಕೆ ಇ-ಮೇಲ್​​ ಬಂದಿರುವ ಹಿನ್ನೆಲೆ ಕೋರಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್. ದೀಪಕ್ ಹೆಚ್ಎಸ್ಆರ್ ಲೇಔಟ್ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕಚೇರಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ನೂರಾರು ಸಾರ್ವಜನಿಕರು ವಿವಿಧ ಕೆಲಸ ಕಾರ್ಯಗಳಿಗಾಗಿ ಬರುತ್ತಾರೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ; ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ

ಅಪರಿಚಿತ ಇ-ಮೇಲ್​ ಐಡಿಯಿಂದ ಕೋಲಾರ ಆರ್​ಟಿಒ ಕಚೇರಿಗೂ ಇದೇ ರೀತಿಯ ಬೆದರಿಕೆ ಬಂದಿದೆ. ವೈದ್ಯಕೀಯ ಕಾಲೇಜಿನಲ್ಲಿ ಪ್ರೊಫೆಸರ್ ಅಬ್ದುಲ್ ಮೊಹ್ಮದ್​​ಗೆ ಮತ್ತು ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್ ಬೆಂಬಲಿಗರಿಗೆ ಅವಮಾನ ಮಾಡಿರುವ ಕಾರಣ 10 ವಿಷದ ಬಾಂಬ್​​ಗಳನ್ನು ಸ್ಫೋಟಿಸೋದಾಗಿ ತಿಳಿಸಲಾಗಿದೆ. ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಬಾಂಬ್​​ ಬೆದರಿಕೆ ಪ್ರಕರಣಗಳು ಮೇಲಿಂದ ಮೇಲೆ ರಾಜ್ಯದಲ್ಲಿ ವರದಿಯಾಗ್ತಿರೋದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ