ಬೆಂಗಳೂರು: ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುತ್ತೇವೆ ಎಂದ ದುಷ್ಕರ್ಮಿಗಳು

Bomb Threat to Bengaluru College: ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ಪ್ರತಿಷ್ಠಿತ ಆಚಾರ್ಯ ಕಾಲೇಜಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಅಲ್ಲದೆ, ಪ್ರಾಂಶುಪಾಲರಿಗೆ ಕೊಲೆ ಬೆದರಿಕೆಯನ್ನೂ ಹಾಕಲಾಗಿದೆ. ಸದ್ಯ ಸೋಲದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಬ್ ಬೆದರಿಕೆ ಇ-ಮೇಲ್ ಸಂಬಂಧ ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುತ್ತೇವೆ ಎಂದ ದುಷ್ಕರ್ಮಿಗಳು
ಬೆಂಗಳೂರು: ಆಚಾರ್ಯ ಕಾಲೇಜಿಗೆ ಬಾಂಬ್ ಬೆದರಿಕೆ

Updated on: Apr 29, 2025 | 2:15 PM

ನೆಲಮಂಗಲ, ಏಪ್ರಿಲ್ 29: ಬೆಂಗಳೂರಿನ ಪ್ರತಿಷ್ಠಿತ ಆಚಾರ್ಯ ಕಾಲೇಜಿನಲ್ಲಿ (Acharya College) ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ (Bomb Threat) ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಜತೆಗೆ, ಕಾಲೇಜು ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಚಾರ್ಯ ಕಾಲೇಜಿನ ಅಧಿಕೃತ ಇ-ಮೇಲ್ ಪರಿಶೀಲನೆ ವೇಳೆ ಬೆರಿಕೆ ಸಂದೇಶ ಗಮನಕ್ಕೆ ಬಂದಿದೆ. ಸದ್ಯ ಕಾಲೇಜಿನ ಆಡಳಿತ ಮಂಡಳಿ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದೆ.

ಘಟನೆ ಸಂಬಂಧ ಎನ್​ಸಿಆರ್ ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಪೊಲೀಸರು ನಂತರ ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲಿಸಿದ್ದಾರೆ. ಸದ್ಯ ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರು ವಾರಾಣಸಿ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂಬ ಹುಸಿ ಬೆದರಿಕೆ ಬಂದ ಎರಡೇ ದಿನಗಳಲ್ಲಿ ಕಾಲೇಜಿಗೆ ಬೆದರಿಕೆ ಬಂದಿದೆ.  ವಾರಣಾಸಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಕೆನಡಾದ ಪ್ರಜೆಯೊಬ್ಬರನ್ನು ಬಂಧಿಸಲಾಗಿತ್ತು. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಕೆನಡಾದ ಪ್ರಜೆ ನಿಶಾಂತ್ ಯೋಹಾಂತನ್ ಎಂಬವರು ಇದ್ದಕ್ಕಿದ್ದಂತೆ ತಮ್ಮ ಬ್ಯಾಗ್ ಒಳಗೆ ಬಾಂಬ್ ಇದೆ ಎಂದು ಕೂಗಿದ್ದರು. ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇಯಲ್ಲಿದ್ದಾಗ ಆತಂಕ ಅವರು ಹಾಗೆ ಕೂಗಿಕೊಂಡಿದ್ದರಿಂದ ಆತಂಕದ ಸನ್ನಿವೇಶ ಸೃಷ್ಟಿಯಾಗಿತ್ತು. ನಂತರ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿಸಿ ಪ್ರಯಾಣಿಕರ ಲಗೇಜ್‌ಗಳ ಜೊತೆಗೆ ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿತ್ತು. ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟರೂ, ಅದರಿಂದಾಗಿ ಕಾರ್ಯಾಚರಣೆಗೆ ಅಡಚಣೆಯಾಗಿತ್ತು.

ಇದನ್ನೂ ಓದಿ
ಬನ್ನೇರುಘಟ್ಟ ಜೂ, ಸಫಾರಿಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
ಕೇರಳ ಸಿಎಂ ವಿಜಯನ್ ಕಚೇರಿ, ನಿವಾಸ, ಕೊಚ್ಚಿ ಏರ್​ಪೋರ್ಟ್​ಗೆ ಬಾಂಬ್ ಬೆದರಿಕೆ
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಎಚ್ಚರದಿಂದಿರಿ

ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಬೆಂಗಳೂರಿನಲ್ಲಿ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿವೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಚೇರಿ, ನಿವಾಸ ಹಾಗೂ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಸೋಮವಾರವಷ್ಟೇ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ತಿರುವನಂತಪುರಂನಲ್ಲಿರುವ ಮುಖ್ಯಮಂತ್ರಿ ಕಚೇರಿ ಮತ್ತು ನಿವಾಸಕ್ಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು.

ವರದಿ: ಮಂಜುನಾಥ್, ಟಿವಿ9

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 2:00 pm, Tue, 29 April 25