AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹುಟ್ಟುಹಬ್ಬದಂದೇ ಪ್ರಾಣ ಬಿಟ್ಟ ಬಾಲಕ, ಪೋಷಕರ ಆಕ್ರಂದನ

ಬೆಂಗಳೂರಿನ ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ದುರಂತ ರಸ್ತೆ ಅಪಘಾತದಲ್ಲಿ 12 ವರ್ಷದ ಭಾನು ತೇಜ ಎಂಬ ಬಾಲಕ ಮೃತಪಟ್ಟಿದ್ದಾನೆ. ಅವನ ಹುಟ್ಟುಹಬ್ಬದ ದಿನವೇ ಈ ಅವಘಡ ಸಂಭವಿಸಿದೆ. ಐಷರ್ ಟ್ರಕ್ ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅನಾಹುತ ಸಂಭವಿಸಿದೆ. ಟ್ರಕ್ ಚಾಲಕ ಪರಾರಿಯಾಗಿದ್ದಾನೆ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಹುಟ್ಟುಹಬ್ಬದಂದೇ ಪ್ರಾಣ ಬಿಟ್ಟ ಬಾಲಕ, ಪೋಷಕರ ಆಕ್ರಂದನ
ಬಾಲಕ ಭಾನು ತೇಜ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on:Jan 12, 2025 | 1:17 PM

Share

ಬೆಂಗಳೂರು, ಜನವರಿ 12: ಬೆಂಗಳೂರಿನ (Bengaluru) ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟಿದ್ದು, ಹುಟ್ಟು ಹಬ್ಬದಂದೇ ಮಸಣ ಸೇರಿದ್ದಾನೆ. ಭಾನು ತೇಜ (12) ಮೃತ ಬಾಲಕ.

ಆಂಧ್ರ ಪ್ರದೇಶದ ಚಿತ್ತೂರು ಮೂಲದವರಾದ ರವಿ ಹಾಗೂ ಸುಮಾ ದಂಪತಿ ಪುತ್ರ ಭಾನು ತೇಜ ಆರ್.ಟಿ.ನಗರ ಸತ್ಯಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವೇದ ಕಲಿಯಲು ಗುರುಗಳ ಜೊತೆಗೆ ವಾಸವಾಗಿದ್ದನು. ಶನಿವಾರ ಭಾನು ತೇಜನ ಹುಟ್ಟುಹಬ್ಬವಿತ್ತು. ಹುಟ್ಟು ಹಬ್ಬ ಆಚರಣೆಗಾಗಿ ಹೊರಮಾವುನಲ್ಲಿರುವ ತನ್ನ ಅಕ್ಕನ ಮನೆಗೆ ಹೊಗಿದ್ದನು. ಹುಟ್ಟು ಹಬ್ಬ ಆಚರಣೆ ಬಳಿಕ ರಾತ್ರಿ 11.20ರ ಸುಮಾರಿಗೆ ಅಣ್ಣ ಚಕ್ರಧರಣ್ ಜೊತೆಗೆ ಬೈಕ್​ನಲ್ಲಿ ವಾಪಸ್​ ಆರ್​ಟಿ ನಗರದತ್ತ ತೆರಳುತ್ತಿದ್ದನು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಟನಲ್ ರಸ್ತೆಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚೆಂದ ತಜ್ಞರು

ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ಐಷರ್ ಟ್ರಕ್​ವೊಂದು ಹಿಂಬದಿಯಿಂದ ಭಾನು ತೇಜ್​ ಇದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಾನು ತೇಜ್​ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬಾಲಕ ತಲೆಯ ಮೇಲೆ ಟ್ರಕ್​ನ ಎರಡು ಚಕ್ರಗಳು ಹಿರಿದಿವೆ.​ ಭಾನು ತೇಜ್​ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಕ್ರಧರಣ್​ಗೆ ಸಣ್ಣ-ಪುಟ್ಟ ಗಾಯಗಳಾವಿವೆ. ಟ್ರಕ್ ಚಾಲಕ ಪರಾರಿಯಾಗಿದ್ದು, ಹೆಣ್ಣೂರು ಟ್ರಾಫಿಕ್ ಠಾಣೆ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಭಾನು ತೇಜಾ ಮಾವ ಆನಂದ್ ಮಾತನಾಡಿ, ಭಾನು ತೇಜಾ ತಂದೆಗೆ ಮಗು ವೇದ ಕಲಿಯಬೇಕೆಂಬ ಆಸೆ ಇತ್ತು. ಒಂದು ತಿಂಗಳ ಹಿಂದೆ ವೇದ ಕಲಿಯಲು ಮಗುವನ್ನ ಬಿಟ್ಟಿದ್ದರು. ಶನಿವಾರ ಮಗುವಿನ ಹುಟ್ಟುಹಬ್ಬವಿತ್ತು. ಅವನು ಅಕ್ಕನ ಮನೆಗೆ ಬಂದು ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದನು. ಊಟ ಮಾಡಿ ಸಂಜೆ ಹೊರಡಬೇಕಾದರೆ ಅವಘಡ ನಡೆದಿದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Sun, 12 January 25

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?