ಬೆಂಗಳೂರಿನ ಅರಮನೆ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರ 2 ದಿನ ನಿಯಂತ್ರಣ, ವಾಹನ ನಿಲುಗಡೆ ನಿಷೇಧ

Bengaluru traffic advisory: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 18 ಮತ್ತು 19 ರಂದು ನಡೆಯುವ ಬ್ರಾಹ್ಮಣ ಮಹಾಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಂಚಾರ ನಿಯಂತ್ರಣ ಜಾರಿಯಲ್ಲಿದೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬಸ್, ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ವಿಭಿನ್ನ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ನಿಗದಿಪಡಿಸಲಾಗಿದೆ. ವಾಹನ ನಿಲುಗಡೆಗೆ ನಿರ್ದಿಷ್ಟ ಸ್ಥಳಗಳನ್ನು ಗುರುತು ಮಾಡಲಾಗಿದೆ. ಸಂಚಾರ ನಿಯಮಾವಳಿಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ಬೆಂಗಳೂರಿನ ಅರಮನೆ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರ 2 ದಿನ ನಿಯಂತ್ರಣ, ವಾಹನ ನಿಲುಗಡೆ ನಿಷೇಧ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jan 18, 2025 | 7:54 AM

ಬೆಂಗಳೂರು, ಜನವರಿ 18: ಅರಮನೆ ಮೈದಾನದಲ್ಲಿ (Palace Ground) ಶನಿವಾರ ಮತ್ತು ಭಾನುವಾರ (ಜ.18 ಮತ್ತು 19) ರಂದು ಎರಡು ದಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವತಿಯಿಂದ “ಬ್ರಾಹ್ಮಣ ಮಹಾ ಸಮ್ಮೇಳನ” ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹಾಗೂ ಇತರೆ ಸಚಿವರುಗಳು, ಗಣ್ಯರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 10 ಸಾವಿರದಿಂದ ರಿಂದ 15 ಸಾವಿರ ಜನರು ಆಗಮಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಅರಮನೆ ಮೈದಾನ ರಸ್ತೆ ಮತ್ತು ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಿಯಂತ್ರಣ ಮಾಡಿದ್ದಾರೆ. ಹಾಗೇ, ಪರ್ಯಾಯ ಮಾರ್ಗ ಸೂಚಿಸಿದ್ದಾರೆ.

ಬಸ್ಸುಗಳಲ್ಲಿ ಬರುವವರು ಬಳಸಬೇಕಾದ ಮಾರ್ಗ:

  • ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಕರ್​ಮ್ಯಾನರ್ ಜಂಕ್ಷನ್-ಬಿ.ಡಿ.ಎ ಅಪ್‌ರ್ಯಾಂವ್-ರಮಣಮಹರ್ಷಿ ರಸ್ತೆಯ ಪಿ.ಜಿ.ಹಳ್ಳಿ ಬಸ್ ನಿಲ್ದಾಣ-ಕಾವೇರಿ ಜಂಕ್ಷನ್ ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್ ಬಲ ಯೂತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
  • ವಾಪಾಸು ಹೋಗುವಾಗ ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ಅಮಾನುಲ್ಲಾ ಖಾನ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು, ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
  • ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಕ್ರಿ ಸರ್ಕಲ್ ಅಂಡರ್ ಪಾಸ್‌ನಲ್ಲಿ ಬಂದು ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್​ ಮಾಡಿ, ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
  • ವಾಪಾಸ್ಸು ಹೋಗುವಾಗ ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ಅಮಾನುಲ್ಲಾ ಖಾನ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು, ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
  • ಯಶವಂತಪುರ ಕಡೆಯಿಂದ ಬರುವ ವಾಹನಗಳು ಸರ್.ಸಿ.ವಿ.ರಾಮನ್ ರಸ್ತೆಯ ಬಿ.ಹೆಚ್.ಇ.ಎಲ್ ಸರ್ಕಲ್-ಸದಾಶಿವನಗರ ಪಿ.ಎಸ್ ಜಂಕ್ಷನ್-ಮೇಕ್ರಿ ಸರ್ಕಲ್ ಬಲತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-01 ಕೃಷ್ಣ ವಿಹಾರ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಸ್ಥಳ ತಲುಪಬಹುದು.
  • ವಾಪಾಸ್ಸು ಹೋಗುವಾಗ ಗೇಟ್ ನಂ- 01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ಅಮಾನುಲ್ಲಾ ಖಾನ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು, ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
  • ಕಂಟೋನ್‌ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಯಿಂದ ಬರುವ ವಾಹನಗಳು ಜಯಮಹಲ್ ರಸ್ತೆಯಲ್ಲಿ ಸಾಗಿ ಟಿ.ವಿ.ಟವರ್ ಜಂಕ್ಷನ್-ಮೇಕ್ರಿ ಸರ್ಕಲ್ ಎಡತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
  • ವಾಪಾಸ್ಸು ಹೋಗುವಾಗ ಗೇಟ್ ನಂ-01 ಕೃಷ್ಣ-ವಿಹಾರ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ಅಮಾನುಲ್ಲಾ ಖಾನ್ ಗೇಟ್ ಜಯಮಹಲ್ ರಸ್ತೆಯಲ್ಲಿ, ಹೊರಬಂದು ಕಂಟೋನ್‌ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಗೆ ಹೋಗಬಹುದಾಗಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಟೆಂಪೋ ಟ್ರಾವೆಲರ್, ಕಾರುಗಳು ಮತ್ತು ದ್ವಿಚಕ್ರ ವಾಹನಗಳಲ್ಲಿ ಬರುವವರು ಬಳಸಬೇಕಾದ ಮಾರ್ಗ

  • ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಕರ್​ಮ್ಯಾನರ್ ಜಂಕ್ಷನ್‌-ಬಿ.ಡಿ.ಎ ರ್ಯಾಂಪ್​-ರಮಣಮಹರ್ಷಿ ರಸ್ತೆಯ ಹಿಜೆ ಹಳ್ಳಿ ಬಸ್ ನಿಲ್ದಾಣ-ಕಾವೇರಿ ಜಂಕ್ಷನ್ ಮೇತ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್ ಬಲ ಯೂಟರ್ನ್​​ ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ, ಗೇಟ್ ನಂ-01 ತ್ರಿಮರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
  • ವಾಪಾಸ್ಸು ಹೋಗುವಾಗ ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ಅಮಾನುಲ್ಲಾ ಖಾನ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು, ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
  • ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಕ್ರಿ ಸರ್ಕಲ್ ಅಂಡರ್ ಪಾಸ್‌ನಲ್ಲಿ ಬಂದು- ಗೇಟ್ ನಂ 01 ಕೃಷ್ಣ ವಿಹಾರ ಅರಮನೆ ಮೈದಾನದಲ್ಲಿ ವಾಹನಗಳನ್ನು ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ಸೂಚಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
  • ವಾಪಾಸ್ಸು ಹೋಗುವಾಗ ಗೇಟ್ ನಂ-01 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ಅಮಾನುಲ್ಲಾ ಖಾನ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು. ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
  • ಯಶವಂತಪುರ ಕಡೆಯಿಂದ ಬರುವ ವಾಹನಗಳು ಸರ್.ಸಿ.ವಿ.ರಾಮನ್ ರಸ್ತೆಯ ಬಿಹೆಚ್​ಇಎಲ್​ ಸರ್ಕಲ್-ಸದಾಶಿವನಗರ ಪಿ.ಎಸ್ ಜಂಕ್ಷನ್-ಮೇಕ್ರಿ ಸರ್ಕಲ್ ಬಲತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ನಂ-01 ಕೃಷ್ಣವಿಹಾರ ಅರಮನೆ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
  • ವಾಪಾಸ್ಸು ಹೋಗುವಾಗ ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು. ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
  • ಕಂಟೋನ್‌ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಯಿಂದ ಬರುವ ವಾಹನಗಳು ಜಯಮಹಲ್ ರಸ್ತೆಯಲ್ಲಿ ಸಾಗಿ ಟಿ.ವಿ.ಟವರ್ ಜಂಕ್ಷನ್-ಮೇಕ್ರಿ ಸರ್ಕಲ್ ಎಡ ತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ- ಅರಮನೆ ಮೈದಾನದಲ್ಲಿ ವಾಹನಗಳನ್ನು ಗೇಟ್ ನಂ-01 ಕೃಷ್ಣವಿಹಾರ ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
  • ವಾಪಾಸ್ಸು ಹೋಗುವಾಗ ಗೇಟ್ ಗೇಟ್ ನಂ-01 ಕೃಷ್ಣ ವಿಹಾರ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ಗೇಟ್ ಅಮಾನುಲ್ಲಾ ಖಾನ್ ಗೇಟ್ ಜಯಮಹಲ್ ರಸ್ತೆಯಲ್ಲಿ, ಹೊರಬಂದು ಕಂಟೋನ್ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಗೆ ಹೋಗಬಹುದಾಗಿರುತ್ತದೆ.

ಕಾರ್ಯಕ್ರಮ ಹೊರತುಪಡಿಸಿ ಇತರೆ ಸ್ಥಳಗಳಿಗೆ ವಾಹನ ಸವಾರರು ಬಳಸಬೇಕಾದ ಬದಲೀ ಮಾರ್ಗ

  • ಅರಮನೆ ರಸ್ತೆ : ಮೈಸೂರು ಬ್ಯಾಂಕ್ ಸರ್ಕಲ್‌ನಿಂದ ವಸಂತನಗರ ಅಂಡರ್‌ಪಾಸ್​ವರೆಗೆ
  • ಎಂ.ವಿ.ಜಯರಾಮರಸ್ತೆ : ಅರಮನೆರಸ್ತೆ, ಬಿ.ಡಿ.ಎ.ಜಂಕ್ಷನ್ ನಿಂದ ಚಕ್ರವರ್ತಿ ಲೇಔಟ್​ ಸೇರಿದಂತೆ ವಸಂತನಗರ ಅಂಡರ್ ಪಾಸ್ ನಿಂದ ಹಳೆ ಉದಯ ಟಿ.ವಿ. ಜಂಕ್ಷನ್ ವರೆಗೆ. (ಎರಡು ದಿಕ್ಕಿನಲ್ಲಿ)
  • ಬಳ್ಳಾರಿ ರಸ್ತೆ: ಎಲ್.ಆರ್.ಡಿ.ಇ. ಯಿಂದ ಹೆಬ್ಬಾಳವರೆಗೆ
  • ಕನ್ನಿಂಗ್ ಹ್ಯಾಂ ರಸ್ತೆ: ಬಾಳೇಕುಂದ್ರಿ ಸರ್ಕಲ್‌ನಿಂದ ಲಿ ಮೆರಿಡಿಯನ್ ಅಂಡರ್​​ ಪಾಸ್​​ವರೆಗೆ
  • ಮಿಲ್ಲರ್​ ರಸ್ತೆ: ಹಳೆ ಉದಯ ಟಿವಿ ಜಂಕ್ಷನ್​ನಿಂದ ಎಲ್.ಆ‌ರ್.ಡಿ.ಇ ಜಂಕ್ಷನ್​ವರೆಗೆ.
  • ಜಯಮಹಲ್‌ ರಸ್ತೆ : ಜಯಮಹಲ್‌ ರಸ್ತೆ ಹಾಗೂ ಬೆಂಗಳೂರು ಅರಮನೆಯ ಸುತ್ತಮುತ್ತಲ ರಸ್ತೆಗಳು
  • ಯಶವಂತಪುರ ಮತ್ತು ಮೇಖಿ ಸರ್ಕಲ್ ರಸ್ತೆ : ಯಶವಂತಪುರ-ಟಾಟಾ ವಿಜ್ಞಾನ ಸಂಸ್ಥೆ-ಮೇಖಿ ಸರ್ಕಲ್‌ವರೆಗೆ

ವಾಹನ ನಿಲುಗಡೆ ನಿಷೇಧ ಮಾಡಿರುವ ರಸ್ತೆಗಳು

ಪ್ಯಾಲೇಸ್‌ ರಸ್ತೆ, ಎಂ.ವಿ. ಜಯರಾಮರಸ್ತೆ, ಜಯಮಹಲ್ ರಸ್ತೆ, ಸಿ.ಎ. ರಾಮನ್ ರಸ್ತೆ, ವಸಂತನಗರರಸ್ತೆ, ರಮಣಮಹರ್ಷಿರಸ್ತೆ, ನಂದಿದುರ್ಗರಸ್ತೆ, ಬಳ್ಳಾರಿ ರಸ್ತೆ, ಮೌಂಟ್‌ ಕಾರ್ಮೆಲ್ ಮೇಖಿ ಸರ್ಕಲ್​ನಿಂದ ತರಳಬಾಳು ರಸ್ತೆ, ಕಾಲೇಜ್ ರಸ್ತೆ, ಯಶವಂತಪುರ ರಸ್ತೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?