AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಟೆಂಡರ್‌ನಲ್ಲಿ ₹660 ಕೋಟಿ ಅಕ್ರಮ ಆರೋಪ: ಇಡಿ, ಲೋಕಾಯುಕ್ತಕ್ಕೆ ಸಲ್ಲಿಕೆಯಾಯ್ತು ದೂರು

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ 33 ಪ್ಯಾಕೇಜ್‌ಗಳ ಟೆಂಡರ್‌ನಲ್ಲಿ ₹660 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಎನ್.ಆರ್. ರಮೇಶ್, ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ನಿಯಮಿತದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಟೆಂಡರ್‌ನಲ್ಲಿ ₹660 ಕೋಟಿ ಅಕ್ರಮ ಆರೋಪ: ಇಡಿ, ಲೋಕಾಯುಕ್ತಕ್ಕೆ ಸಲ್ಲಿಕೆಯಾಯ್ತು ದೂರು
ಸಾಂದರ್ಭಿಕ ಚಿತ್ರ
Shivaraj
| Edited By: |

Updated on: Nov 25, 2026 | 12:55 PM

Share

ಮುಖ್ಯಾಂಶಗಳು

  • ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಟೆಂಡರ್‌ನಲ್ಲಿ ₹660 ಕೋಟಿ ಅಕ್ರಮ ಆರೋಪ
  • ಐದು ನಗರ ಪಾಲಿಕೆಗಳಿಗೆ ₹90 ಕೋಟಿ ನಷ್ಟ ಆರೋಪ
  • ಟೆಂಡರ್ ಅಕ್ರಮ ತನಿಖೆಗೆ ಇಡಿ, ಲೋಕಾಯುಕ್ತಕ್ಕೆ ದೂರು

ಬೆಂಗಳೂರು, ನವೆಂಬರ್ 25: ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (BSWML) ವತಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಪ್ರದೇಶಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದಿರುವ ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ, ಬಿಜೆಪಿ ನಾಯಕ ಎನ್.ಆರ್. ರಮೇಶ್ ಅವರು ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತಕ್ಕೆ ದಾಖಲೆಗಳ ಸಹಿತ ದೂರು ಸಲ್ಲಿಸಿದ್ದಾರೆ.

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ಸಿಜಿಎಂ ಎಸ್.ವಿ. ರಾಜೇಶ್ ಹಾಗೂ ಡಿಜಿಎಂ-1 ಚಂದ್ರಶೇಖರ್ ವಿರುದ್ಧ ದೂರು ದಾಖಲಿಸಿರುವ ರಮೇಶ್, 33 ಪ್ಯಾಕೇಜ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ಸುಮಾರು ₹660 ಕೋಟಿ ವಂಚನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮದ ಆರೋಪ

ಟೆಂಡರ್ ಪ್ರಕ್ರಿಯೆಯಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ (EPF) ಇಲಾಖೆಯಲ್ಲಿ ಬಾಕಿ ಅಥವಾ ಡೀಫಾಲ್ಟ್ ಹೊಂದಿರುವ ಗುತ್ತಿಗೆದಾರರಿಗೂ ಟೆಂಡರ್ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಐದು ನಗರ ಪಾಲಿಕೆಗಳ ಆಯುಕ್ತರುಗಳು ಮೇಲ್ಮನವಿ ಸಲ್ಲಿಸಿದ್ದು, ಇದರಿಂದ ಪಾಲಿಕೆಗಳಿಗೆ ಸುಮಾರು ₹90 ಕೋಟಿ ನಷ್ಟ ಉಂಟಾಗಿದೆ ಎಂದು ರಮೇಶ್ ಆರೋಪಿಸಿದ್ದಾರೆ.

2026ರ ಜೂನ್ 4ರಂದು ಅಂಜುಂ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲೂ ಟೆಂಡರ್ ಪ್ರಕ್ರಿಯೆಯಿಂದ ಬೆಂಗಳೂರಿನ ನಾಗರಿಕರ ಮೇಲೆ ಸುಮಾರು ₹350 ಕೋಟಿ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ತಿಳಿಸಲಾಗಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ.

ಗುತ್ತಿಗೆದಾರರಿಗೆ ಕಾನೂನುಬಾಹಿರವಾಗಿ ಶೇ 14ರಷ್ಟು ಹೆಚ್ಚುವರಿ ಮೊತ್ತ ನೀಡುವುದರಿಂದ ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂಬ ಅಭಿಪ್ರಾಯವನ್ನು ಸಮಿತಿಯು ಸರ್ಕಾರಕ್ಕೆ ಲಿಖಿತವಾಗಿ ತಿಳಿಸಿದೆ ಎಂದು ರಮೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಟೆಂಡರ್ ಮೊತ್ತದಲ್ಲಿ ₹660 ಕೋಟಿ ವ್ಯತ್ಯಾಸ?

ಪ್ರಾಥಮಿಕ ಟೆಂಡರ್ ಅಧಿಸೂಚನೆಯಲ್ಲಿ ಉಲ್ಲೇಖಿಸದ ಕೆಲವು ಅಂಶಗಳನ್ನು ನಂತರದ ಬೆಳವಣಿಗೆಗಳಲ್ಲಿ ಅನುಮಾನಾಸ್ಪದವಾಗಿ ಮತ್ತು ಕಾನೂನುಬಾಹಿರವಾಗಿ ಸೇರಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬಿಡ್ಡುದಾರರು ಏಳು ವರ್ಷಗಳ ಅವಧಿಗೆ ಒಟ್ಟು ₹3,844.19 ಕೋಟಿ ಮೊತ್ತವನ್ನು ನಮೂದಿಸಿದ್ದರು. ಆದರೆ, ಬಿಎಸ್​ಡಬ್ಲ್​ಯುಎಂಎಲ್​​ನ ಕಾನೂನುಬಾಹಿರ ಆದೇಶದಿಂದಾಗಿ ಇದೇ ಅವಧಿಯಲ್ಲಿ ಬಿಡ್ಡುದಾರರಿಗೆ ₹4,504.32 ಕೋಟಿ ಪಾವತಿಸಬೇಕಾಗುತ್ತದೆ ಎಂದು ರಮೇಶ್ ದೂರಿನಲ್ಲಿ ತಿಳಿಸಿದ್ದಾರೆ. ಈ ಪೈಕಿ ಕೇವಲ 22 ಪ್ಯಾಕೇಜ್‌ಗಳ ಗುತ್ತಿಗೆದಾರರಿಗೆ ₹659.36 ಕೋಟಿ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಟೆಂಡರ್‌ನಲ್ಲಿ ಅನ್ಯಾಯವಾಗಿದೆ ಎಂದು ಹೈಕೋರ್ಟ್ ಮೆಟ್ಟಿಲೇರಿದ ಬಿಡ್‌ದಾರರು

ಟೆಂಡರ್ ಪ್ರಕ್ರಿಯೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಎ.ಎಲ್. ಸತೀಶ್ ಕುಮಾರ್ ಮತ್ತು ಚಲುವರಾಜು ಎಂಬ ಇಬ್ಬರು ಬಿಡ್‌ದಾರರು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. WP ನಂ. 34832/2026 ಮತ್ತು WP ನಂ. 34833/2026ರ ಮೂಲಕ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಸಿಇಒ ಕರೀಗೌಡ ಅವರು ಕಡಿಮೆ ದರ ನಮೂದಿಸುವಂತೆ ಸೂಚಿಸಿದ್ದರಿಂದ ಆನ್‌ಲೈನ್‌ನಲ್ಲಿ ಕಡಿಮೆ ದರ ಸಲ್ಲಿಸಿದ್ದೇವೆ. ಆದರೆ, ಇತರ ಗುತ್ತಿಗೆದಾರರಿಗೆ ಶೇ 14ರಷ್ಟು ಹೆಚ್ಚುವರಿ ಮೊತ್ತ ನೀಡಿರುವುದರಿಂದ ನಮಗೆ ಅನ್ಯಾಯವಾಗಿದೆ ಎಂದು ಈ ಇಬ್ಬರು ಬಿಡ್‌ದಾರರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ ಎಂದು ರಮೇಶ್ ತಿಳಿಸಿದ್ದಾರೆ.

ಯಶಸ್ವಿಯಾದ 22 ಪ್ಯಾಕೇಜ್‌ಗಳ ಬಿಡ್‌ದಾರರನ್ನು ಕರೀಗೌಡ ಅವರು ವೈಯಕ್ತಿಕವಾಗಿ ಕರೆಸಿ, ನಿರ್ದಿಷ್ಟ ದರಗಳನ್ನು ನಮೂದಿಸುವಂತೆ ಒತ್ತಾಯಿಸಿದ್ದರು ಎಂಬ ಆರೋಪವೂ ದೂರಿನಲ್ಲಿ ಮಾಡಲಾಗಿದೆ.

ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳು ಟೆಂಡರ್ ಪ್ರಕ್ರಿಯೆಯನ್ನು ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕಿತ್ತು. ಆದರೆ, ತಮ್ಮ ಆಯ್ಕೆಯ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ನಿಯಮಬಾಹಿರವಾಗಿ ನಡೆದುಕೊಂಡಿದ್ದಾರೆ ಎಂದು ಕರೀಗೌಡ ಮತ್ತು ಎಸ್.ವಿ. ರಾಜೇಶ್ ವಿರುದ್ಧ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.

LIVE TV

ಈ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಇಡಿ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaraj
Shivaraj
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ