ಬೆಂಗಳೂರಿನಲ್ಲಿ ಕಟ್ಟಡ ಕುಸಿತ: ಆರಕ್ಕೇರಿದ ಸಾವಿನ ಸಂಖ್ಯೆ, ಮಾಲೀಕ ಅರೆಸ್ಟ್

Bengaluru Building Collapse: ಬೆಂಗಳೂರು ನಗರದ ಬಾಬುಸಾಬ್​ಪಾಳ್ಯದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡ ಅವಶೇಷಗಳ ಅಡಿ ಸಿಲುಕಿ ಈವರೆಗೆ ಐವರು ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಇದೀಗ ಹೆಣ್ಣೂರು ಪೊಲೀಸರು ಕಟ್ಟಡ ಮಾಲೀಕ ಮತ್ತು ಗುತ್ತಿಗೆದಾರನನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಕಟ್ಟಡ ಕುಸಿತ: ಆರಕ್ಕೇರಿದ ಸಾವಿನ ಸಂಖ್ಯೆ, ಮಾಲೀಕ ಅರೆಸ್ಟ್
ಕುಸಿತವಾಗಿರುವ ಕಟ್ಟಡ
Follow us
| Updated By: ವಿವೇಕ ಬಿರಾದಾರ

Updated on:Oct 23, 2024 | 2:52 PM

ಬೆಂಗಳೂರು, ಅಕ್ಟೋಬರ್​ 23: ಬೆಂಗಳೂರಿನ ಬಾಬುಸಾಬ್​ಪಾಳ್ಯದಲ್ಲಿ ಕಟ್ಟಡ ಕುಸಿತ (Bengaluru Building Collapse) ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆ ಪೊಲೀಸರು (Police) ಇಬ್ಬರನ್ನು ಬಂಧಿಸಿದ್ದಾರೆ. ಕಟ್ಟಡದ ಮಾಲೀಕ ಭುವನ್ ರೆಡ್ಡಿ, ಗುತ್ತಿಗೆದಾರ ಮುನಿಯಪ್ಪ ಎಂಬುವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದನು. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿನ ಶವ ಹೊರಗೆ ತೆಗೆದಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಬಿಹಾರ ಮೂಲದವಾರದ ಕಾರ್ಮಿಕ ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್​, ಸೋಲೋ ಪಾಸ್ವಾನ್ ಮೃತರು. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಎನ್​ಡಿಆರ್​ಎಫ್​,  ಎಸ್​ಡಿಆರ್​ಎಫ್​ ಮತ್ತು ಅಗ್ನಿಶಾಮಕ ಸಿಬ್ಬಂದಿ‌ಯಿಂದ ಕಾರ್ಯಾಚರಣೆ ಮುಂದುವರೆದಿದೆ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸರ್ಕಾರಕ್ಕೆ ಶಾಸಕರ ತಂಡ ಮನವಿ

ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾರ್ಯ ಕಳೆದ ಎಂಟು ತಿಂಗಳಿಂದ ನಡೆಯುತ್ತಿದೆ. ಆದರೆ, ಇದೀಗ ಏಕಾಏಕಿ ಕುಸಿದುಬಿದ್ದಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ಇದೀಗ ಹೆಣ್ಣೂರು ಪೊಲೀಸರು ಮಾಲೀಕನನ್ನು ಪತ್ತೆ ಹಚ್ಚಿ, ಬಂಧಿಸಿದ್ದಾರೆ. ಆದರೆ, ಕಟ್ಟಡ ಭುವನ್ ರೆಡ್ಡಿ ಎಂಬುವರ ಹೆಸರಿನಲ್ಲಿದೆ.

ಅವಘಡ ಸಂಬಂಧ ಬಿಎನ್​ಎಸ್, ಬಿಬಿಎಂಪಿ RERA ಆ್ಯಕ್ಟ್ ಅಡ್ಡಿಯಲ್ಲಿ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಮಿಕ ಮೊಹಮ್ಮದ್ ಹರ್ಷದ್ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಬಿಎನ್​ಎಸ್ 105, 125(A) 125(B), 270,3(5) ಬಿಬಿಎಂಪಿ ಆ್ಯಕ್ಟ್ 326, 327,328 RERA (u/s3) ಅಡ್ಡಿಯಲ್ಲಿ ದಾಖಲಿಸಿಕೊಂಡಿದ್ದಾರೆ.

  • ಬಿಎನ್ ಎಸ್ 105 – ಮಾನವ ನರಹತ್ಯೆ
  • ಬಿಎನ್​ಎಸ್ 125(A) – ಇತರರ ಪ್ರಾಣಕ್ಕೆ ಅಥವಾ ದೈಹಿಕ ಸುರಕ್ಷತೆಗೆ ಅಪಾಯ ಉಂಟುಮಾಡುವುದು.
  • ಬಿಎನ್​ಎಸ್ 125(B)-ನಿರ್ಲಕ್ಷ್ಯದಿಂದ ತೀವ್ರವಾಗಿ ಗಾಯ ಉಂಟುಮಾಡುವುದು.
  • ಬಿಎನ್​ಎಸ್ 270- ಸಾರ್ವಜನಿಕ ಉಪದ್ರವ,ಇತರರಿಗೆ ಕಿರಿಕಿರಿ ಉಂಟು ಮಾಡುವುದು.
  • 3(5) – ಅವಘಡ ಮುನ್ಸೂಚನೆ ಇದ್ದರು ಕೂಡಾ ನಿರ್ಲಕ್ಷ್ಯ ವಹಿಸುವುದು.
  • ಬಿಬಿಎಂಪಿ ಆಕ್ಟ್ 326- ಬಿಬಿಎಂಪಿ ಕಾಯ್ದೆ ಉಲ್ಲಂಘನೆ ಬಗ್ಗೆ ಒಂದು ವರ್ಷ ಜೈಲು, 2 ಲಕ್ಷ ರೂ. ದಂಡ.
  • ಬಿಬಿಎಂಪಿ ಆ್ಯಕ್ಟ್ 327- ಬಿಬಿಎಂಪಿ ನಿಯಮಗಳ ಬಗ್ಗೆ 6 ವರ್ಷ ಜೈಲು, 2 ಲಕ್ಷ ರೂ. ದಂಡ
  • ಬಿಬಿಎಂಪಿ ಆಕ್ಟ್ 328 – ನಿಯಮ ಉಲ್ಲಂಘನೆ ದಂಡ.
  • RERA (u/s 3)ಆಕ್ಟ್ – ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ನೊಂದಾಯಿಸದೆ ಇರುವುದು.

ಕಟ್ಟಡ ಕುಸಿತಕ್ಕೆ ಕಾರಣವೇನು?

ಕಳಪೆ ಕಾಮಗಾರಿಯಿಂದಲೇ ಕಟ್ಟಡ ಬುಡಮೇಲಾಗಿ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಮಾಲೀಕ ಆಂಧ್ರಪ್ರದೇಶದ ಮುನಿರಾಜು ರೆಡ್ಡಿ, ಅವರ ಪುತ್ರ ಮೋಹನ್ ರೆಡ್ಡಿ ಹಾಗೂ ಕಟ್ಟಡದ ನಿರ್ಮಾಣ ಕಾಮಗಾರಿಯ ಮೇಸ್ತ್ರಿ ನಾಪತ್ತೆ ಆಗಿದ್ದಾರೆ. ಅವರಿಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಳಪಾಯದಲ್ಲಿ ಕಬ್ಬಿಣದ ರಾಡುಗಳನ್ನು ಸರಿಯಾಗಿ ಅಳವಡಿಕೆ ಮಾಡಿರಲಿಲ್ಲ. ಹಾಗೇ ಕಾಂಪೌಡ್​ ನಿರ್ಮಾಣಕ್ಕೆ ಅಗೆಯಲಾಗಿದ್ದ ಗುಂಡಿಯಲ್ಲಿ ಅಪಾರ ಪ್ರಮಾಣದ ಮಳೆ ನೀರು ಶೇಖರಣೆಗೊಂಡು ಭೂಮಿ ಸಡಿಲವಾಗಿ ಕಟ್ಟಡ ಕುಸಿದಿದೆ ಎನ್ನಲಾಗಿದೆ.

ಮಾಹಿತಿ ಪಡೆದ ಸಿಎಂ, ಡಿಸಿಎಂ

ಕಟ್ಟಡ ಕುಸಿತ ದುರಂತದಲ್ಲಿ ಮೂವರ ಕಾರ್ಮಿಕ ಶವ ಪತ್ತೆಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿಸಿಪಿ ದೇವರಾಜ್ ಅವರಿಗೆ ಫೋನ್ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಈ ವೇಳೆ 17 ಜನ ಸಿಲುಕಿರುವ ಬಗ್ಗೆ ಮಾಹಿತಿ ಇದೆ ಇದೆ ಎಂದು ಡಿಸಿಪಿ ದೇವರಾಜ್ ಸಿಎಂ, ಡಿಸಿಎಂಗೆ ಮಾಹಿತಿ ನೀಡಿದ್ದರು. ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:59 pm, Wed, 23 October 24

ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್