ಬೆಂಗಳೂರು: ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಕಟ್ಟಡ ಮಾಲೀಕನ ವಿರುದ್ಧ ಎಫ್​ಐಆರ್ ದಾಖಲು

Bengaluru: ದು ಸುಮಾರು 70 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಟ್ಟಿಗೆ ಮತ್ತು ಮಣ್ಣಿನಿಂದ ನಿರ್ಮಾಣ ಮಾಡಿದ್ದ ಕಟ್ಟಡ ಇದಾಗಿದೆ. ಇಟ್ಟಿಗೆಗಳು ಹಾಳಾಗಿದ್ದು, ಮಣ್ಣಿನಿಂದ ನಿರ್ಮಿಸಿದ್ದ ಕಟ್ಟಡ ಕುಸಿತವಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ಬೆಂಗಳೂರು: ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಕಟ್ಟಡ ಮಾಲೀಕನ ವಿರುದ್ಧ ಎಫ್​ಐಆರ್ ದಾಖಲು
ಕಟ್ಟಡದ ಮೊದಲ ಸ್ವರೂಪ (ಎಡ), ಕಟ್ಟಡ ಕುಸಿತ ಘಟನೆಯ ಬಳಿಕ (ಬಲ)
Follow us
TV9 Web
| Updated By: ganapathi bhat

Updated on:Sep 27, 2021 | 3:40 PM

ಬೆಂಗಳೂರು: ನಗರದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಕಟ್ಟಡ ಕುಸಿತ ವೇಳೆ ಪಕ್ಕದ ಮನೆಯಲ್ಲಿ ತಾಯಿ- ಮಕ್ಕಳು ಇದ್ದರು. ಹಳೇ ಕಟ್ಟಡ ಕುಸಿತದಿಂದ ಪಕ್ಕದ ಮನೆಯ ಗೋಡೆಗೆ ಹಾನಿ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಕ್ಕಸಂದ್ರದ 7ನೇ ಮುಖ್ಯರಸ್ತೆ, 14ನೇ ಕ್ರಾಸ್​ನಲ್ಲಿನ ಮನೆ ಕುಸಿತಗೊಂಡಿದೆ. ಸುರೇಶ್ ಎಂಬುವವರಿಗೆ ಸೇರಿದ ಹಳೇ ಮನೆ ಕುಸಿತವಾಗಿದೆ. ಈ ಬಗ್ಗೆ ಮೊದಲೇ ಅನುಮಾನ ಇದ್ದ ಕಾರಣ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಕಟ್ಟಡ ಕುಸಿತ ಸ್ಥಳಕ್ಕೆ ಎನ್​ಡಿಆರ್​ಎಫ್​ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಆದರೆ, ಕೊನೆಯ ವೇಳೆಯವರೆಗೂ ಕಟ್ಟಡದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿವಿ9ಗೆ ಬಿಬಿಎಂಪಿ ಜಂಟಿ ಆಯುಕ್ತ ವೀರಭದ್ರಸ್ವಾಮಿ ಹೇಳಿಕೆ ನೀಡಿದ್ದಾರೆ. ಮನೆಯಲ್ಲಿ ವಾಸಿಸುವುದಕ್ಕೆ ಯೋಗ್ಯವಾಗಿ ಇರಲಿಲ್ಲ. ಆದರೂ ಮನೆ ಬಾಡಿಗೆಗೆ ನೀಡಿದ್ದ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ವೀರಭದ್ರಸ್ವಾಮಿ ಹೇಳಿದ್ದಾರೆ.

ಕಟ್ಟಡ ಕುಸಿಯುವ ಮಾಹಿತಿ ಮೊದಲೇ ಗೊತ್ತಾದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದರು. ಕಟ್ಟಡ ಕುಸಿತ ಆಗುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಕುಸಿದು ಬಿದ್ದ ಕಟ್ಟಡದ ಸುತ್ತಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಗ್ನಿಶಾಮಕದ ದಳದ ಸಿಬ್ಬಂದಿ ಬೆಸ್ಕಾಂ ಲೈನ್ ಬಂದ್ ಮಾಡಿಸಿದ್ದರು. ಇದು ಸುಮಾರು 70 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಟ್ಟಿಗೆ ಮತ್ತು ಮಣ್ಣಿನಿಂದ ನಿರ್ಮಾಣ ಮಾಡಿದ್ದ ಕಟ್ಟಡ ಇದಾಗಿದೆ. ಇಟ್ಟಿಗೆಗಳು ಹಾಳಾಗಿದ್ದು, ಮಣ್ಣಿನಿಂದ ನಿರ್ಮಿಸಿದ್ದ ಕಟ್ಟಡ ಕುಸಿತವಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ಕಟ್ಟಡ ಮಾಲೀಕನ ವಿರುದ್ಧ ಎಫ್​ಐಆರ್ ದಾಖಲು ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಕಟ್ಟಡದ ಮಾಲೀಕ ಸುರೇಶ್ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. ಘಟನೆ ಬಳಿಕ ಸುರೇಶ್ ಸ್ಥಳಕ್ಕೆ ಬರದೆ ನಾಪತ್ತೆಯಾಗಿದ್ದಾರೆ. ಆಡುಗೋಡಿ ಠಾಣೆಯಲ್ಲಿ ಸುರೇಶ್ ವಿರುದ್ದ ಕೇಸ್ ದಾಖಲು ಮಾಡಲಾಗಿದೆ. ಆಡುಗೋಡಿ ಪೊಲೀಸರಿಂದ ಸುರೇಶ್​ಗಾಗಿ ಶೋಧಕಾರ್ಯ ನಡೆದಿದೆ. ಸುಮೋಟೋ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು, ಐಪಿಎಸ್ 336 ರ ಅಡಿಯಲ್ಲಿ ಎಫ್​ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಸ್ಥಳೀಯರು ಮನೆಯ ಬಗ್ಗೆ ಮಾತನಾಡಿದ್ದಾರೆ ಇಂದು ಬೆಳಗ್ಗೆ 10- 10.30ರ ಸುಮಾರಿಗೆ ಘಟನೆ ನಡೆದಿದೆ. ಈ ಕಟ್ಟಡ ರಾತ್ರಿ ಸಮಯದಲ್ಲಿ ಬಿದ್ದಿದ್ರೆ 40-50 ಜನ ಸಾಯುತ್ತಿದ್ರು. ಮನೆ ಮಾಲೀಕರಿಗೆ ಹೇಳಿದ್ವಿ. ಮನೆಯನ್ನ ತೆರವು ಮಾಡುವಂತೆ ಹೇಳಿದ್ರೂ ಕೇಳಿರಲಿಲ್ಲ. ಅವಾಗವಾಗ ಮನೆಯ ಗೋಡೆಯಿಂದ ಶಬ್ದ ಬರುತ್ತಿತ್ತು. ಇಂದು ಬೆಳಗ್ಗೆ ಗೋಡೆಯಿಂದ ಮಣ್ಣು ಬೀಳುತ್ತಿತ್ತು. ಮನೆಯನ್ನ ತೆರವು ಮಾಡುವಂತೆ ಬಿಬಿಎಂಪಿಗೂ ಹೇಳಿದ್ವಿ. ಮನೆ ಬೀಳುವಾಗ ನಾವು ಕೂಡ ನಮ್ಮ ಮನೆಯಲ್ಲಿ ಇದ್ವಿ. ನಮ್ಮ ಮನೆಯಲ್ಲೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಇದ್ವಿ. ಆದರೆ ನಾವು ಪ್ರಣಾಪಾಯದಿಂದ ಪಾರಾಗಿದ್ದೀವಿ. ನಂಜಪ್ಪ ಎನ್ನುವವರು 1974ರಲ್ಲಿ ಈ ಮನೆಯನ್ನ ಕಟ್ಟಿಸಿದ್ರು. ಇತ್ತೀಚೆಗೆ ಅವರು ಈ ಮನೆಯಲ್ಲಿ ಬಾಡಿಗೆಗೆ ಕೊಟ್ಟಿದ್ರು ಎಂದು ಲಕ್ಕಸಂದ್ರದ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ನಗರದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ರಾತ್ರಿ ವೇಳೆ ಕಟ್ಟಡ ಬಿದ್ದಿದ್ದರೆ ಹೆಚ್ಚು ಜನ ಸಾಯುತ್ತಿದ್ದರು. 40ಕ್ಕೂ ಹೆಚ್ಚು ಜನ ಸಾಯುತ್ತಿದ್ದರೆಂದು ಸ್ಥಳೀಯರ ಮಾಹಿತಿ ನೀಡಿದ್ದಾರೆ. ಕಟ್ಟಡ ಮೊದಲೇ ವಾಲಿತ್ತು, ತೆರವಿಗೆ ಮನವಿ ಮಾಡಿದ್ದೆವು. ಮನವಿ ಮಾಡಿದ್ರೂ ಯಾರೂ ಈ ಕಟ್ಟಡ ತೆರವುಗೊಳಿಸಿರಲಿಲ್ಲ. ಇಲ್ಲಿನ ಜನರನ್ನು ತೆರವುಗೊಳಿಸಿದ್ರಿಂದ ದೊಡ್ಡ ದುರಂತ ತಪ್ಪಿದೆ. ತುಂಬಾ ಹಳೇ ಕಟ್ಟಡ, ಜನರು ವಾಸಿಸಲು ಯೋಗ್ಯವಾಗಿರಲಿಲ್ಲ ಎಂದು ಸ್ಥಳೀಯರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರಾಸಾಯನಿಕ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ; ಗಾಳಿಯೆಲ್ಲಾ ವಾಸನೆ

ಇದನ್ನೂ ಓದಿ: ಬೆಂಗಳೂರು: ಪಟಾಕಿ ಸ್ಫೋಟದಿಂದ ಇಷ್ಟು ಪ್ರಮಾಣದ ಅವಘಡ ಆಗಲ್ಲ- ಎಫ್​​ಎಸ್​​ಎಲ್​​​​ ತಜ್ಞರ ಹೇಳಿಕೆ

Published On - 2:49 pm, Mon, 27 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ