AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ ಕಿರಿಕ್: ರಾಡು, ದೊಣ್ಣೆಯಿಂದ ಮಾಡೆಲ್ ಮೇಲೆ ಬಸ್ ಸಿಬ್ಬಂದಿ ಹಲ್ಲೆ

ಬೆಂಗಳೂರಿನಲ್ಲಿ ಓರ್ವ ಮಾಡೆಲ್ ಮೇಲೆ ಬಸ್ ಸಿಬ್ಬಂದಿ ಹಲ್ಲೆ ನಡೆಸಿ, ಬೆಲೆಬಾಳುವ ವಸ್ತುಗಳನ್ನು ದೋಚಿರುವಂತಹ ಘಟನೆ ನಡೆದಿದೆ. ಬಸ್ ನಿಲ್ಲಿಸುವಂತೆ ಕೇಳಿದ್ದಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆದರೆ ಪೊಲೀಸರು ತನಿಖೆ ಕೈಗೊಂಡಿಲ್ಲವೆಂದು ಆರೋಪಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಕಿರಿಕ್: ರಾಡು, ದೊಣ್ಣೆಯಿಂದ ಮಾಡೆಲ್ ಮೇಲೆ ಬಸ್ ಸಿಬ್ಬಂದಿ ಹಲ್ಲೆ
ಧ್ರುವ್ ನಾಯ್ಕ್
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 05, 2025 | 8:33 AM

Share

ಬೆಂಗಳೂರು, ಜುಲೈ 05: ಆತ ಮಾಡೆಲ್ (Model). ಆತನಿಗೆ ತನ್ನ ದೇಹ ಮತ್ತು ಮುಖವೇ ಆಸ್ತಿ. ಅದನ್ನ ಕಾಪಾಡಿಕೊಳ್ಳಲು ಹರಸಾಹಸವನ್ನೆ ಮಾಡುತ್ತಾರೆ. ಆದರೆ ಅದೊಂದು ಸಣ್ಣ ಕಾರಣಕ್ಕೆ ಬಸ್ ಸಿಬ್ಬಂದಿಗಳು ಈತನ ಮೇಲೆ ಎರಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ (assault) ಮಾಡಿ, ದೇಹದ ಭಾಗಗಳಿಗೆ ಪರಚಿ ಬಾಸುಂಡೆ ಬರುವಂತೆ ರಾಡು, ದೊಣ್ಣೆಯಿಂದ ಥಳಿಸಿದ್ದು, ಬೆಲೆ ಬಾಳುವ ವಸ್ತು ದೋಚಿರುವ ಆರೋಪ ಕೇಳಿ ಬಂದಿದೆ.

ಮಾಡೆಲ್ ಆಗಿರುವ ಧ್ರುವ್ ನಾಯ್ಕ್, ಥಾಯ್ ಲ್ಯಾಂಡ್​ಗೆ ಹೋಗಿ ಜುಲೈ 1 ರಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ದರು. ಹೀಗೆ ಬಂದವರು ಖಾಸಗಿ ಹೋಟೆಲ್​ನಲ್ಲಿ‌‌ ಉಳಿದುಕೊಂಡಿದ್ದು, ರಾತ್ರಿ 11.30ಕ್ಕೆ ಬೆಂಗಳೂರಿನಿಂದ ತಮ್ಮೂರು ಹುಬ್ಬಳ್ಳಿಗೆ ಹೋಗಲು ಸೀ ಬರ್ಡ್ ಬಸ್ ಬುಕ್ ಮಾಡಿದ್ದಾರೆ. ರಾತ್ರಿ ಬಸ್ ಏರಲು ಬಂದವರು ನರಕ ಕಾಣುವಂತಾಗಿದೆ.

ಇದನ್ನೂ ಓದಿ: Karnataka Rains: ಮಳೆ ಆರ್ಭಟ, ಅವಧಿಗೂ ಮೊದಲೇ ಡ್ಯಾಂಗಳು ಭರ್ತಿ, ಇಂದು ಕೂಡ ಶಾಲೆಗಳಿಗೆ ರಜೆ

ಇದನ್ನೂ ಓದಿ
Image
ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್!
Image
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
Image
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
Image
ನೀರಜ್ ಚೋಪ್ರಾ ಕ್ಲಾಸಿಕ್: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

ಹೌದು.. ರಾತ್ರಿ 1 ಗಂಟೆಗೆ ತನ್ನ ಸ್ನೇಹಿತರ ಜೊತೆಗೆ ಊರಿಗೆ ತೆರಳಲು ಆನಂದ್ ರಾವ್ ಸರ್ಕಲ್ ಬಳಿಗೆ ಧ್ರುವ್ ನಾಯ್ಕ್ ಬಂದಿದ್ದರು. ಹೀಗೆ ಬಂದವರು ಓರ್ವ ಸ್ನೇಹಿತನ ಜೊತೆಗೆ ಕೆಳ ನಿಂತು ಸಿಗರೇಟ್ ಸೇದುತ್ತಿದ್ದರು. ಈ ವೇಳ್ ಬಸ್ ಬಾಗಿಲು ಬಂದ್ ಮಾಡಿದ ಚಾಲಕ ಬಸ್ ನಿಧಾನವಾಗಿ ಮೂವ್ ಮಾಡಿದ್ದ, ಈ ವೇಳೆ ಧ್ರುವ್ ಕೈ ಅಡ್ಡಗಟ್ಟಿ ನಾನು ಬರೋದಿದೆ ಬಸ್ ನಿಲ್ಲಿಸಿ ಎಂದಿದ್ದಾರೆ. ಈ ವೇಳೆ ಸೀ ಬರ್ಡ್ ಸಿಬ್ಬಂದಿ ಮತ್ತು ಧ್ರುವ್ ನಾಯ್ಕ್ ಮಧ್ಯೆ ಗಲಾಟೆ ಉಂಟಾಗಿದೆ.

ಬೆಲೆಬಾಳುವ ವಸ್ತುಗಳು ಕದ್ದ ಆರೋಪ

ಇದೇ ವೇಳೆ ಸಿಬ್ಬಂದಿಗಳೆಲ್ಲಾ ಸೇರಿ ಧ್ರುವ್ ನಾಯ್ಕ್ ಮೇಲೆ ಹಲ್ಲೆ ಮಾಡಿದ್ದಾರೆ. ಮುಖ, ಕತ್ತು, ಎದೆ, ಭಾಗಕ್ಕೆ ಪರಚಿದ ಗುರುತಾಗಿದ್ದು, ಬೆನ್ನು ಮತ್ತು ಭುಜದ ಮೇಲೆ ಬಾಸುಂಡೆ ಬರುವಂತೆ ಥಳಿಸಿದ್ದಾರೆ.‌ ಇದೇ ವೇಳೆ ದುಬಾರಿ ಬೆಲೆಯ ಶೂ, ಏರ್ ಬರ್ಡ್ಸ್, 44 ಸಾವಿರ ರೂ ಬೆಲೆ ಸನ್ ಗ್ಲಾಸ್, 1.85 ಲಕ್ಷ ರೂ ಬೆಲೆಯ ಪ್ಲಾಟಿನಂ ಪೆಂಡೆಂಟ್ ಇರುವ ಸಿಲ್ವರ್ ಚೈನ್, ಪಾಸ್ ಪೋರ್ಟ್, 45 ಸಾವಿರ ರೂ ಬೆಲೆಯ ವಾಚ್, 40 ಸಾವಿರ ರೂ ಮೌಲ್ಯದ ಪ್ಲಾಟಿನಂ ರಿಂಗ್ ಸೇರಿದಂತೆ ಪರ್ಸ್​ನಲ್ಲಿದ್ದ 10 ಸಾವಿರ ರೂ ಹಣ ಕದ್ದಿರುವುದಾಗಿ ಧ್ರುವ್ ನಾಯ್ಕ್ ಆರೋಪಿಸಿದ್ದಾರೆ.

ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆದರೆ ಪೊಲೀಸರು ಮಾತ್ರ ತನಿಖೆ ಆರಂಭಿಸದೇ, ಸಿಸಿಟಿವಿ ಪರಿಶೀಲನೆ ಕೂಡ ನಡೆಸದೇ ಬೇಜವಾಬ್ದಾರಿ ತೋರಿದ್ದಾರೆ‌‌‌ ಎಂದು ಧ್ರುವ್ ನಾಯ್ಕ್ ಪರ ವಕೀಲರು ಆರೋಪಿಸಿದ್ದು, ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್!

ಅದೇನೆ ಹೇಳಿ ಕೇವಲ ಸಿಗರೇಟ್ ಸೇದುತ್ತಾ, ಬಸ್ ಹತ್ತುವ ವಿಚಾರಕ್ಕೆ ಗಲಾಟೆ ಆಯ್ತೋ ಅಥವಾ ಧ್ರುವ್ ನಾಯ್ಕ್ ಕೂಡ ಬಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೊ ಅನ್ನೋ ಸತ್ಯಾ ಸತ್ಯತೆ ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ. ಹಾಗಾಗಿ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.