AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಶಾಸಕನಿಂದ ಬೆಂಗಳೂರಿನ ಖ್ಯಾತ ಉದ್ಯಮಿ ರವಿಪ್ರಕಾಶ್ ಕಿಡ್ನ್ಯಾಪ್?

ಬೆಂಗಳೂರಿನ ಆರ್.ಆರ್.ನಗರದಲ್ಲಿ ಖ್ಯಾತ ಉದ್ಯಮಿ ರವಿಪ್ರಕಾಶ್ ಅವರನ್ನು ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ಕರೆದೊಯ್ಯಲಾಗಿದ್ದು, ಇದು ಬಂಧನವಲ್ಲ, ಆಂಧ್ರ ಶಾಸಕ ಪುಟ್ಟ ಸುಧಾಕರ್ ಮಾಡಿಸಿರುವ ಕಿಡ್ನ್ಯಾಪ್ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. 14 ಎಕರೆ ಜಮೀನು ವಿವಾದವೇ ಇದಕ್ಕೆ ಕಾರಣ ಎನ್ನಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಆರ್.ಆರ್.ನಗರ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಆಂಧ್ರ ಶಾಸಕನಿಂದ ಬೆಂಗಳೂರಿನ ಖ್ಯಾತ ಉದ್ಯಮಿ ರವಿಪ್ರಕಾಶ್ ಕಿಡ್ನ್ಯಾಪ್?
ಆಂಧ್ರ ಶಾಸಕನಿಂದ ಬೆಂಗಳೂರಿನ ಖ್ಯಾತ ಉದ್ಯಮಿ ರವಿಪ್ರಕಾಶ್ ಕಿಡ್ನ್ಯಾಪ್?
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 31, 2026 | 10:08 AM

Share

ಮುಖ್ಯಾಂಶಗಳು

  • ಆಂಧ್ರ ಶಾಸಕನ ಪ್ರಭಾವದಿಂದ ಉದ್ಯಮಿ ರವಿಪ್ರಕಾಶ್ ಕಿಡ್ನ್ಯಾಪ್ ಎಂದು ಕುಟುಂಬಸ್ಥರ ಆರೋಪ
  • ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ಕರೆದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
  • 14 ಎಕರೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ಸೇರಿ ಮೂವರ ವಿರುದ್ಧ FIR

ಬೆಂಗಳೂರು, ಆಗಸ್ಟ್ 31: ಆಂಧ್ರಪ್ರದೇಶದ ಕಡಪ ಜಿಲ್ಲೆಯ ಮೈದುಕೂರು ಠಾಣೆ ಪೊಲೀಸರು ಬೆಂಗಳೂರಿನ (Bengaluru) ರಾಜರಾಜೇಶ್ವರಿನಗರದಲ್ಲಿರುವ (ಆರ್.ಆರ್.ನಗರ) ಉದ್ಯಮಿ ಹಾಗೂ ಪ್ರಭಾವಿ ಬಿಜೆಪಿ ಮುಖಂಡ ರವಿಪ್ರಕಾಶ್ ಅವರನ್ನು ನಿನ್ನೆ (ಆ.30) ವಶಕ್ಕೆ ಪಡೆದು ಕರೆದೊಯ್ದಿದ್ದಾರೆ ಎನ್ನಲಾಗಿದೆ.  ಆದರೆ ಬಂಧಿಸಲೆಂದು ಬಂದವರು ಪೊಲೀಸರೇ ಅಲ್ಲ, ಮೈದುಕೂರು ಶಾಸಕನ ಕಡೆಯವರೆಂದು ಉದ್ಯಮಿಯ ಕುಟುಂಬ ಆರೋಪಿಸಿದೆ. ಈ ಹಿನ್ನೆಲೆ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಶಾಸಕರು ಸೇರಿಂದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.

ಬಂಧನವಲ್ಲ, ಕಿಡ್ನ್ಯಾಪ್!

ರವಿಪ್ರಕಾಶ್ 300ಕ್ಕೂ ಹೆಚ್ಚು ವಿಂಟೇಜ್ ಕಾರುಗಳ ಸಂಗ್ರಹ ಹೊಂದಿರುವ ಖ್ಯಾತ ಉದ್ಯಮಿಯಾಗಿದ್ದಾರೆ. ಮೈದುಕೂರು ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ ರವಿಪ್ರಕಾಶ್ 5ನೇ ಆರೋಪಿಯಾಗಿದ್ದು, ಅದರನ್ವಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆನ್ನಲಾಗಿದೆ.  ಈ ವೇಳೆ  ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ಉದ್ಯಮಿಯನ್ನು ಕರೆದೊಯ್ಯಲಾಗಿದ್ದು, ಇದರ ಹಿಂದೆ ಆಂಧ್ರಪ್ರದೇಶದ ಮೈದುಕೂರು ಶಾಸಕ ಹಾಗೂ ಟಿಟಿಡಿ ಮಾಜಿ ಅಧ್ಯಕ್ಷ ಪುಟ್ಟ ಸುಧಾಕರ್ ಅವರ ರಾಜಕೀಯ ಪ್ರಭಾವವಿದೆ ಎಂದು ರವಿಪ್ರಕಾಶ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಕಿಡ್ನ್ಯಾಪ್ ಪ್ರಕರಣ ದಾಖಲು

ಆರ್.ಆರ್.ನಗರದಲ್ಲಿ ರವಿಪ್ರಕಾಶ್ ಅವರಿಗೆ ಸೇರಿದ 14 ಎಕರೆ ಬೆಲೆಬಾಳುವ ಜಮೀನಿದ್ದು, ಈ ಜಮೀನಿನ ವಿಚಾರವಾಗಿ ರವಿಪ್ರಕಾಶ್ ಮತ್ತು ಶಾಸಕ ಪುಟ್ಟ ಸುಧಾಕರ್ ನಡುವೆ ಕೋರ್ಟ್‌ನಲ್ಲಿ ದೀರ್ಘಕಾಲದ ವ್ಯಾಜ್ಯ ನಡೆಯುತ್ತಿದೆ. ಕಳೆದ ತಿಂಗಳು ಸುಧಾಕರ್ ಅವರು ಜಮೀನಿನ ಬಳಿ ಬಂದು ಬಲವಂತವಾಗಿ ಒಳನುಗ್ಗಲು ಯತ್ನಿಸಿ ಗಲಾಟೆ ಮಾಡಿದ್ದರೆಂದು ರವಿಪ್ರಕಾಶ್ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ದ್ವೇಷದಿಂದ ಈ ರೀತಿ ಹೆದರಿಸುವ ತಂತ್ರ ಹೆಣೆಯಲಾಗಿದೆ ಎಂದು ರವಿ ಪ್ರಕಾಶ್ ಪುತ್ರಿ ದೂರಿದ್ದಾರೆ. ವಾಹನದಲ್ಲಿ ಉದ್ಯಮಿಯನ್ನು ಕರೆದುಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಕಷ್ಟು ಅನುಮಾನ ಮೂಡಿಸಿದೆ.

ಅಷ್ಟೇ ಅಲ್ಲದೆ  ಕುಟುಂಬಸ್ಥರ ದೂರಿನನ್ವಯ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ಪುಟ್ಟ ಸುಧಾಕರ್ ಸೇರಿದಂತೆ ಮೂವರ ವಿರುದ್ಧ ಕಿಡ್ನ್ಯಾಪ್ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:07 am, Mon, 31 August 26

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!