AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಫೈರಿಂಗ್​: ಕೂದಲೆಳೆ ಅಂತರದಲ್ಲಿ ಬಚಾವ್​!

ಬೆಂಗಳೂರಿನ ಬಸವನಗುಡಿಯ ಕೃಷ್ಣರಾವ್ ಪಾರ್ಕ್​ನಲ್ಲಿ ಗುರುವಾರ ರಾತ್ರಿ ಉದ್ಯಮಿ ಮೇಲೆ ಏರ್ ಗನ್​ನಿಂದ ದುಷ್ಕರ್ಮಿಗಳು ಫೈರಿಂಗ್​ ಮಾಡಿರುವಂತಹ ಘಟನೆ ನಡೆದಿದೆ. ಸ್ನೇಹಿತರ ಭೇಟಿಗೆ ಬಂದಿದ್ದ ವೇಳೆ ದುರಂತ ನಡೆದಿದೆ. ಸದ್ಯ ಬಸವನಗುಡಿ ಹಾಗೂ ಸಿಸಿಬಿ ತಂಡದಿಂದ ಪ್ರಕರಣದ ತನಿಖೆ ನಡೆದಿದ್ದು, ಎಫ್​​ಐಆರ್​​ ದಾಖಲಾಗಿದೆ.​

ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಫೈರಿಂಗ್​: ಕೂದಲೆಳೆ ಅಂತರದಲ್ಲಿ ಬಚಾವ್​!
ಉದ್ಯಮಿ ಮೇಲೆ ಫೈರಿಂಗ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Dec 12, 2025 | 4:28 PM

Share

ಬೆಂಗಳೂರು, ಡಿಸೆಂಬರ್​ 12: ಉದ್ಯಮಿ (businessman) ಮೇಲೆ ಏರ್​ ಗನ್​ನಿಂದ ದುಷ್ಕರ್ಮಿಗಳು ಫೈರಿಂಗ್​ (Firing) ಮಾಡಿರುವಂತಹ ಘಟನೆ ನಗರದ ಬಸವನಗುಡಿಯ ಕೃಷ್ಣರಾವ್ ಪಾರ್ಕ್​ನಲ್ಲಿ ಗುರುವಾರ ರಾತ್ರಿ ನಡೆದಿದೆ. ನರ್ತಕಿ ಹಾಗೂ ಕಾರ್ಗಿಲ್ ಬಾರ್ ಮಾಲೀಕ, ಉದ್ಯಮಿ ರಾಜಗೋಪಾಲ್​ ಮೇಲೆ ಫೈರಿಂಗ್ ಮಾಡಲಾಗಿದ್ದು, ಕತ್ತಿನ ಭಾಗಕ್ಕೆ ಗಾಯವಾಗಿದೆ. ಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಪಿಗಾಗಿ ಬಸವನಗುಡಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದೂರುದಾರರ ಮಾಹಿತಿ ಆಧರಿಸಿ ಎಫ್ಐಆರ್​​ ದಾಖಲಿಸಲಾಗಿದೆ.

ನಡೆದಿದ್ದೇನು?

ಬಸವನಗುಡಿಯ ಕೃಷ್ಣರಾವ್ ಪಾರ್ಕ್​​ಗೆ ರಾಜಗೋಪಾಲ್,​​ ಸ್ನೇಹಿತರ ಭೇಟಿಗೆ ಬಂದಿದ್ದರು. ರಸ್ತೆಗೆ ಅಂಟಿಕೊಂಡಂತೆ ಪಾರ್ಕ್ ಇದೆ. ಇತ್ತ ಉದ್ಯಮಿ ಪಾರ್ಕ್​​ನಲ್ಲಿ ವಾಕ್ ಮಾಡುತ್ತಿರುವಾಗ ಗನ್ ಫೈರ್ ಆಗಿದೆ.  ಹೀಗಾಗಿ ರಸ್ತೆಯಲ್ಲಿ ನಿಂತು ಏರ್​ ಗನ್​ನಿಂದ ಫೈರ್​​ ಮಾಡಿರಬಹುದು ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಇದನ್ನೂ ಓದಿ: ಭಾರಿ ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು! ಮೈ ಜುಮ್ಮೆನ್ನಿಸುವ ವಿಡಿಯೋ ಇಲ್ಲಿದೆ ನೋಡಿ

ಸದ್ಯ ಬಸವನಗುಡಿ ಹಾಗೂ ಸಿಸಿಬಿ ತಂಡದಿಂದ ಪ್ರಕರಣದ ತನಿಖೆ ನಡೆದಿದೆ. ಯಾವುದೇ ವ್ಯಕ್ತಿಗಳ ಮೇಲೆ ಅನುಮಾನವಿಲ್ಲ. ಈತನಕ ಕೂಡ ಯಾವ ಬೆದರಿಕೆ ಕರೆಯೂ ಬಂದಿಲ್ಲ. ಏಕೆ ಫೈರಿಂಗ್ ಆಯ್ತು? ಯಾವ ಕಾರಣಕ್ಕೆ ಫೈರಿಂಗ್ ಮಾಡಿದರು ಗೊತ್ತಿಲ್ಲ. ಆದರೆ ಏರ್​ ಗನ್​ನಿಂದ ಫೈರಿಂಗ್​​​ ಆಗಿದೆ ಎಂದು ಉದ್ಯಮಿ ರಾಜಗೋಪಾಲ್​​ ಹೇಳಿದ್ದಾರೆ. ಹೀಗಾಗಿ ಅದು ಏರ್​ ಗನ್​ ಹೌದೋ ಅಲ್ಲವೋ ಎನ್ನುವ ಬಗ್ಗೆ ತನಿಖೆ ನಡೆದಿದೆ.

ಇನ್ನು ಘಟನಾ ಸ್ಥಳಕ್ಕೆ ಸಿಸಿಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಉದ್ಯಮಿ ರಾಜ್ ಗೋಪಾಲ್ ದಾಖಲಾಗಿರುವ ಬೆಂಗಳೂರು ಆಸ್ಪತ್ರೆಗೆ ಬಸವನಗುಡಿ ಹಾಗೂ ಸಿಸಿಬಿ ಇನ್ಸ್​ಪೆಕ್ಟರ್​ಗಳ ತಂಡ ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು: ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ಕಾಲಿಗೆ ಗುಂಡೇಟು

ಯಾರಾದರೂ ಹತ್ಯೆಗೆ ಸಂಚು ರೂಪಿಸಿದ್ದರಾ ಎಂಬ ಬಗ್ಗೆ ತನಿಖೆ ನಡೆದಿದ್ದು, ಮೇಲ್ನೋಟಕ್ಕೆ ಟಾರ್ಗೆಟ್ ಮಾಡಿ ಹೊಡೆದಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಉದ್ಯಮಿ ರಾಜಗೋಪಾಲ್​​ ಕೋಟ್ಯಂತರ ರೂ. ವ್ಯವಹಾರ ಹೊಂದಿದ್ದಾರೆ. ನರ್ತಕಿ ಬಾರ್, ಮೆಜೆಸ್ಟಿಕ್ ಸುತ್ತಮುತ್ತದ ಅಂಗಡಿಗಳಿಂದ ಬಾಡಿಗೆ ಬರುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ