AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಇಲಾಖೆ ವೈಫಲ್ಯ: ಚಿರತೆ ಹಿಡಿಯಲು ಟಾಸ್ಕ್ ಫೋರ್ಸ್ ರಚಿಸಿಕೊಂಡ ಬ್ಯಾಡರಹಳ್ಳಿ ಜನ!

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿರುವ ಒಂಟಿ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಫಲವಾದ ಹಿನ್ನೆಲೆಯಲ್ಲಿ ಸ್ಥಳೀಯರೇ 'ಚಿರತೆ ಟಾಸ್ಕ್ ಫೋರ್ಸ್' ರಚಿಸಿಕೊಂಡಿದ್ದಾರೆ. 6 ಪ್ರಮುಖ ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ರಾತ್ರಿ 11 ರಿಂದ ಬೆಳಗಿನ ಜಾವ 5:30 ರವರೆಗೆ ಸಾರ್ವಜನಿಕರೇ ನೈಟ್ ಬೀಟ್ ನಡೆಸಲಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆ ವೈಫಲ್ಯ: ಚಿರತೆ ಹಿಡಿಯಲು ಟಾಸ್ಕ್ ಫೋರ್ಸ್ ರಚಿಸಿಕೊಂಡ ಬ್ಯಾಡರಹಳ್ಳಿ ಜನ!
ಚಿರತೆ ಹಿಡಿಯಲು ಟಾಸ್ಕ್ ಫೋರ್ಸ್ ರಚಿಸಿಕೊಂಡ ಬ್ಯಾಡರಹಳ್ಳಿ ಜನ!
ಕಿರಣ್​ ಸೂರ್ಯ
| Edited By: |

Updated on: Aug 04, 2026 | 8:37 AM

Share

ಮುಖ್ಯಾಂಶಗಳು

  • ಬ್ಯಾಡರಹಳ್ಳಿಯಲ್ಲಿ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆಯ ವಿಫಲತೆಯಿಂದ ಬೆದರಿದ ಸ್ಥಳೀಯರು.
  • ಸಾರ್ವಜನಿಕರೇ ಸ್ವತಃ 'ಚಿರತೆ ಟಾಸ್ಕ್ ಫೋರ್ಸ್' ರಚಿಸಿಕೊಂಡು ರಾತ್ರಿ ಗಸ್ತು.
  • 6 ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ರಾತ್ರಿ 11 ರಿಂದ ಕಾರ್ಯಾಚರಣೆ.

ಬೆಂಗಳೂರು, ಆಗಸ್ಟ್ 04: ಬ್ಯಾಡರಹಳ್ಳಿಯಲ್ಲಿ ಒಂಟಿ ಚಿರತೆಯ ಕಣ್ಣಾಮುಚ್ಚಾಲೆ ಆಟ ಮುಂದುವರಿದಿದ್ದು, ಇಡೀ ಏರಿಯಾದ ಜನರು ಭಯದಿಂದ ದಿನ ದೂಡುವಂತಾಗಿದೆ. ಕಳೆದ ಹಲವು ದಿನಗಳಿಂದ ಸಾರ್ವಜನಿಕ ನಿದ್ರೆ ಗೆಡಿಸಿರುವ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳ ಈ ಉದಾಸೀನತೆ ಹಾಗೂ ನಿರ್ಲಕ್ಷ್ಯದಿಂದ ಎಚ್ಚೆತ್ತ ಬ್ಯಾಡರಹಳ್ಳಿಯ ಸ್ಥಳೀಯರೇ ಈಗ ಸ್ವತಃ ಅಖಾಡಕ್ಕಿಳಿದಿದ್ದು, ‘ಚಿರತೆ ಟಾಸ್ಕ್ ಫೋರ್ಸ್’ ರಚಿಸಿಕೊಂಡು ಕಾರ್ಯಾಚರಣೆಗೆ ಧುಮುಕಿದ್ದಾರೆ!

6 ಡೇಂಜರ್ ಜೋನ್‌ಗಳಲ್ಲಿ ನಿರಂತರ ‘ನೈಟ್ ಬೀಟ್’

ಅರಣ್ಯ ಇಲಾಖೆಯನ್ನು ನಂಬಿ ಕೂತರೆ ಜೀವಕ್ಕೇ ಕಂಟಕ ಎಂಬ ತೀರ್ಮಾನಕ್ಕೆ ಬಂದಿರುವ ಸಾರ್ವಜನಿಕರು, ಚಿರತೆ ಸಂಚರಿಸುವ 6 ಪ್ರಮುಖ ಡೇಂಜರ್ ಜೋನ್‌ಗಳನ್ನು ಗುರುತಿಸಿದ್ದಾರೆ. ಪ್ರಿಯದರ್ಶಿನಿ ಲೇಔಟ್ ಹಿಂಭಾಗ, ಆಯುರ್ ಆಶ್ರಮ, ಪಾವನಿ ಚಾಟ್ಸ್ ಜಂಕ್ಷನ್, ಗೋಶಾಲೆ, ಬಾಲಾಜಿ ಲೇಔಟ್ ಹಾಗೂ ದ್ವಾರಕಾವಾಸ ರಸ್ತೆಗಳಲ್ಲಿ ಇಂಚಿಂಚೂ ಜಾಗವನ್ನು ತನಿಖೆ ಮಾಡಲು ಪ್ಲಾನ್ ರೂಪಿಸಲಾಗಿದೆ.

ರಾತ್ರಿ 11:00 ರಿಂದ ಬೆಳಗಿನ ಜಾವ 5:30 ರವರೆಗೆ ಮುಚ್ಚಿದ ವಾಹನಗಳಲ್ಲಿ ಕನಿಷ್ಠ ನಾಲ್ಕೈದು ಜನರ ತಂಡ ಸ್ಥಳೀಯವಾಗಿ ‘ನೈಟ್ ಬೀಟ್’ ನಡೆಸಲಿದ್ದು, ಪ್ರತಿ ಪಾಯಿಂಟ್‌ನಲ್ಲಿ 10-15 ನಿಮಿಷ ತಂಗಿ ಪರಿಶೀಲಿಸಲಿದೆ. ಚಿರತೆಯ ಚಲನವಲನ ಕಂಡುಬಂದ ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಲು ಸ್ಥಳೀಯರು ಸಿದ್ಧರಾಗಿದ್ದಾರೆ.

ಬೀಗ ಜಡಿದು ಹೋರಾಟಕ್ಕೂ ಸಿದ್ಧ

“ನಾವು ದಿನವೂ ಭಯದಲ್ಲೇ ಬದುಕುತ್ತಿದ್ದೇವೆ. ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಹಾಗಾಗಿಯೇ ನಾವೇ ಸ್ವತಃ ನೈಟ್ ಬೀಟ್ ಮಾಡಲು ನಿರ್ಧರಿಸಿದ್ದೇವೆ” ಎಂದು ಸ್ಥಳೀಯ ನಿವಾಸಿಗಳಾದ ಶಂಭು ಶೇಖರ್ ಹಾಗೂ ಸಿ.ಡಿ. ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ, ಸರ್ಕಾರಿ ಯಂತ್ರದ ವೈಫಲ್ಯಕ್ಕೆ ಸೆಡ್ಡು ಹೊಡೆದು ಬ್ಯಾಡರಹಳ್ಳಿ ಜನರೇ ಅಖಾಡಕ್ಕಿಳಿದಿದ್ದು, ಸ್ಥಳೀಯರ ಈ ಬಿಗ್ ಆಪರೇಷನ್‌ಗೆ ಕಿಲಾಡಿ ಚಿರತೆ ಲಾಕ್ ಆಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ