ಬೆಂಗಳೂರು ನಮ್ಮ ಮೆಟ್ರೋ ಹಳಿಯಲ್ಲಿ ಬೆಕ್ಕು ಪ್ರತ್ಯಕ್ಷ: ಆತಂಕಗೊಂಡ ಪ್ರಯಾಣಿಕರು

ಮೆಟ್ರೋ ಟ್ರ್ಯಾಕ್‌ನಲ್ಲಿ ಕಪ್ಪು ಬಣ್ಣದ ಬೆಕ್ಕು ಕಾಣಿಸಿಕೊಂಡಿದ್ದು,  ಪ್ರಯಾಣಿಕರು ಆತಂಕಗೊಂಡಿರುವಂತಹ ಘಟನೆ ಜೆ.ಪಿ.ನಗರ ಮೆಟ್ರೋ ನಿಲ್ದಾಣದಲ್ಲಿ ಕಂಡುಬಂದಿದೆ. ಕೂಡಲೇ ಪ್ರಯಾಣಿಕರು ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಟ್ರ್ಯಾಕ್​ನಲ್ಲಿದ್ದ ಬೆಕ್ಕನ್ನ ಓಡಿಸಲು ಸಿಬ್ಬಂದಿಗಳು ಮುಂದಾಗಿದ್ದಾರೆ. ಮೆಟ್ರೋ ಸಿಬ್ಬಂದಿ ನಡೆಗೆ ಟ್ವಿಟ್ಟರ್​​ನಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು ನಮ್ಮ ಮೆಟ್ರೋ ಹಳಿಯಲ್ಲಿ ಬೆಕ್ಕು ಪ್ರತ್ಯಕ್ಷ: ಆತಂಕಗೊಂಡ ಪ್ರಯಾಣಿಕರು
ಮೆಟ್ರೋ ಹಳಿಯಲ್ಲಿ ಬೆಕ್ಕು
Follow us
Kiran HV
| Updated By: ಗಂಗಾಧರ​ ಬ. ಸಾಬೋಜಿ

Updated on: Jan 07, 2024 | 4:17 PM

ಬೆಂಗಳೂರು, ಜನವರಿ 07: ನಮ್ಮ ಮೆಟ್ರೋ (namma metro) ಬೆಂಗಳೂರು ಸಂಚಾರ ವ್ಯವಸ್ಥೆಯ ಜೀವನಾಡಿ. ಮೆಟ್ರೋ ಸ್ಟೇಷನ್​​​ನಲ್ಲಿ ಟೈಟ್​ ಸೆಕ್ಯೂರಿಟಿ ಇರುತ್ತೆ. ಇಂತಹ ಮೆಟ್ರೋ ನಿಲ್ದಾಣದಲ್ಲೇ ಪದೇ ಪದೇ ಅವಘಡವೊಂದು ನಡೆಯುತ್ತಿವೆ. ಇತ್ತೀಚೆಗೆ ಮೊಬೈಲ್ ತೆಗೆಯಲು ಯುವತಿ ಟ್ರ್ಯಾಕ್​ಗೆ ಜಿಗಿದಿದ್ದಳು. ಯುವವಕನಿಂದ ಆತ್ಮಹತ್ಯೆಗೆ ಯತ್ನಿಸಲಾಗಿತ್ತು. ಇದೀಗ ಮೆಟ್ರೋ ಟ್ರ್ಯಾಕ್‌ನಲ್ಲಿ ಕಪ್ಪು ಬಣ್ಣದ ಬೆಕ್ಕು ಕಾಣಿಸಿಕೊಂಡಿದ್ದು,  ಪ್ರಯಾಣಿಕರು ಆತಂಕಗೊಂಡಿರುವಂತಹ ಘಟನೆ ಜೆ.ಪಿ.ನಗರ ಮೆಟ್ರೋ ನಿಲ್ದಾಣದಲ್ಲಿ ಕಂಡುಬಂದಿದೆ.

ಕೂಡಲೇ ಪ್ರಯಾಣಿಕರು ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಟ್ರ್ಯಾಕ್​ನಲ್ಲಿದ್ದ ಬೆಕ್ಕನ್ನ ಓಡಿಸಲು ಸಿಬ್ಬಂದಿಗಳು ಮುಂದಾಗಿದ್ದಾರೆ. ಮೆಟ್ರೋ ಸಿಬ್ಬಂದಿ ನಡೆಗೆ ಟ್ವಿಟ್ಟರ್​​ನಲ್ಲಿ ಆಕ್ರೋಶ ವ್ಯಕ್ತವಾಗಿದೆ.

ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ

ನಮ್ಮ ಮೆಟ್ರೋ ರೈಲಿನಲ್ಲಿ ಓರ್ವ ವ್ಯಕ್ತಿ ವಿರುದ್ಧ ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ಆರೋಪ ಮಾಡಲಾಗಿದೆ. ನಗರದ ಮೆಜೆಸ್ಟಿಕ್ ನಿಲ್ದಾಣದಲ್ಲಿ ಜ.1ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಮ್ಮ ಮೆಟ್ರೋ ಭದ್ರತಾ ಸಿಬ್ಬಂದಿಗೆ ಸಂತ್ರಸ್ತ ಯುವತಿ ಮಾಹಿತಿ ನೀಡಿದ್ದಾಳೆ. ಕೂಡಲೇ ವ್ಯಕ್ತಿಯನ್ನು ವಿಚಾರಣೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋ ಹಳಿಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ: ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತ

ಲೈಂಗಿಕ ಕಿರುಕುಳ ನೀಡಿದ್ದಾಗಿ ಪೊಲೀಸರ ಮುಂದೆ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದು, ಮತ್ತೊಮ್ಮೆ ಹೀಗೆ ಮಾಡುವುದಿಲ್ಲವೆಂದು ಕ್ಷಮೆಯಾಚಿಸಿದ್ದಾರೆ.

ಮೆಟ್ರೋ ಹಳಿಗೆ ಧುಮುಕಿ ಆತ್ಮಹತ್ಯೆ ಯತ್ನ

ಇತ್ತೀಚಚೆಗೆ ನಗರದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳಿಗೆ ಧುಮುಕಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಕೇರಳ ಮೂಲದ ಯುವಕ ಶರೋನ್, ಮೆಟ್ರೋ ಟ್ರೈನ್ ಬರುತ್ತಿದ್ದಂತೆ ಹಳಿ ಮೇಲಕ್ಕೆ ಜಿಗಿದಿದ್ದ. ಕೂಡಲೇ ಯುವಕನ ರಕ್ಷಣೆ ಮಾಡಿದ BMRCL ಸಿಬ್ಬಂದಿ, ಶರೋನ್​ನನ್ನ​ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಯುವಕ ಶರೋನ್ ಕಾಲಿಗೆ ಗಾಯವಾಗಿದ್ದು, ತಲೆಗೆ ಕರೆಂಟ್ ಶಾಕ್ ಹೊಡೆದಿದೆ ಎನ್ನಲಾಗಿತ್ತು. ಐಸಿಯುನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?

ಗಾಯಗೊಂಡ ಯುವಕ ಅಬ್ಬಿಗೆರೆಯ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಈತನ ತಂದೆ ಮೃತಪಟ್ಟಿದ್ದರು. ಕಾರ್ಯ ಮುಗಿಸಿ 15 ದಿನದ ಹಿಂದೆ ಬೆಂಗಳೂರಿಗೆ ವಾಪಸ್ಸಾಗಿದ್ದ. ಇದೀಗ, ತಂದೆ ಸಾವಿನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಶಂಕಿಸಲಾಗಿತ್ತು. ಮೆಟ್ರೋ ಹಳಿಗೆ ಧುಮುಕಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಕೆಲಕಾಲ ಹಸಿರು ಮೆಟ್ರೋ ಮಾರ್ಗ ಸಂಚಾರವನ್ನ ಸ್ಥಗಿತಗೊಳಿಸಲಾಗಿತ್ತು. ಅರ್ಧಗಂಟೆ ಬಳಿಕ ಮತ್ತೆ ಮೆಟ್ರೋ ಹಸಿರು ಮಾರ್ಗದ ಸಂಚಾರ ಆರಂಭಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ