ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.15 ಕೋಟಿ ರೂ. ಮೌಲ್ಯದ ಡ್ರಗ್ಸ್​, ನೈಜೀರಿಯಾ ಪ್ರಜೆ ವಶಕ್ಕೆ

ಡ್ರಗ್ಸ್​ ಪೂರೈಕೆ ಜಾಲದ ವಿರುದ್ಧ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 5.15 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಜತೆಗೆ, ಜೀರಿಯಾ ಮೂಲದ ಅರ್ನೆಸ್ಟ್ ಒನ್ಯೆಕಾಚಿ ಉಗಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಈ ಹಿಂದೆಯೂ ಇಂಥ ಕೃತ್ಯಗಳಲ್ಲಿ ಶಾಮೀಲಾಗಿದ್ದ ಎನ್ನಲಾಗಿದೆ.

ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.15 ಕೋಟಿ ರೂ. ಮೌಲ್ಯದ ಡ್ರಗ್ಸ್​, ನೈಜೀರಿಯಾ ಪ್ರಜೆ ವಶಕ್ಕೆ
ಸಾಂದರ್ಭಿಕ ಚಿತ್ರ

Updated on: Jan 21, 2026 | 7:48 AM

ಬೆಂಗಳೂರು, ಜನವರಿ 21: ಬೆಂಗಳೂರಿನಲ್ಲಿ (Bangalore) ಮಾದಕವಸ್ತು ಕಳ್ಳಸಾಗಣೆ ಜಾಲದ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ದಾಳಿ ನಡೆಸಿದ್ದು, ನೈಜೀರಿಯಾದ ಪ್ರಜೆಯೊಬ್ಬನನ್ನು ಬಂಧಿಸಿ 5.15 ಕೋಟಿ ರೂ. ಮೌಲ್ಯದ 2.5 ಕೆಜಿ ಎಂಡಿಎಂಎ ಜೊತೆಗೆ 300 ಎಕ್​ಸ್ಟಸಿ ಪಿಲ್ಸ್ ವಶಪಡಿಸಿಕೊಂಡಿದ್ದಾರೆ. ಮಾರತ್ತಹಳ್ಳಿ ಬಳಿಯ ಮುನೆಕೊಳಲುವಿನ ಬಾಡಿಗೆ ಮನೆಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಅರ್ನೆಸ್ಟ್ ಒನ್ಯೆಕಾಚಿ ಉಗಾ (45) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಅರ್ನೆಸ್ಟ್ ಒನ್ಯೆಕಾಚಿ ಇದ್ದ ಬಾಡಿಗೆ ನಿವಾಸದ ಮೇಲೆ ದಾಳಿ ನಡೆಸಿ ಡ್ರಗ್ಸ್​ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಕಾಡುಗೋಡಿ ಮತ್ತು ಹೆಣ್ಣೂರು ಪೊಲೀಸರು ಈ ಹಿಂದೆ ಇದೇ ರೀತಿಯ ಡ್ರಗ್ಸ್ ಪ್ರಕರಣಗಳಲ್ಲಿ ಬಂಧಿಸಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಜೈಲಿನಿಂದ ಬಿಡುಗಡೆಯಾದ ನಂತರ ಆತ ಮತ್ತೆ ಡ್ರಗ್ಸ್ ಮಾರಾಟ ಚಟುವಟಿಕೆಗಳನ್ನು ಪ್ರಾರಂಭಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಮಹಿಳೆಯರ ಒಳ ಉಡುಪು ಕದ್ದು ವಿಕೃತಾನಂದ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಸೈಕೋ ಯುವಕ

ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ವಿಭಾಗವು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಹೆಚ್ಚಿನ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಆತನಿಗೆ ಎಲ್ಲಿಂದ ಡ್ರಗ್ಸ್​ ಪೂರೈಕೆಯಾಗುತ್ತಿತ್ತು, ಇತರ ಆರೋಪಿಗಳ ಜತೆಗಿನ ಸಂಪರ್ಕ ಇತ್ಯಾದಿ ಎಲ್ಲ ಮಾಹಿತಿಗಳನ್ನು ಸಿಸಿಬಿ ಪೊಲೀಸರು ಕಲೆಹಾಕುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us