AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರ್ಯಾಂಡೆಡ್ ವಾಚ್ ಎಂದು ಕಮ್ಮಿ ಬೆಲೆಗೆ ನಕಲಿ ವಾಚ್​ಗಳನ್ನು ಮಾರುತ್ತಿದ್ದ ಐವರ ಬಂಧನ!

ಬೆಂಗಳೂರಿನಲ್ಲಿ ನಕಲಿ ಬ್ರಾಂಡೆಡ್ ವಾಚ್‌ಗಳನ್ನು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ, ಸುಮಾರು 25 ಲಕ್ಷ ರೂ. ಮೌಲ್ಯದ 670 ನಕಲಿ ಕೈಗಡಿಯಾರಗಳನ್ನು ಜಪ್ತಿ ಮಾಡಲಾಗಿದೆ. ಗ್ರಾಹಕರನ್ನು ಮೋಸಗೊಳಿಸಿ ಕಡಿಮೆ ಬೆಲೆಗೆ ಮೂಲ ಬ್ರಾಂಡ್ ಉತ್ಪನ್ನಗಳೆಂದು ನಂಬಿಸಿ ಮಾರಾಟ ಮಾಡುತ್ತಿದ್ದರು. ಸಿಸಿಬಿ ಆರ್ಥಿಕ ಅಪರಾಧ ಪ್ರಕರಣ ದಾಖಲಿಸಿ, ಹೆಚ್ಚಿನ ತನಿಖೆ ನಡೆಸುತ್ತಿದೆ.

ಬ್ರ್ಯಾಂಡೆಡ್ ವಾಚ್ ಎಂದು ಕಮ್ಮಿ ಬೆಲೆಗೆ ನಕಲಿ ವಾಚ್​ಗಳನ್ನು ಮಾರುತ್ತಿದ್ದ ಐವರ ಬಂಧನ!
ಸಾಂದರ್ಭಿಕ ಚಿತ್ರImage Credit source: google
ಭಾವನಾ ಹೆಗಡೆ
|

Updated on: Apr 01, 2026 | 10:00 AM

Share

ಬೆಂಗಳೂರು, ಏಪ್ರಿಲ್ 01: ಬ್ರಾಂಡೆಡ್ ವಾಚ್ (Branded Watch)​ ಎಂದು ಹೇಳಿಕೊಂಡು ನಕಲಿ ಗಡಿಯಾರಗಳನ್ನು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿಧೆಡೆ ನಕಲಿ ಕೈ ಗಡಿಯಾರದ ಅಂಗಡಿಗಳನ್ನು ನಡೆಸುತ್ತಿದ್ದು, ಪೊಲೀಸರು ಅವರಿಂದ ಸುಮಾರು 25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಸಿದ್ಧ ಭಾರತೀಯ ಬ್ರಾಂಡ್‌ಗಳ ಹೆಸರಿನಲ್ಲಿ ನಕಲಿ ಗಡಿಯಾರಗಳ ಮಾರಾಟ

ಬಂಧಿತ ಆರೋಪಿಗಳನ್ನು ಹರೀಶ್ ಕುಮಾರ್, ಸಯ್ಯದ್ ಜೈಸಾದ್ ಇಕ್ಬಾಲ್, ಮೊಹಮ್ಮದ್ ಹಬೀಬ್ ಹುಸೈನ್, ಖಲೀಮ್ ಉಲ್ಲಾ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಇವರು ನಗರದ ಆರ್‌ಟಿ ನಗರ, ಗಂಗಾನಗರ ಮತ್ತು ಚಿಕ್ಕಪೇಟೆ ಪ್ರದೇಶಗಳಲ್ಲಿ ಅಂಗಡಿಗಳನ್ನು ನಡೆಸುತ್ತಿದ್ದು, ಪ್ರಸಿದ್ಧ ಭಾರತೀಯ ಬ್ರಾಂಡ್‌ಗಳ ಹೆಸರಿನಲ್ಲಿ ನಕಲಿ ಗಡಿಯಾರಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಐದು ಅಂಗಡಿಗಳ ಮೇಲೆ ದಾಳಿ ನಡೆಸಿದರು. ದಾಳಿಯ ವೇಳೆ 670 ನಕಲಿ ಗಡಿಯಾರಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯವನ್ನು ಸುಮಾರು 25 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಗ್ರಾಹಕರನ್ನು ಯಾಮಾರಿಸಲು ಆರೋಪಿಗಳು ಕಡಿಮೆ ಬೆಲೆಯಲ್ಲಿ, “ಆಫರ್ ರೇಟ್”ನಲ್ಲಿ ಗಡಿಯಾರಗಳನ್ನು ನೀಡುತ್ತಿದ್ದರು. ಇವು ಮೂಲ ಬ್ರಾಂಡ್ ಉತ್ಪನ್ನಗಳೇ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಸ್ತುತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ