ಬೆಂಗಳೂರು ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 10 ಡ್ರಗ್ಸ್ ಪೆಡ್ಲರ್‌ಗಳ ಬಂಧನ, 5.50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
15 ದಿನಗಳಿಂದ ಪೆಡ್ಲರ್‌ಗಳ ಚಟುವಟಿಕೆ ಬಗ್ಗೆ ಸಿಸಿಬಿ ಕಾರ್ಯಾಚರಣೆ ನಡೆಸಿದ್ದು, 8 ವಿದೇಶಿ ಡ್ರಗ್ ಪೆಡ್ಲರ್ಗಳು ಸೇರಿ 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 5.50 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಡ್ರಗ್ಸ್ ದಂಧೆಗೆ ಇಳಿದಿದ್ದರು.
ಬೆಂಗಳೂರು, ಅ.27: ಬೆಂಗಳೂರು ಸಿಸಿಬಿ ಪೊಲೀಸರು (CCB Police) ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಡ್ರಗ್ (Drugs) ಜಾಲ ಪತ್ತೆ ಹಚ್ಚಿದ್ದಾರೆ. 15 ದಿನಗಳಿಂದ ಪೆಡ್ಲರ್‌ಗಳ ಚಟುವಟಿಕೆ ಬಗ್ಗೆ ಸಿಸಿಬಿ ಕಾರ್ಯಾಚರಣೆ ನಡೆಸಿದ್ದು, 8 ವಿದೇಶಿ ಡ್ರಗ್ ಪೆಡ್ಲರ್ಗಳು ಸೇರಿ 10 ಆರೋಪಿಗಳನ್ನು ಬಂಧಿಸಿದ್ದಾರೆ (Arrest). ಬಂಧಿತರಿಂದ 5.50 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಹಣ ಗಳಿಸಲು ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ.
ಕಾಡುಗೋಡಿ, K.R.ಪುರಂ, ಸೋಲದೇವನಹಳ್ಳಿ, HSR ಲೇಔಟ್, ವೈಟ್‌ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ. ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನು ಬಂಧಿತರಿಂದ ಎಂಡಿಎಂಎ ಕ್ರಿಸ್ಟೆಲ್ 3,806 ಮಾತ್ರೆ, 50 ಗ್ರಾಂ ಕೊಕೆನ್, ಎಕ್ಸ್‌ಟಿಸಿ ಪಿಲ್ಸ್ 25, ಎಲ್‌ಎಸ್‌ಡಿ ಸ್ಟ್ರೀಪ್ಸ್ 50, 5 ಕೆಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ 1 ಕಾರು, 3 ಬೈಕ್, 9 ಮೊಬೈಲ್ ಜಪ್ತಿ ಮಾಡಲಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.
ಡ್ರಗ್ಸ್ ವಿರುದ್ಧದ ಈ ಸಮರದಲ್ಲಿ ಅಪರ ಪೊಲೀಸ್ ಆಯುಕ್ತರು, ಪಶ್ಚಿಮ ಹಾಗೂ ಉಪ ಪೊಲೀಸ್ ಆಯುಕ್ತರು ಅಪರಾಧ-2 ರವರ ಮಾರ್ಗದರ್ಶನದಲ್ಲಿ ಸಿಸಿಬಿಯ ಮಾದಕ ದವ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಭಾಗಿಯಾಗಿತ್ತು.
ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ನೋಟಿಸ್
ಇದೇ ತಿಂಗಳ 18 ನೇ ತಾರೀಖಿನಂದು ಕೋರಮಂಗಲದ ಹುಕ್ಕಾ ಬಾರ್‌ನಲ್ಲಿ ಕೆಲೆಸಗಾಗರರು ಕೆಲಸ ಮಾಡುವಾಗಲೇ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿತ್ತು. ಹೀಗಾಗಿ ಎಚ್ಚೆತ್ತುಕೊಂಡ ಬಿಬಿಎಂಪಿ ಅಧಿಕಾರಿಗಳು ಪರವಾನಗಿ ಪಡೆದ ಬಾರ್ ಗಳು ನಿಯಮಾವಳಿ ಪಾಲಿಸುತ್ತಿವೆ ಇಲ್ಲ ಅಂತ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳು ತಪಾಸಣೆಯನ್ನ ನಡೆಸುತ್ತಿದ್ದಾರೆ ಹಾಗೂ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳ ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡುತ್ತಿದ್ದಾರೆ. ಈ ವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ 826 ಉದ್ದಿಮೆಗಳ ಪರಿಶೀಲನೆ ನಡೆಸಿದ್ದು, ಅದರಲ್ಲಿ 406 ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಿ ಪರವಾನಿಗೆ ನಿಯಮ ಪಾಲಿಸದ 47 ಉದ್ದಿಮೆಗಳನ್ನು ಬಿಬಿಎಂಪಿ ಅಧಿಕಾರಿಗಳು ಮುಚ್ಚಿಸಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:54 pm, Fri, 27 October 23