ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಆರೋಪಿಗಳ ಬಂಧನ

ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಆರೋಪಿಗಳ ಬಂಧನ
ಸಾಂಕೇತಿಕ ಚಿತ್ರ
Follow us
TV9 Web
| Updated By: shivaprasad.hs

Updated on: Sep 29, 2021 | 11:18 AM

ಬೆಂಗಳೂರು: ನಗರದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಹೈಗ್ರೌಂಡ್ಸ್, ಶೇಷಾದ್ರಿಪುರಂ, ಉಪ್ಪಾರಪೇಟೆ, ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿತ್ತು. ಈ ಕುರಿತ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹ 5 ಲಕ್ಷವನ್ನು ಜಪ್ತಿ ಮಾಡಲಾಗಿದೆ.

ಐವರು ಆರೋಪಿಗಳು ಮೊಬೈಲ್ ಮುಖಾಂತರ ಬೆಟ್ಟಿಂಗ್ ನಡೆಸುತ್ತಿದ್ದರು. ಪಂದ್ಯ ನಡೆಯುವ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿಗಳ ವಿರುದ್ಧ ಪ್ರತ್ಯೇಕ ಠಾಣೆಗಳಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಟೋಯಿಂಗ್ ಮಾಡಿದ್ದ ವಾಹನ ಬಿಡಲು 800 ರೂ ಲಂಚಕ್ಕೆ ಬೇಡಿಕೆ; ಟೋಯಿಂಗ್ ಸಿಬ್ಬಂದಿ ವಶಕ್ಕೆ ಬೆಂಗಳೂರು: ಜಯನಗರ ಸಂಚಾರಿ ಠಾಣೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಟೋಯಿಂಗ್ ಮಾಡಿದ್ದ ದ್ವಿಚಕ್ರ ವಾಹನವನ್ನು ಮರಳಿ ನೀಡಲು 800 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಸಿದ್ದೇಗೌಡ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದೆ. ಸೆಪ್ಟೆಂಬರ್ 25ರಂದು ಜೆ.ಪಿ.ನಗರದಲ್ಲಿ ನಿಲ್ಲಿಸಿದ್ದ ಬೈಕ್ ಟೋಯಿಂಗ್ ಮಾಡಲಾಗಿತ್ತು. ಠಾಣೆಗೆ ಹೋಗಿ ವಿಚಾರಿಸಿದಾಗ ಆರೋಪಿ 800 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಟೋಯಿಂಗ್ ಸಿಬ್ಬಂದಿ ಶುಲ್ಕ ಕಟ್ಟಿದರೆ 1,500 ರೂಪಾಯಿ ಆಗುತ್ತದೆ. ನಮಗೆ 800 ರೂ. ಲಂಚ ನೀಡಿದರೆ ಬಿಡುವುದಾಗಿ ಹೇಳಿದ್ದ. ಸದ್ಯ ಟೋಯಿಂಗ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿರುವ ಎಸಿಬಿ ಕೃತ್ಯದಲ್ಲಿ ಪೊಲೀಸ್ ಸಿಬ್ಬಂದಿ ಪಾತ್ರದ ಬಗ್ಗೆ ತನಿಖೆ ನಡೆಸಲಿದೆ.

ಇದನ್ನೂ ಓದಿ:

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಸಾವು ಪ್ರಕರಣ; 9 ತಿಂಗಳ ಮಗುವನ್ನು ತಾಯಿ ಹತ್ಯೆ ಮಾಡಿರುವುದು ದೃಢ

Coronavirus cases in India: ಸತತ ಎರಡನೇ ದಿನ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 20,000 ಕ್ಕಿಂತ ಕಡಿಮೆ, 378 ಮಂದಿ ಸಾವು

ಹೆಂಡತಿ ಆತ್ಮಹತ್ಯೆಯ ಕೆಲ ದಿನಗಳ ಬಳಿಕ ವಿಷ ಸೇವಿಸಿ ಸಿಆರ್​ಪಿಎಫ್ ಯೋಧ ಆತ್ಮಹತ್ಯೆ, ಮಗ ಅನಾಥ

(Bengaluru CCB Police arrested 5 people who are involved in Cricket betting)

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ