ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ

ಬೆಂಗಳೂರು ನಗರ ಪೊಲೀಸ್​ ಮತ್ತು ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಮುಕ್ತ ನಗರವನ್ನಾಗಿಸಲು ಪಣತೊಟ್ಟಿದ್ದಾರೆ. ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳು ಪೆಡ್ಲರ್​ಗಳನ್ನು ಬಂಧಿಸಿ, ಡ್ರಗ್ಸ್​ ಅನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಇದೀಗ, ಸಿಸಿಬಿ ಅಧಿಕಾರಿಗಳು ಬೃಹತ್​ ಕಾರ್ಯಾಚರಣೆ ನಡೆಸಿದ್ದು, 9 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ
ವಿದೇಶಿ ಪೆಡ್ಲರ್ಸ್
Follow us
| Updated By: ವಿವೇಕ ಬಿರಾದಾರ

Updated on: Oct 22, 2024 | 1:09 PM

ಬೆಂಗಳೂರು, ಅಕ್ಟೋಬರ್​ 22: ಕೇಂದ್ರ ಅಪರಾಧ ವಿಭಾಗದ (CCB) ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ (Drugs)​ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್​​ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್​ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ. ಬಂಧಿತರು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್​​ ಅನ್ನು 8 ರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾರೆ. ಬಂಧಿತರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

21 ಕೋಟಿ ಮೌಲ್ಯದ ಡ್ರಗ್ಸ್​ ಪತ್ತೆ

ಸಿಸಿಬಿ ಅಧಿಕಾರಿಗಳು ಶ್ವಾನದಳದ ಸಹಾಯದಿಂದ ಕಳೆದ ವಾರ ಚಾರಾಜಪೇಟೆ ಬಳಿಯ ಅಂಚೆ ಕಚೇರಿಯಲ್ಲಿ ಸುಮಾರು 3500 ಪೋಸ್ಟ್​​ಗಳನ್ನ ಪರಿಶೀಲನೆ ನಡೆಸಿದರು. ಈ ವೇಳೆ ಯುಸ್, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೆದರಲ್ಯಾಂಡ್ ಹಾಗೂ ಇತರೆ ದೇಶಗಳಿಂದ ಬಂದಿರುವ 606 ಪೋಸ್ಟ್​ಗಳಲ್ಲಿ ಬರೋಬ್ಬರಿ 21 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಐಷಾರಾಮಿ ಡ್ರಗ್ಸ್​ಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಚಾಮರಾಜಪೇಟೆ ಅಂಚೆ ಕಚೇರಿ ಮೇಲೆ ಸಿಸಿಬಿ ದಾಳಿ: ಸ್ಪೋಟಕ ವಿಚಾರ ಬಹಿರಂಗ

ಈ ಸಂಬಂಧ ಸಿಸಿಬಿ ಅಧಿಕಾರಿಗಳು ಒಟ್ಟು 12 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ತಂಡ ಕೆಲ ಪೆಡ್ಲರ್​ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೆಡ್ಲರ್​ಗಳ ವಿಚಾರಣೆ ವೇಳೆ ಹಾಂಕಾಂಗ್, ಥೈಲ್ಯಾಂಡ್, ಅಮೆರಿಕಗೆ ಲಿಂಕ್ ಇರುವುದು ಪತ್ತೆಯಾಗಿದೆ. ಸಿಸಿಬಿ ವಿಶೇಷ ತಂಡ ಸದ್ಯ ಅಂತಾರಾಷ್ಟ್ರೀಯ ಡ್ರಗ್ ನೆಟ್​ವರ್ಕ್​ ಬಗ್ಗೆ ತನಿಖೆ ನಡೆಸುತ್ತಿದೆ.

ಬೆಂಗಳೂರಿಗೆ ಕೇವಲ ದೇಶದ ವಿವಿಧ ರಾಜ್ಯಗಳಿಂದ ಮಾತ್ರ ಡ್ರಗ್ಸ್ ಬರುತ್ತಿಲ್ಲ, ಬದಲಿಗೆ ವಿದೇಶಗಳಿಂದಲೂ ಬರುತ್ತಿದೆ ಎಂಬ ಮಾಹಿತಿ ಅಂಚೆ ಕಚೇರಿ ಮೇಲೆ ದಾಳಿ ಮಾಡಿದ ಮೇಲೆ ಗೊತ್ತಾಗಿದೆ. ಅದರಿಂದ ಸಿಸಿಬಿ ಪೊಲೀಸರು ವಿದೇಶಿ ಪಾರ್ಸೆಲ್​ಗಳ ಮೇಲೆ ನಿಗಾ ಇಟ್ಟಿದ್ದು, ಮಾದಕ ವಸ್ತುಗಳ ಜಾಲ ಮಟ್ಟ ಹಾಕಲು ಶತಪ್ರಯತ್ನ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!