Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಬಿಡದಿಯಲ್ಲಿ ಆತ್ಮಹತ್ಯೆ

ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ರಾಜ್ಯದಲ್ಲಿ ಬಹಳಷ್ಟು ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ವಿರುದ್ಧ ಆರೋಪ ಕೇಳಿಬಂದಿದೆ. ಸದ್ಯ ಪ್ರಕರರಣದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ. ಇಂಥ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಬಿಡದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಬಿಡದಿಯಲ್ಲಿ ಆತ್ಮಹತ್ಯೆ
ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ
Follow us
Prajwal Kumar NY
| Updated By: Ganapathi Sharma

Updated on:Aug 05, 2024 | 11:44 AM

ಬೆಂಗಳೂರು, ಆಗಸ್ಟ್ 5: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಸದ್ಯ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಗೊತ್ತಾಗಿದ್ದು ಹೇಗೆ?

ವ್ಯಕ್ತಿಯೊಬ್ಬರ ದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಬಿಡದಿ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿತ್ತು. ಈ ಬಗ್ಗೆ ಸ್ಥಳೀಯರೊಬ್ಬರು ಬಿಡದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಬಳಿಕ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರಿಗೆ ಮೃತಪಟ್ಟವರು ಸಿಸಿಬಿ ಪೊಲೀಸ್ ಇನ್​ಸ್ಪೆಕ್ಟರ್ ಎಂಬುದು ಗೊತ್ತಾಯಿತು.

ತಿಮ್ಮೇಗೌಡ ಸುಮಾರು 20 ವರ್ಷಗಳಿಂದ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರು, ರಾಮನಗರ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ತಿಂಗಳುಗಳ ಹಿಂದಷ್ಟೇ ಅವರು ಸಿಸಿಬಿ ಆರ್ಥಿಕ ವಿಭಾಗಕ್ಕೆ ವರ್ಗಾವಣೆಯಾಗಿದ್ದರು.

ಇದನ್ನೂ ಓದಿ: PSI ಪರಶುರಾಮ್‌ ಸಾವು: ಸರ್ಕಾರ ಆದೇಶಿಸಿದ ಮರುದಿನವೇ ಯಾದಗಿರಿಗೆ ಸಿಐಡಿ ಎಂಟ್ರಿ, ಮೊದಲ ದಿನ ಏನೇನಾಯ್ತು?

ಇದೀಗ ಬಿಡದಿ ಪೊಲೀಸರು ತಿಮ್ಮೇಗೌಡ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಆ ನಂತರದಲ್ಲಿ ಪಿಎಸ್ಐ ಪರಶುರಾಮ್ ಸಾವು ಕೂಡ ಬಹಳಷ್ಟು ಸದ್ದು ಮಾಡುತ್ತಿದೆ. ಈ ಎಲ್ಲ ಘಟನೆಗಳ ಬೆನ್ನಲ್ಲೇ ಇದೀಗ ಸಿಸಿಬಿ ಇನ್ಸ್​​​ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 am, Mon, 5 August 24

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​