AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಐಪಿಎಸ್ ಲೇಔಟ್ ವಿಲ್ಲಾದಲ್ಲಿ ಭರ್ಜರಿ ರೇವ್ ಪಾರ್ಟಿ: ಸಿಸಿಬಿ ದಾಳಿ, ಮೂವರ ಬಂಧನ!

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಐಪಿಎಸ್ ಲೇಔಟ್ ಸರ್ವಿಸ್ ವಿಲ್ಲಾದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಮಿಗೋಸ್ ಆ್ಯಪ್ ಮೂಲಕ ಯುವಕ-ಯುವತಿಯರನ್ನು ಆಹ್ವಾನಿಸಿ ಮದ್ಯ ಹಾಗೂ ಹುಕ್ಕಾ ಪಾರ್ಟಿ ಆಯೋಜಿಸಿದ್ದ ದೀಕ್ಷಿತ್ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನ ಐಪಿಎಸ್ ಲೇಔಟ್ ವಿಲ್ಲಾದಲ್ಲಿ ಭರ್ಜರಿ ರೇವ್ ಪಾರ್ಟಿ: ಸಿಸಿಬಿ ದಾಳಿ, ಮೂವರ ಬಂಧನ!
ಆರೋಪಿಗಳು
ವಿಕಾಸ್​ ಬಿಎಂ
| Edited By: |

Updated on:Jul 29, 2026 | 11:49 AM

Share

ಮುಖ್ಯಾಂಶಗಳು

  • ಎಚ್‌ಎಸ್‌ಆರ್ ಲೇಔಟ್ ವಿಲ್ಲಾದಲ್ಲಿ ಸಿಸಿಬಿ ಅಧಿಕಾರಿಗಳಿಂದ ದಿಢೀರ್ ದಾಳಿ.
  • ಅಮಿಗೋಸ್ ಆ್ಯಪ್ ಮೂಲಕ ಪ್ರವೇಶ ಶುಲ್ಕ ವಸೂಲಿ ಮಾಡಿ ಪಾರ್ಟಿ.
  • ಮೂವರು ಆಯೋಜಕರ ಬಂಧನ, ಮದ್ಯ ಹಾಗೂ ಹುಕ್ಕಾ ಸೀಜ್.

ಬೆಂಗಳೂರು, ಜುಲೈ 29: ನಗರದ ಎಚ್‌ಎಸ್‌ಆರ್ ಲೇಔಟ್‌ನ 6ನೇ ಸೆಕ್ಟರ್‌ನಲ್ಲಿರುವ ಪ್ರತಿಷ್ಠಿತ ಐಪಿಎಸ್ ಲೇಔಟ್‌ನ ‘ಸಿ-9’ ಸರ್ವಿಸ್ ವಿಲ್ಲಾದಲ್ಲಿ ಇಡೀ ರಾತ್ರಿ ನಡೆಯುತ್ತಿದ್ದ ಭರ್ಜರಿ ರೇವ್ ಪಾರ್ಟಿ (Rave Party) ಮೇಲೆ ಸಿಸಿಬಿಯ ಮಹಿಳಾ ಘಟಕದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿದ್ದಾರೆ.

ಆ್ಯಪ್ ಮೂಲಕ ಯುವಕ-ಯುವತಿಯರಿಗೆ ಆಹ್ವಾನ

ಪೊಲೀಸರ ರೇಡ್ ಬೆದರಿಕೆಯಿಂದ ಪಾರಾಗಲು ಐಪಿಎಸ್ ಲೇಔಟ್ ಸುರಕ್ಷಿತ ಎಂದು ಭಾವಿಸಿದ್ದ ಆಯೋಜಕರು, ‘ಅಮಿಗೋಸ್’ ಆ್ಯಪ್ ಮೂಲಕ ಯುವಕ-ಯುವತಿಯರನ್ನು ಆಹ್ವಾನಿಸಿದ್ದರು. ಪಾರ್ಟಿಗೆ ಪ್ರವೇಶಿಸಲು ಯುವಕರಿಂದ 1,099 ರೂ. ಹಾಗೂ ಯುವತಿಯರಿಂದ 499 ರೂ. ಪ್ರವೇಶ ಶುಲ್ಕವನ್ನು ವಸೂಲಿ ಮಾಡಲಾಗಿತ್ತು. ದಿನಕ್ಕೆ 20,000 ರೂ. ಬಾಡಿಗೆಗೆ ‘ರೆವ್ ಕೀ ಹಾಸ್ಪಿಟಾಲಿಟಿ’ ವಿಲ್ಲಾ ಬುಕ್ ಮಾಡಿ, ಇಡೀ ರಾತ್ರಿ ಮದ್ಯ, ನಿಷೇಧಿತ ಹುಕ್ಕಾ ಹಾಗೂ ಇ-ಸಿಗರೇಟ್‌ಗಳೊಂದಿಗೆ ಮೋಜು ಮಸ್ತಿಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಪೊಲೀಸರ ದಾಳಿ

ಖಚಿತ ಸುಳಿವು ಲಭಿಸುತ್ತಿದ್ದಂತೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ರೇವ್ ಪಾರ್ಟಿಯಲ್ಲಿದ್ದ ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸ್ಥಳದಲ್ಲಿದ್ದ ನಿಷೇಧಿತ ಹುಕ್ಕಾ, ಇ-ಸಿಗರೇಟ್ ಹಾಗೂ ಅಪಾರ ಪ್ರಮಾಣದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪಾರ್ಟಿ ಆಯೋಜಿಸಿದ್ದ ದೀಕ್ಷಿತ್, ವೇದಾಂತ್ ಪಂಡಿತ್ ಮತ್ತು ಶಂಕರ್ ಎಂಬ ಮೂವರು ಆರೋಪಿಗಳನ್ನು ಸಿಸಿಬಿ ಅರೆಸ್ಟ್ ಮಾಡಿದೆ. ಜೊತೆಗೆ ನಿಯಮ ಉಲ್ಲಂಘಿಸಿ ವಿಲ್ಲಾ ನೀಡಿದ್ದ ಮನೆ ಮಾಲೀಕರ ವಿರುದ್ಧ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 am, Wed, 29 July 26

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!