AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕೋರ್ಟ್

ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ 60ನೇ ಸಿಸಿಹೆಚ್​ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕೋರ್ಟ್
‘ಸಿದ್ದು ನಿಜ ಕನಸು’ ಪುಸ್ತಕ
TV9 Web
| Updated By: ವಿವೇಕ ಬಿರಾದಾರ|

Updated on:Jan 09, 2023 | 3:50 PM

Share

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೂರು ರಾಜಕೀಯ ಪಕ್ಷಗಳು ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ದಾಳ ಉರುಳುಸುತ್ತಿವೆ. ಇದರಂತೆ ರಾಜ್ಯ ಬಿಜೆಪಿ (BJP) ನಾಯಕರಿಗೆ ಸಿದ್ದರಾಮಯ್ಯ ಪ್ರಬಲ ವಿರೋಧಿಯಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು (Siddaramaiah) ಗುರಿಯಾಗಿಸಿಕೊಂಡು ‘ಸಿದ್ದು ನಿಜ ಕನಸುಗಳು’ ಪುಸ್ತಕ (Siddu Nija Kanasu Book) ಬಿಡುಗಡೆ ಮಾಡಲು ಬಿಜೆಪಿ ಮುಂದಾಗಿತ್ತು. ಆದರೆ ಬಿಜೆಪಿಯ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ 60ನೇ ಸಿಸಿಹೆಚ್​ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಾಗೇ ಸಚಿವ ಡಾ.ಅಶ್ವತ್ಥ ನಾರಾಯಣ ಮತ್ತಿತರರಿಗೆ ಕೋರ್ಟ್ ನೋಟಿಸ್ ನೀಡಿದೆ.

ಇದನ್ನೂ ಓದಿ: ಮಾನನಷ್ಟ ಕೇಸ್ ದಾಖಲಿಸುವುದಾಗಿ ಸಿದ್ದರಾಮಯ್ಯ ಹೇಳಿಕೆ ವಿಚಾರ: ಸಚಿವ ಅಶ್ವತ್ಥ್‌ ನಾರಾಯಣ ತಿರುಗೇಟು

ಪುಸ್ತಕ ಬಿಡುಗಡೆಗೆ ತಡೆ ಕೋರಿ ಸಿದ್ದರಾಮಯ್ಯ ಪುತ್ರ, ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅರ್ಜಿ ಸಲ್ಲಿಸಿದ್ದರು. ತಂದೆಯ ವಿರುದ್ಧ ಮಾನಹಾನಿಕರ ವಿಷಯಗಳು ಪುಸ್ತಕದಲ್ಲಿವೆ. ಪುಸ್ತಕ ಬಿಡುಗಡೆ ಮಾಡಿದರೆ ತಂದೆಯ ಘನತೆಗೆ ಧಕ್ಕೆಯಾಗುತ್ತೆದೆ. ಸಿದ್ದರಾಮಯ್ಯನವರ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ವಿಷಗಳಿವೆ. ಹೀಗಾಗಿ ಇದಕ್ಕೆ ತಡೆಯಾಜ್ಞೆ ನೀಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:  ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ; ಮಾನನಷ್ಟ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಕೋರ್ಟ್ ಆದೇಶ ಪ್ರತಿ ನಮಗೆ ಸಿಕ್ಕಿಲ್ಲ

ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ 60ನೇ ಸಿಸಿಹೆಚ್​ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿರುವ ಪ್ರತಿ ನಮಗೆ ಸಿಕ್ಕಿಲ್ಲ ಎಂದು ಕಾರ್ಯಕ್ರಮ ಆಯೋಜಕರು ಹೇಳುತ್ತಿದ್ದಾರೆ. ಕೋರ್ಟ್ ಆದೇಶದ ಬಗ್ಗೆ ಮಾಹಿತಿ ಇಲ್ಲ, ನಾವು ಕಾರ್ಯಕ್ರಮ ನಡೆಸುತ್ತೇವೆ ಎಂದು ಆಯೋಜಕರು ಹೇಳಿದ್ದಾರೆ.

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು

ಬೆಂಗಳೂರಿನ ಟೌನ್​ಹಾಲ್​ನಲ್ಲಿ ಸಿನಾಗ್ ಬುಕ್ಸ್  ಆಯೋಜಿಸಿದ್ದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಕರು ರದ್ದು ಮಾಡಿದ್ದಾರೆ. ಕೋರ್ಟ್ ಮಧ್ಯಂತರ​ ತಡೆಯಾಜ್ಞೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸುವಂತೆ ಆಯೋಜಕರಿಗೆ ಸಚಿವ ಡಾ. ಅಶ್ವಥ್ ನಾರಾಯಣ ಸೂಚಿಸಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಪುರಭವನಕ್ಕೆ ಆಗಮಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:23 pm, Mon, 9 January 23