AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್​ಗಳಿಗೆ ಸಿಸಿಬಿ ಶಾಕ್

CCB Raids On Rowdy Sheeters: ವಾರೆಂಟ್ ಜಾರಿ ಮಾಡಿದ್ದರೂ ಸಹ ನ್ಯಾಯಾಲಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡು ಓಡಾಡಿಕೊಂಡಿದ್ದ ರೌಡಿ ಶೀಟರ್​ಗಳಿಗೆ ಸಿಸಿಬಿ ಶಾಕ್ ಕೊಟ್ಟಿದೆ.

ಕೋರ್ಟ್​ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್​ಗಳಿಗೆ ಸಿಸಿಬಿ ಶಾಕ್
ಸಿಸಿಬಿ ಕಚೇರಿ
ರಾಚಪ್ಪಾಜಿ ನಾಯ್ಕ್
| Edited By: |

Updated on:Nov 08, 2023 | 12:18 PM

Share

ಬೆಂಗಳೂರು, (ನವೆಂಬರ್ 06): ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ(Bengaluru)  ಒಂದು ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ(NIA) ದಾಳಿ ಮಾಡಿದ್ದರೆ, ಮತ್ತೊಂದೆಡೆ ರೌಡಿಶೀಟರ್​ಗಳಿಗೆ (rowdy sheeters) ಸಿಸಿಬಿ (CCB) ಶಾಕ್ ಕೊಟ್ಟಿದೆ. ಬೆಂಗಳೂರು ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ ಮಾಡಿದೆ.  ವಾರೆಂಟ್ ಜಾರಿ ಮಾಡಿದ್ದರೂ ಸಹ ರೌಡಿ ಶೀಟರ್​ಗಳು ನ್ಯಾಯಾಲಯಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡು ಓಡಾಡಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಿಸಿಬಿ ರೌಡಿ ಶೀಟರ್​ಗಳ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿ ಲಾಂಗ್ ,ಮಚ್ಚು,ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ

ರೌಡಿಶೀಟರ್ ರಮೇಶ್ ಅಲಿಯಾಸ್ ,ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ ನಗರದಾದ್ಯಂತ ಇರುವ 20ಕ್ಕೂ ಹೆಚ್ಚು ನಟೋರಿಯಸ್ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರದ ಪೂರ್ವ ,ಪಶ್ಚಿಮ , ಉತ್ತರ ,ದಕ್ಷಿಣ ,ವೈಟ್ ಫೀಲ್ಡ್ ,ಆಗ್ನೇಯ ,ಈಶಾನ್ಯ ವಿಭಾಗದಲ್ಲಿ ಸಿಸಿಬಿ ದಾಳಿ ನಡೆಸಿದೆ.

ಕೆಲ ರೌಡಿ ಗಳ ನಿವಾಸದಲ್ಲಿ ಚೆಕ್, ಸಹಿ ಪಡೆದಿರುವ ಚಾಪಾ ಕಾಗದಗಳು ಪತ್ತೆಯಾಗಿವೆ. ಅಲ್ಲದೇ ರೌಡಿಗಳು ಬಡ್ಡಿ ವ್ಯವಹಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವುದು ಸಹ ತಿಳಿದುಬಂದಿದ್ದು, ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಚೆಕ್ ಹಾಗೈ ಸ್ಟ್ಯಾಂಪ್ ಪೇಪರ್ ಯಾರಿಗೆ ಸೇರಿದ್ದು? ರೌಡಿ ಬಳಿ ಹೇಗೆ ಬಂದವು? ಬಲವಂತವಾಗಿ ಯಾವುದಾದರೂ ಲ್ಯಾಂಡ್ ಮತ್ತು ಸೈಟ್ ಕಬ್ಜಾ ಮಾಡಿದ್ದಾರೆ? ಬೆದರಿಕೆ ಹಾಕಿ ಸೆಟಲ್ ಮೆಂಟ್ ಮಾಡುತ್ತಿದ್ದಾರಾ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.

Published On - 10:39 am, Wed, 8 November 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?