‘ಉತ್ತರ ಭಾರತೀಯರಿಗೆ ಕೆಲಸ ಕೊಡಲ್ಲ’: ಚರ್ಚೆಗೆ ಕಾರಣವಾಯ್ತು ಬೆಂಗಳೂರು ಕಂಪನಿ ಸಿಇಒ ಪೋಸ್ಟ್
ಬೆಂಗಳೂರಿನ A1 Sports World ಸಂಸ್ಥೆಯ CEO ಕಾರ್ತಿಕ್ ಎಸ್.ಜಿ. ಅವರು ಉತ್ತರ ಭಾರತೀಯರಿಗೆ ಕೆಲಸ ಕೊಡಲ್ಲ ಎಂದು ಹೇಳಿದ್ದಾರೆ. ಅವರ ಈ ಶಾಕಿಂಗ್ ಟ್ವೀಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಾರ್ತಿಕ್ ಅವರ ಪೋಸ್ಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು, ಸೆಪ್ಟೆಂಬರ್ 24: ಬೆಂಗಳೂರು ಮೂಲದ ಸಂಸ್ಥೆಯೊಂದು ನೇಮಕಾತಿಯಲ್ಲಿ ಉತ್ತರ ಭಾರತದ ನಿರ್ದಿಷ್ಟ ರಾಜ್ಯಗಳ ಅಭ್ಯರ್ಥಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ಘೋಷಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನ ‘A1 Sports World’ ಸಂಸ್ಥೆಯ ಸಂಸ್ಥಾಪಕ ಹಾಗೂ ಸಿಇಒ ಕಾರ್ತಿಕ್ ಎಸ್‌ಜಿ ಅವರ ಈ ನಿರ್ಧಾರ ಸದ್ಯ ಚರ್ಚೆಗೆ ಕಾರಣವಾಗಿದೆ.
ಇದಕ್ಕಾಗಿ ನಾನು ಕ್ಷಮೆ ಕೋರುತ್ತೇನೆ ಎಂದ ಕಾರ್ತಿಕ್ ಎಸ್‌ಜಿ
ಈ ಕುರಿತಾಗಿ ಕಾರ್ತಿಕ್ ಎಸ್‌ಜಿ ಅವರು ಈ ಕುರಿತಾಗಿ ಟ್ವೀಟ್ ಮಾಡಿದ್ದು, ‘ಸುದೀರ್ಘ ಚರ್ಚೆ ಬಳಿಕ ನಮ್ಮ ಸಂಸ್ಥೆಯಲ್ಲಿ ಉತ್ತರ ಭಾರತದ ನಾಲ್ಕು ರಾಜ್ಯಗಳಾದ ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ ಮತ್ತು ಮಧ್ಯಪ್ರದೇಶ ಮೂಲದ ಯಾವುದೇ ಪುರುಷ ಅಭ್ಯರ್ಥಿಗಳನ್ನು ಇನ್ನು ಮುಂದೆ ಕೆಲಸಕ್ಕೆ ನೇಮಿಸಿಕೊಳ್ಳದಿರಲು ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.
ಕಾರ್ತಿಕ್ ಎಸ್‌ಜಿ ಟ್ವೀಟ್
Im sorry for this…
But today we have made it very clear after lengthy discussion and quarrel…
We will not hire any male candidates in our company who come from these 4 states in north india…
1. Uttar Pradesh. 2. Rajasthan. 3. Bihar. 4. Madhya Pradesh.
We do have 1…
— Karthik SG (@kkarthikkgs) September 22, 2026
ಅಷ್ಟೇ ಅಲ್ಲದೆ ಈ ನಿರ್ಧಾರಕ್ಕೆ ಅವರು ವಿಷಾದ ವ್ಯಕ್ತಪಡಿಸಿದ್ದು, ‘ಈಗಾಗಲೇ ತಮ್ಮಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜಸ್ಥಾನದ ಮಹಿಳಾ ಉದ್ಯೋಗಿಯೊಬ್ಬರು ಈ ನಿರ್ಧಾರಕ್ಕೆ ಶೇಕಡಾ 100ರಷ್ಟು ಬೆಂಬಲ ಸೂಚಿಸಿದ್ದಾರೆ’ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ
ಸಿಇಒ ಅವರ ಈ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇವರ ನಿರ್ಧಾರವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಈ ರೀತಿಯ ಕ್ರಮಕ್ಕೆ ಮತ್ತು ತಾರತಮ್ಯ ಧೋರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಂಸ್ಥೆಯ ನಿರ್ಧಾರಕ್ಕೆ ಕಾರಣ ನೀಡಿದ ಕಾರ್ತಿಕ್
ಇನ್ನು ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ಬೆನ್ನಲ್ಲೇ ಕೆಲ ಕಮೆಂಟ್ಗಳಿಗೆ ಪ್ರತಿಕ್ರಿಯಿಸಿರುವ ಕಾರ್ತಿಕ್, ತಮ್ಮ ಸಂಸ್ಥೆಯ ನಿರ್ಧಾರಕ್ಕೆ ಕಾರಣವನ್ನೂ ತಿಳಿಸಿದ್ದಾರೆ. ‘ನಾವು ಮಕ್ಕಳೊಂದಿಗೆ ಕೆಲಸ ಮಾಡುತ್ತೇವೆ, ಹೀಗಾಗಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ. ಅಲ್ಲದೆ, ಆ ಭಾಗಗಳಿಂದ ಬರುವ ಯುವಕರಿಗೆ ಜೀವನದ ಮೌಲ್ಯದ ಬಗ್ಗೆ ಅರಿವಿರುವುದಿಲ್ಲ’ ಎಂದು ಅವರು ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:04 pm, Thu, 24 September 26




