Anganwadi workers Protest: ನ.22ರಂದು ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋ, ಸರ್ಕಾರಕ್ಕೆ ಎದುರಾಯ್ತು ಸಂಕಷ್ಟ

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ನಾಳೆ ಬೆಳಗ್ಗೆ 10 ಗಂಟೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಿ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಅನೇಕ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

Anganwadi workers Protest: ನ.22ರಂದು ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋ, ಸರ್ಕಾರಕ್ಕೆ ಎದುರಾಯ್ತು ಸಂಕಷ್ಟ
ಸಂಗ್ರಹ ಚಿತ್ರ
Follow us
Kiran Surya
| Updated By: ಆಯೇಷಾ ಬಾನು

Updated on:Nov 21, 2023 | 10:19 AM

ಬೆಂಗಳೂರು, ನ.21: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು (Anganwadi Workers) ಹೊಸ ಸಮರ ಸಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ (Bengaluru Chalo) ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ನಾಳೆ ಬೆಳಗ್ಗೆ 10 ಗಂಟೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಿ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಬರೋಬ್ಬರಿ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಇದ್ದಾರೆ. ಕೊರೊನಾ ಸಮಯದಲ್ಲಿ ಜೀವದ ಹಂಗು ತೊರೆದು ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದಾರೆ. ಈ ಸಮಯದಲ್ಲಿ ಹಲವು ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಮರಣ ಹೊಂದಿದ್ದಾರೆ. ಇದರಿಂದ ಅನೇಕ‌ ಕುಟುಂಬಗಳು ಬೀದಿ ಪಾಲಾಗಿವೆ. ಸರ್ಕಾರದಿಂದ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರಿಗೆ ಗೌರವ ಧನ ಹೆಸರಲ್ಲಿ ಶೋಷಣೆ ಮಾಡುತ್ತಿದೆ. ಇವರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ನಂಜನಗೂಡು: ವಿನೂತನ ಪ್ರತಿಭಟನೆ, ಆಡಳಿತಭವನದಲ್ಲೇ ನಿದ್ದಮಾಡಿದ ರೈತರು

ಬೇಡಿಕೆಗಳು ಏನೇನು?

  1. ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು
  2. ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಬೇಕು
  3. ಎಲ್ಲಾ‌ ಮಿನಿ ಅಂಗನವಾಡಿ ಕೇಂದ್ರಗಳನ್ನ ಮೇಲ್ವರ್ಜೆಗೆ ಏರಿಸಬೇಕು
  4. ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಗ್ರಾಜ್ಯುಟಿ ಹಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು ₹15 ಸಾವಿರ, ₹10 ಸಾವಿರ ಹೆಚ್ಚಿಸಲಾಗುವುದೆಂದು ಚುನಾವಣಾ ಪೂರ್ವದಲ್ಲಿ ಬೆಳಗಾವಿಯ ಖಾನಪುರದಲ್ಲಿ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭರವಸೆ ಕೊಟ್ಟಿದ್ದರು. ಕಾಂಗ್ರೆಸ್ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ‌‌ ಮಾಡಲು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒತ್ತಾಯಿಸಿದ್ದಾರೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:14 am, Tue, 21 November 23

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ