AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ, ಓರ್ವನ ಬಂಧನ

ಚಾಮರಾಜಪೇಟೆಯ ವಿನಾಯಕನಗರದಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಹಸುಗಳ ಮಾಲೀಕರಾದ ಕರ್ಣ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಸುಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಘಟನೆಯನ್ನು ವಿವಿಧ ರಾಜಕೀಯ ನಾಯಕರು ಖಂಡಿಸಿದ್ದಾರೆ.

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ, ಓರ್ವನ ಬಂಧನ
ಗಾಯಗೊಂಡ ಹಸು, ಆರೋಪಿ ಸೈಯದ್​ ನಸ್ರು
ವಿವೇಕ ಬಿರಾದಾರ
|

Updated on:Jan 13, 2025 | 10:39 AM

Share

ಬೆಂಗಳೂರು, ಜನವರಿ 13: ಚಾಮರಾಜಪೇಟೆಯ (Chamrajpet) ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ (Cow) ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್​​​, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್​ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ​ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಹಸುವಿನ ಮಾಲೀಕ ಕರ್ಣ ಮಾತನಾಡಿ, ಆರೋಪಿ ಹುಚ್ಚ ಎಂದು  ಈಗ ಹೇಳುತ್ತಿದ್ದಾರೆ. ಹುಚ್ಚ ಈ ರೀತಿ ಮಾಡುವುದಕ್ಕೆ ಸಾಧ್ಯನಾ? ಕೃತ್ಯ ಎಸಗಿರುವ ಆ ವ್ಯಕ್ತಿಯನ್ನು ನಾನು ನೋಡಿದ್ದೇನೆ. ಬ್ಯಾಗ್ ಅಂಗಡಿಯವನಿಗೆ ಹಸುವಿನಿಂದ ತೊಂದರೆ ಆಗುತ್ತಿತ್ತು ಅನಿಸುತ್ತೆ. ಎಷ್ಟು ವರ್ಷದಿಂದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಮಾಲೀಕನನ್ನು ಕೇಳಿ. ಮೊದಲು ಬ್ಯಾಗ್ ಅಂಗಡಿ ಮಾಲೀಕನನ್ನು ಅರೆಸ್ಟ್ ಮಾಡಬೇಕು ಎಂದರು.

ಮುಂಜಾನೆ ಮೂರೂವರೆಗೆ ಈ ಘಟನೆ ಆಗಿದೆ ಅಂತಾರೆ. ಆಗ ಯಾವ ಬಾರ್ ಓಪನ್ ಇರುತ್ತೆ ಹೇಳಿ ನೋಡೋಣ? ಒಬ್ಬನೇ ಈ ಕೃತ್ಯ ಎಸಗಿರುವುದು ಸಾಧ್ಯವಿಲ್ಲ. ಇದರ ಹಿಂದೆ ಯಾರೋ ಇದ್ದಾರೆ. ಆರೋಪಿಯನ್ನು ತರಾತುರಿಯಲ್ಲಿ ಬಂಧಿಸಿ ಜೈಲಿಗೆ ಹಾಕಿದ್ದಾರೆ. ಇದರ ಹಿಂದೆ ಯಾರ ಕೈವಾಡ ಇದೆ ಎಂದು ಗೊತ್ತಾಗಬೇಕು ಎಂದು ಒತ್ತಾಯಿಸಿದರು.

ಏನಿದು ಘಟನೆ

ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.

ಹಸುಗಳ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ​ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೂ ಕಾಲಿಟ್ಟ ಚಿರತೆ: ಈ ಏರಿಯಾಕ್ಕೆ ಹೋಗಲು ಕ್ಯಾಬ್, ಆಟೋ, ಡೆಲಿವರಿ ಬಾಯ್ಸ್ ಹಿಂದೇಟು!

ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್​ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.

ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ವಿ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Mon, 13 January 25

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ