Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಚೆನ್ನೈ ರೈಲು ವೇಗ ಹೆಚ್ಚಳ: ಪ್ರಯಾಣದ ಸಮಯ ಕಡಿತ

ದಕ್ಷಿಣ ಪಶ್ಚಿಮ ರೈಲ್ವೇ ಬೆಂಗಳೂರು-ಚೆನ್ನೈ ನಡುವಿನ ರೈಲುಗಳ ವೇಗವನ್ನು ಗಂಟೆಗೆ 130 ಕಿಮೀಗೆ ಹೆಚ್ಚಿಸುವ ಪ್ರಾಯೋಗಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬೆಂಗಳೂರು-ಜೋಲಾರಪಟ್ಟಿ ಮಾರ್ಗದಲ್ಲಿ ಈ ಪರೀಕ್ಷೆ ನಡೆಸಲಾಗಿದ್ದು, ವಂದೇ ಭಾರತ್ ಮತ್ತು ಶತಾಬ್ದಿ ರೈಲುಗಳ ಪ್ರಯಾಣದ ಸಮಯವನ್ನು 20-25 ನಿಮಿಷಗಳಷ್ಟು ಕಡಿಮೆ ಮಾಡುವ ನಿರೀಕ್ಷೆಯಿದೆ. ಇದು ಬೆಂಗಳೂರು ಮತ್ತು ಚೆನ್ನೈ ನಗರಗಳ ನಡುವಿನ ಸಂಪರ್ಕವನ್ನು ಸುಧಾರಿಸಲಿದೆ.

ಬೆಂಗಳೂರು-ಚೆನ್ನೈ ರೈಲು ವೇಗ ಹೆಚ್ಚಳ: ಪ್ರಯಾಣದ ಸಮಯ ಕಡಿತ
ವಂದೇ ಭಾರತ ರೈಲು
Follow us
ವಿವೇಕ ಬಿರಾದಾರ
|

Updated on:Dec 06, 2024 | 3:01 PM

ಬೆಂಗಳೂರು, ಡಿಸೆಂಬರ್​ 06: ಬೆಂಗಳೂರು-ಚೆನ್ನೈ (Bengaluru-Chennai) ನಡುವಿನ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಗುರುವಾರ (South Westran Railway) ರೈಲುಗಳನ್ನು ಗಂಟೆಗೆ 110 ರಿಂದ 130 ಕಿಮೀ ವೇಗದಲ್ಲಿ ಓಡಿಸುವ ಪರೀಕ್ಷೆ ಕೈಗೊಂಡಿತು. ಬೆಂಗಳೂರು-ಜೋಲಾರಪಟ್ಟಿ ಮಾರ್ಗದಲ್ಲಿ ರೈಲು ಗಂಟೆಗೆ 130 ಕಿಮೀ ವೇಗದಲ್ಲಿ ಸಂಚರಿಸುವ ಮೂಲಕ ಪ್ರಾಯೋಗಿ ಸಂಚಾರ ಯಶಸ್ವಿಯಾಯಿತು.

ರೈಲು ಕೆಎಸ್​ಆರ್​ ಬೆಂಗಳೂರಿನಿಂದ ಬೆಳಗ್ಗೆ 8:05 ರಿಂದ ಹೊರಟು ಜೋಲಾರಪಟ್ಟಿಯನ್ನು ಅದೇ ದಿನ ಬೆಳಗ್ಗೆ 9:28ಕ್ಕೆ ತಲುಪಿತು. ನಂತರ ಜೋಲಾರಪಟ್ಟಿಯಿಂದ ರೈಲು ಮಧ್ಯಾಹ್ನ 2:30ಕ್ಕೆ ಹೊರಟು ಕೆಎಸ್​ಆರ್​ ಬೆಂಗಳೂರನ್ನು ಅದೇ ದಿನ ಸಂಜೆ 4:03 ನಿಮಿಷಕ್ಕೆ ತಲುಪಿತು ಎಂದು ಬೆಂಗಳೂರು ರೈಲ್ವೆ ವಿಭಾಗ ತಿಳಿಸಿದೆ.

ಕಳೆದ ವರ್ಷ ಜೋಲಾರ್​ಪಟ್ಟಿ-ಚೆನ್ನೈ ನಡುವಿನ ಮಾರ್ಗದಲ್ಲಿ ರೈಲನ್ನು ಗಂಟಗೆ 130 ಕಿಮೀ ವೇಗದಲ್ಲಿ ಓಡಿಸುವ ಕಾಮಗಾರಿ ಪೂರ್ಣಗೊಂಡಿತ್ತು. ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ಸಿಕ್ಕಿತ್ತು. ಈಗ ಬೆಂಗಳೂರು-ಜೋಲಾರ್​​ಪಟ್ಟಿ ರೈಲುಗಳ ವೇಗ ಹೆಚ್ಚಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಯೋಗಿಕ ಪರೀಕ್ಷೆ ನಡೆಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಬೆಳ್ಳಂದೂರು ರೈಲು ನಿಲ್ದಾಣಕ್ಕೆ ಪಣತ್ತೂರಿನ ಹೆಸರು ಇಡುವಂತೆ ಪತಿಭಟನೆ: ಮೋದಿಗೆ ಪತ್ರ

ಕೆಎಸ್​ಆರ್​ ಬೆಂಗಳೂರು-ಚೆನ್ನೈ ಸೆಂಟ್ರಲ್ 359 ಕಿಮೀ ಮಾರ್ಗದಲ್ಲಿ ಎರಡು ವಂದೇ ಭಾರತ್​ ಮತ್ತು ಎರಡು ಶತಾಬ್ದಿ ರೈಲುಗಳು ಸಂಚರಿಸುತ್ತವೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಡುವ ವಂದೇ ಭಾರತ್ (ರೈಲು ಸಂಖ್ಯೆ 20608) ಚೆನ್ನೈ ತಲುಪಲು 4 ಗಂಟೆ 25 ನಿಮಿಷ ಸಮಯ ತೆಗೆದುಕೊಳ್ಳುತ್ತದೆ. ಬೆಳಗ್ಗೆ ಬೆಂಗಳೂರಿನಿಂದ ಹೊರಡುವ ರೈಲು (20663) 4 ಗಂಟೆ 35 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಆದರೆ, ಈ ಪ್ರಾಯೋಗಿಕ ಸಂಚಾರ ಯಶಸ್ವಿಯಿಂದ ಬೆಂಗಳೂರು-ಚೆನ್ನೈ ನಡುವಿನ ವಂದೇ ಭಾರತ್​ ರೈಲುಗಳ ಸಂಚಾರ ಅವಧಿ 25 ನಿಮಿಷ ಕಡಿಮೆಯಾಗಿ, 4 ಗಂಟೆ ಆಗಲಿದೆ.

ಬೆಳಗ್ಗೆ ಬೆಂಗಳೂರಿನಿಂದ ಹೊರಡುವ ಶತಾಬ್ದಿ ರೈಲು (12028) ಚೆನ್ನೈ ತಲುಪಲು ಐದು ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಸಂಜೆ ವಾಪಸ್​​ ಬರುವಾಗ 5 ಗಂಟೆ 10 ನಿಮಿಷ ಸಮಯ ತೆಗೆದುಕೊಳ್ಳುತ್ತದೆ. ಈ ಪ್ರಾಯೋಗಿಕ ಸಂಚಾರ ಯಶಸ್ವಿಯಿಂದ ಈ ಮಾರ್ಗದ ಶತಾಬ್ದಿ ಸಂಚಾರದ ಅವಧಿ ಸುಮಾರು 20 ನಿಮಿಷ ಕಡಿಮೆಯಾಗಿ, 5 ಗಂಟೆಗಳಿಗೆ ಬರಲಿದೆ. ಪ್ರಯಾಣದ ಅವಧಿ ಕಡಿಮೆ ಮಾಡುವುದರಿಂದ ಎರಡೂ ನಗರಗಳಿಗೆ ಅನುಕೂಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:53 pm, Fri, 6 December 24

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್