AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸೆ. 3-4ರಂದು ಬಂದ್ ಆಗಲಿವೆ 6-7 ಸಾವಿರ ಚಿಕನ್ ಅಂಗಡಿಗಳು! BSWML ವಿರುದ್ಧ ಅಂಗಡಿ ಮಾಲೀಕರ ಆಕ್ರೋಶ

Bengaluru chicken shops bandh: ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳ ತ್ಯಾಜ್ಯಕ್ಕೆ ಪ್ರತಿ ಕೆಜಿಗೆ 5 ರೂಪಾಯಿ ಶುಲ್ಕ ನಿಗದಿ ವಿರೋಧಿಸಿ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಸೆಪ್ಟೆಂಬರ್ 3ರಂದು ಪ್ರತಿಭಟನೆ, 4ರಂದು ಬಂದ್‌ಗೆ ಕರೆ ನೀಡಿದೆ. ಇದರಿಂದ ಸಾವಿರಾರು ಅಂಗಡಿಗಳು ಬಂದ್ ಆಗಲಿದ್ದು, ಗ್ರಾಹಕರಿಗೆ ಅಡಚಣೆಯಾಗುವ ಸಾಧ್ಯತೆ ಇದೆ ಎಂದು ಸಂಘಟನೆ ತಿಳಿಸಿದೆ.

ಬೆಂಗಳೂರಿನಲ್ಲಿ ಸೆ. 3-4ರಂದು ಬಂದ್ ಆಗಲಿವೆ 6-7 ಸಾವಿರ ಚಿಕನ್ ಅಂಗಡಿಗಳು! BSWML ವಿರುದ್ಧ ಅಂಗಡಿ ಮಾಲೀಕರ ಆಕ್ರೋಶ
ಬೆಂಗಳೂರಿನಲ್ಲಿ ಸೆ. 3-4ರಂದು ಬಂದ್ ಆಗಲಿವೆ 6-7 ಸಾವಿರ ಚಿಕನ್ ಅಂಗಡಿಗಳುImage Credit source: tv9
ಕಿರಣ್​ ಸೂರ್ಯ
| Edited By: |

Updated on: Sep 01, 2026 | 12:04 PM

Share

ಮುಖ್ಯಾಂಶಗಳು

  • ಸೆಪ್ಟೆಂಬರ್ 3ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ
  • ಸೆಪ್ಟೆಂಬರ್ 4ರಂದು ಬೆಂಗಳೂರಿನ ಚಿಕನ್ ಅಂಗಡಿಗಳು ಬಂದ್
  • ತ್ಯಾಜ್ಯಕ್ಕೆ ಪ್ರತಿ ಕೆಜಿಗೆ ₹5 ಶುಲ್ಕಕ್ಕೆ ವಿರೋಧ

ಬೆಂಗಳೂರು, ಸೆಪ್ಟೆಂಬರ್ 1: ಬೆಂಗಳೂರಿನಲ್ಲಿ (Bengaluru) ಚಿಕನ್ ಅಂಗಡಿಗಳ ತ್ಯಾಜ್ಯ ವಿಲೇವಾರಿಗೆ ಪ್ರತಿ ಕೆಜಿಗೆ 5 ರೂಪಾಯಿ ಶುಲ್ಕ ನಿಗದಿ ಮಾಡಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಕ್ರಮವನ್ನು ವಿರೋಧಿಸಿ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಪ್ರತಿಭಟನೆಗೆ ಮುಂದಾಗಿದೆ. ಸೆಪ್ಟೆಂಬರ್ 3 ಮತ್ತು 4ರಂದು ನಗರದ ಚಿಕನ್ ಅಂಗಡಿಗಳು ಬಂದ್ ಆಚರಿಸಲು ನಿರ್ಧರಿಸಿರುವುದಾಗಿ ಸಂಘಟನೆ ತಿಳಿಸಿದೆ. ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಪ್ರಕಟಣೆಯ ಪ್ರಕಾರ, ಸೆಪ್ಟೆಂಬರ್ 3ರಂದು ಚಿಕನ್ ಅಂಗಡಿಗಳನ್ನು ಬಂದ್ ಮಾಡಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಸೆಪ್ಟೆಂಬರ್ 4ರಂದು ಬೆಂಗಳೂರಿನಾದ್ಯಂತ ಚಿಕನ್ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಲು ತೀರ್ಮಾನಿಸಲಾಗಿದೆ.

ಪ್ರತಿದಿನ ಸುಮಾರು 2ರಿಂದ 3 ಲಕ್ಷ ಕೆಜಿ ತ್ಯಾಜ್ಯ ಉತ್ಪತ್ತಿ

ಅಸೋಸಿಯೇಷನ್ ಹೇಳಿರುವಂತೆ, ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 7 ಲಕ್ಷ ಕೆಜಿ ಚಿಕನ್ ಮಾರಾಟವಾಗುತ್ತಿದ್ದು, 2ರಿಂದ 3 ಲಕ್ಷ ಕೆಜಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಒಂದು ಚಿಕನ್ ಅಂಗಡಿಯಿಂದ ದಿನಕ್ಕೆ ಸರಾಸರಿ 30 ಕೆಜಿ ತ್ಯಾಜ್ಯ ಹೊರಬರುತ್ತದೆ ಎಂದು ಸಂಘಟನೆ ತಿಳಿಸಿದೆ.

ತ್ಯಾಜ್ಯ ವಿಲೇವಾರಿಗೇ ಕೊಡಬೇಕು ತಿಂಗಳಿಗೆ 4,500 ರೂ!

ಪ್ರತಿ ಕೆಜಿ ಚಿಕನ್ ತ್ಯಾಜ್ಯಕ್ಕೆ 5 ರೂ. ದರ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ, ಒಂದು ಅಂಗಡಿಯವರು ದಿನಕ್ಕೆ ಸುಮಾರು 150 ರೂ. ಹಾಗೂ ತಿಂಗಳಿಗೆ ಸುಮಾರು 4,500 ರೂ. ಪಾವತಿಸಬೇಕಾಗುತ್ತದೆ. ಈ ಶುಲ್ಕವನ್ನು ವಿರೋಧಿಸಿ ಅಂಗಡಿ ಮಾಲೀಕರು ಹೋರಾಟಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ಚಿಕನ್, ಮಟನ್ ತ್ಯಾಜ್ಯ ವಿಲೇವಾರಿಗೆ ಹೊಸ ರೂಲ್ಸ್​​, ಶುಲ್ಕವೂ ನಿಗದಿ

ಈ ಕ್ರಮದಿಂದ ಬೆಂಗಳೂರಿನ ಸುಮಾರು 6ರಿಂದ 7 ಸಾವಿರ ಚಿಕನ್ ಅಂಗಡಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ತಿಳಿಸಿದೆ. ತ್ಯಾಜ್ಯ ವಿಲೇವಾರಿ ಶುಲ್ಕದ ವಿಚಾರದಲ್ಲಿ BSWML ವಿರುದ್ಧ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ