ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು: ಬದುಕಿದ್ದೇ ಪವಾಡ!

ಬೆಂಗಳೂರಿನ ನಾಯಂಡಳ್ಳಿಯಲ್ಲಿ ಆಟವಾಡುವಾಗ ಒಂದೂವರೆ ವರ್ಷದ ಮಗು ಮೊದಲನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಬೀಳಿಸುವಂತಿದೆ. ಪ್ರಾಣಾಪಾಯದಿಂದ ಮಗು ಸದ್ಯ ಬಚಾವ್​​ ಆಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ತಲೆಭಾಗಕ್ಕೆ ಗಾಯ ಹೊರತುಪಡಿಸಿ ಮತ್ತೆಲ್ಲೂ ಏನೂ ಆಗಿಲ್ಲ ಎಂದು ಮಗುವಿನ ತಂದೆ ತಿಳಿಸಿದ್ದಾರೆ.

ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು: ಬದುಕಿದ್ದೇ ಪವಾಡ!
ಮೊದಲನೇ ಮಹಡಿಯಿಂದ ಬಿದ್ದು ಮಗು ಸಹನಾ
Image Credit source: Tv9 Kannada
Edited By:

Updated on: Apr 09, 2026 | 11:50 AM

ಬೆಂಗಳೂರು, ಏಪ್ರಿಲ್​​ 09: ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದು ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ (Bengaluru) ನಾಯಂಡಳ್ಳಿಯಲ್ಲಿ ನಡೆದಿದೆ. ಆಯತಪ್ಪಿ ಬಿದ್ದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಸಹನಾಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಪ್ರಿಲ್‌ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಡಿಯಿಂದ ಹೆಣ್ಣು ಮಗು ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಗುವಿನ ಆರೋಗ್ಯದಲ್ಲಿ ಚೇತರಿಕೆ

ಇನ್ನು ಗಂಭೀರ ಗಾಯಗೊಂಡಿರುವ ಮಗು ಸಹನಾ ನವೀನ್ ಮತ್ತು ಜಯಶ್ರೀ ದಂಪತಿಯದ್ದಾಗಿದ್ದು, ಮಗಳ ಸದ್ಯದ ಆರೋಗ್ಯದ ಬಗ್ಗೆ ತಂದೆ ನವೀನ್​​ ಮಾಹಿತಿ ನೀಡಿದ್ದಾರೆ. ಬಸವನಗುಡಿಯ ರಂಗದೊರೆ ಸ್ಮಾರಕ ಆಸ್ಪತ್ರೆಯ ಐಸಿಯುನಲ್ಲಿ ಸಹನಾಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ತಲೆ ಭಾಗಕ್ಕೆ ಸ್ವಲ್ಪ ಗಾಯವಾಗಿದ್ದು ಬಿಟ್ಟರೆ ಮತ್ತೆಲ್ಲಿಯೂ ಏನೂ ಆಗಿಲ್ಲ. ತಲೆಗೆ ಮೂರು ಹೊಲಿಗೆ ಹಾಕಲಾಗಿದ್ದು, ಸಹನಾ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಡಿಜೆ ಹಳ್ಳಿಯಲ್ಲಿ ಹಸುಗಳ‌ ಶೆಡ್​​ಗೆ ಬೆಂಕಿ; ವಿಕೃತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಘಟನೆ ನಡೆದಿದ್ದೇಗೆ?

ಮಗುವಿನ ಜೊತೆಗೇ ಇದ್ದ ತಾಯಿ ಜಯಶ್ರೀ ಹಾಲು ಕಾಯಿಸಲು ಇಟ್ಟಿದ್ದರು. ಹೀಗಾಗಿ ಹಾಲು ಉಕ್ಕಿತಾ ಎಂದು ನೋಡಿ ಬರಲು ಅರೆಕ್ಷಣ ಅವರು ತೆರಳಿದ್ದರು. ಅಷ್ಟರಲ್ಲಿ ಮಗು ಸಹನಾ ಮಹಡಿಯಿಂದ ಬಿದ್ದು ಗಾಯಗೊಂಡಿದೆ. ಹೊರಗಡೆ ಇದ್ದ ಚೇರ್​​ ಹತ್ತಿದ ಪರಿಣಾಮ ಮಗುವಿಗೆ ಆಯತಪ್ಪಿದೆ. ಮಗು ಕೆಳಗಡೆ ಬಿದ್ದಿದ್ದನ್ನು ಕಂಡ ರಸ್ತೆಯಲ್ಲಿ ತೆರಳುತ್ತಿದ್ದ ಜನ ಕಿರುಚಾಡುತ್ತಿದ್ದಂತೆ ಹೊರಬಂದು ಮಗುವಿನ ಸ್ಥಿತಿ ಕಂಡ ಜಯಶ್ರೀ ಲೋ ಬಿಪಿ ಉಂಟಾಗಿ ಅಸ್ವಸ್ಥರಾಗಿದ್ದರು. ಸದ್ಯಕ್ಕೆ ಅವರೂ ಚೇತರಿಸಿಕೊಂಡಿದ್ದು, ದಂಪತಿಗೆ ಸಹನಾ ಏಕೈಕ ಮಗು ಎನ್ನಲಾಗಿದೆ. ಮಗು ಸಹಾನಳ ತಂದೆ ನವಿನ್​​ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿರುವ ವ್ಯಕ್ತಿ ಎಂಬ ವಿಚಾರವೂ ಈ ವೇಳೆ ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us