AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಸಂತೆಗೆ ಬೆಂಗಳೂರು ಸಜ್ಜು: ವಿಶೇಷ ಮೆಟ್ರೋ ಫೀಡರ್​​ ಸೇವೆ, ಮಾರ್ಗ ಬದಲಾವಣೆ ಕುರಿತಾದ ಮಾಹಿತಿ ಇಲ್ಲಿದೆ

ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ ನಡೆಯಲಿದೆ. ಈ ಚಿತ್ರಸಂತೆಯನ್ನು ಚಿತ್ರಕಲಾ ಪರಿಷತ್ ಆಯೋಜಿಸಿದೆ. ಚಿತ್ರಸಂತೆಯನ್ನು ವೀಕ್ಷಿಸಲು ಸಾವಿರಾರು ಜನರು ಆಗಮಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಎಂಟಿಸಿಯು ಮೆಟ್ರೋ ಫೀಡರ್‌ ಬಸ್​ ವ್ಯವಸ್ಥೆ ಮಾಡಿದೆ.

ಚಿತ್ರಸಂತೆಗೆ ಬೆಂಗಳೂರು ಸಜ್ಜು: ವಿಶೇಷ ಮೆಟ್ರೋ ಫೀಡರ್​​ ಸೇವೆ, ಮಾರ್ಗ ಬದಲಾವಣೆ ಕುರಿತಾದ ಮಾಹಿತಿ ಇಲ್ಲಿದೆ
ಚಿತ್ರಸಂತೆ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jan 07, 2024 | 10:47 AM

Share

ಬೆಂಗಳೂರು, ಜನವರಿ 07: ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ (Chitra Santhe 2024) ನಡೆಯಲಿದೆ. ಈ ಚಿತ್ರಸಂತೆಯನ್ನು ಚಿತ್ರಕಲಾ ಪರಿಷತ್ (Chitrakala Parishatha) ಆಯೋಜಿಸಿದೆ. ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಇನ್ನು  ಕಲಾಪ್ರದರ್ಶನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ವೀಕ್ಷಿಸಲು ಸಾವಿರಾರು ಜನರು ಆಗಮಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಎಂಟಿಸಿಯು (BMTC) ಮೆಟ್ರೋ ಫೀಡರ್‌ ಬಸ್​ ವ್ಯವಸ್ಥೆ ಮಾಡಿದೆ. ಈ ಬಸ್​ಗಳು ಬೆಳಗ್ಗೆ 8 ರಿಂದ ರಾತ್ರಿ 8ರ ವರೆಗೆ ಸಂಚರಿಸಲಿವೆ. ಈ ಮೆಟ್ರೋ ಫೀಡರ್ ಬಸ್​ನಲ್ಲಿ ಪ್ರಯಾಣಕ್ಕೆ 15 ರೂ. ನಿಗದಿ ಮಾಡಲಾಗಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಆನಂದರಾವ್‌ ಸರ್ಕಲ್‌, ಶಿವಾನಂದ ಸ್ಟೋರ್ಸ್‌ ಮಾರ್ಗವಾಗಿ ವಿಧಾನಸೌಧ ಮೆಟ್ರೊ ನಿಲ್ದಾಣಕ್ಕೆ ಪ್ರತಿ 10 ನಿಮಿಷಕ್ಕೊಂದರಂತೆ 4 ಬಸ್‌ ಹಾಗೂ ಮಂತ್ರಿ ಮಾಲ್‌ ಮೆಟ್ರೊ ನಿಲ್ದಾಣದಿಂದ ಸೆಂಟ್ರಲ್‌ ಟಾಕೀಸ್‌, ಲಿಂಕ್‌ ರಸ್ತೆ, ಶಿವಾನಂದ ಸ್ಟೋರ್ಸ್‌ ಮುಖೇನ ವಿಧಾನಸೌಧಕ್ಕೆ 4 ಬಸ್‌ಗಳು ಸಂಚರಿಸಲಿವೆ.

ಮಾರ್ಗ ಬದಲಾವಣೆ

ಬೆಳಗ್ಗೆ 6ರಿಂದ ರಾತ್ರಿ 9 ಗಂಟೆವರೆಗೆ ಕುಮಾರಕೃಪಾ ರಸ್ತೆ ಹಾಗೂ ಹರೇ ಕೃಷ್ಣ ರಸ್ತೆಯ ಉಕ್ಕಿನ ಕೆಳ ಸೇತುವೆ ಭಾಗದ ಶಿವಾನಂದ ವೃತ್ತದಿಂದ ಗುರುರಾಜ ಜಂಕ್ಷನ್‌ ಬಳಿಯ ನವ ಕರ್ನಾಟಕ ಪಬ್ಲಿಕೇಷನ್‌ ಕಟ್ಟಡದವರೆಗಿನ ಉತ್ತರ ಭಾಗದ ರಸ್ತೆಯಲ್ಲಿಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸವಾರರು ಈ ರಸ್ತೆ ಬಳಸದೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕು.

ಇದನ್ನೂ ಓದಿ: Basavaraj Bommai: ಪ್ರದರ್ಶನಕ್ಕೆ ಇಡಲಾಗಿದ್ದ ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟ ಸಿಎಂ ಬೊಮ್ಮಾಯಿ‌

ಈ ಬಾರಿಯ ಚಿತ್ರಸಂತೆ ‘ಬಾಹ್ಯಕಾಶ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಭಾರತೀಯ ವಿಜ್ಞಾನಿಗಳಿಗೆ ಸಮರ್ಪಿಸಲಾಗಿದೆ. ಚಿತ್ರಸಂತೆಯಲ್ಲಿ ಎಲ್ಲಾ ವಿಜ್ಞಾನಿಗಳ ಮಾಹಿತಿ ಇರಲಿದೆ.  ಚಿತ್ರಸಂತೆಗೆ ಈ ಬಾರಿ 22 ರಾಜ್ಯಗಳಿಂದ ಕಲಾವಿದರು ಬಂದಿದ್ದಾರೆ. ದೇಶದ 1500 ಕಲಾವಿದರ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಈ ಬಾರಿ ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಲಕ್ಷಂತರ‌ ಜನರು ಚಿತ್ರಸಂತೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಕಲಾವಿದರಿಂದ ನೇರವಾಗಿ ಮಾರಾಟ

ಚಿತ್ರಸಂತೆಯಲ್ಲಿ 100 ರೂ.ದಿಂದ  ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ. ಮೈಸೂರು ಶೈಲಿಯ ಕಲೆ, ತಂಜಾವೂರಿನ ಶೈಲಿ, ರಾಜಾಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ‌ ಮತ್ತು ಜಲವರ್ಣಗಳಲ್ಲಿ ಚಿತ್ರಗಳನ್ನು ಬಿಡಸಲಾಗುತ್ತದೆ. ಅಲ್ಲದೇ ಆಕ್ರಿಕಲ್ , ಕೊಲಾಜ್, ಲಿಯೋಗ್ರಾಫ್, ಡೂಡಲ್ ಎಂಬೋಸಿಂಗ್ , ವಿಡಿಯೋ ಕಲೆ, ಗ್ರಾಫಿಕ್ ಕಲೆ , ಶಿಲ್ಪ ಕಲೆ, ಇನ್ ಸ್ಟಲೇಶನ್, ಫಾರ್ಮಾಮೆನ್ಸ್ ಸೇರಿದಂತೆ ಹಲವು ಪ್ರತಿಷ್ಠಾಪನ ಕಲೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.

 ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:51 am, Sun, 7 January 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ