AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 11ರಂದು ಬೆಂಗಳೂರು ಟ್ರಾಫಿಕ್ ಪೊಲೀಸರ ಸಭೆ; ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ಅವಕಾಶ

ಬೆಂಗಳೂರು ನಗರದ ರಸ್ತೆಗಳಲ್ಲಿ ಸುಗಮ ಸಂಚಾರವನ್ನು ಜಾರಿಗೊಳಿಸಲು ಹಾಗೂ ಅಪಘಾತಗಳನ್ನು ಸಮರ್ಥವಾಗಿ ತಡೆಗಟ್ಟಲು ಸಾರ್ವಜನಿಕರ ಸಹಕಾರ ಪ್ರಮುಖ ಪಾತ್ರವಹಿಸುತ್ತದೆ. ನಗರ ಸಂಚಾರ ಪೊಲೀಸ್ ವಿಭಾಗವು ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಹಾಗೂ ಬಾಂಧವ್ಯಗಳನ್ನು ಸಾಧಿಸುವ ನಿಟ್ಟಿನಲ್ಲಿ ನಾಗರಿಕ ಸಂಚಾರ ವೇದಿಕೆಯನ್ನು ನಡೆಸಲಾಗುತ್ತಿದೆ.

ಮಾರ್ಚ್ 11ರಂದು ಬೆಂಗಳೂರು ಟ್ರಾಫಿಕ್ ಪೊಲೀಸರ ಸಭೆ; ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ಅವಕಾಶ
ಬೆಂಗಳೂರು ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ ಸಲೀಂ
Rakesh Nayak Manchi
|

Updated on:Mar 10, 2023 | 5:54 PM

Share

ಬೆಂಗಳೂರು: ನೀವು ನಗರ ನಿವಾಸಿಗಳಾಗಿದ್ದು, ನೆಲೆಸಿರುವ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಟ್ರಾಫಿಕ್​ಗೆ ಸಂಬಂಧಿಸಿದ ಯಾವುದಾದರು ಸಮಸ್ಯೆಯನ್ನು ಎದುರಿಸುತ್ತಿದ್ದರೆ ಮಾರ್ಚ್ 11ರಂದು ನಡೆಯುವ ಸಂಚಾರ ಠಾಣಾ ಪೊಲೀಸರ ಸಭೆಯಲ್ಲಿ ಸಮಸ್ಯೆಗಳನ್ನು ಹೇಳಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹೌದು, ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮೂರನೇ ನಾಗರಿಕ ಸಂಚಾರ ವೇದಿಕೆ ಸಭೆ (Bengaluru citizens traffic forum meeting) ನಡೆಸಲಾಗುತ್ತಿದೆ. ಎಲ್ಲಾ 48 ಸಂಚಾರ ಪೊಲೀಸ್ ಠಾಣೆಗಳಲ್ಲಿ ಬೆಳಗ್ಗೆ 11.30ರಿಂದ ಮಧ್ಯಾಹ್ನ 01.30ರವರೆಗೆ ಸಭೆ ನಡೆಯಲಿದ್ದು, ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅಹವಾಲು ಸ್ವೀಕರಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರತಿ ತಿಂಗಳು ಎರಡನೇ ಶನಿವಾರದಂದು ಈ ಸಭೆಯನ್ನು ಆಯೋಜಿಸುತ್ತಾರೆ. ಜನರು ತಮ್ಮ ಅನುಭವಗಳನ್ನು ಹೇಳಬಹುದು ಮತ್ತು ಪಟ್ಟಣದಲ್ಲಿ ಸಂಚಾರ ನಿರ್ವಹಣೆಯನ್ನು ಸುಧಾರಿಸಲು ತಮ್ಮ ಸಲಹೆಗಳನ್ನು ನೀಡಬಹುದಾಗಿದೆ.

ಬೆಂಗಳೂರು ನಗರದ ರಸ್ತೆಗಳಲ್ಲಿ ಸುಗಮ ಸಂಚಾರವನ್ನು ಜಾರಿಗೊಳಿಸಲು ಹಾಗೂ ಅಪಘಾತಗಳನ್ನು ಸಮರ್ಥವಾಗಿ ತಡೆಗಟ್ಟಲು ಸಾರ್ವಜನಿಕರ ಸಹಕಾರ ಪ್ರಮುಖ ಪಾತ್ರವಹಿಸುತ್ತದೆ. ನಗರ ಸಂಚಾರ ಪೊಲೀಸ್ ವಿಭಾಗವು ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಹಾಗೂ ಬಾಂಧವ್ಯಗಳನ್ನು ಸಾಧಿಸುವ ನಿಟ್ಟಿನಲ್ಲಿ ನಾಗರಿಕ ಸಂಚಾರ ವೇದಿಕೆಯನ್ನು ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ನಿವಾರಿಸುವುದಷ್ಟೇ ಅಲ್ಲದೆ ಸಂಚಾರವನ್ನು ಸುಗಮಗೊಳಿಸುವ ಹಾಗೂ ರಸ್ತೆ ಸುರಕ್ಷತೆಯನ್ನು ವೃದ್ಧಿಸುವಂತಹ ಸಲಹೆಗಳನ್ನೂ ಸಾರ್ವಜನಿಕರು ಮುಕ್ತವಾಗಿ ನೀಡಬಹುದಾಗಿದೆ.

ಸಾರ್ವಜನಿಕರು ನೀಡುವ ಉತ್ತಮ ಸಲಹೆಗಳನ್ನು ಪರಿಗಣಿಸಿ ಅವುಗಳನ್ನು ನಿಯಮಗಳನ್ನಾಗಿ ಪರಿವರ್ತಿಸಿ ಕಾರ್ಯಗತಗೊಳಿಸಲಾಗುತ್ತದೆ. ಸಾರ್ವಜನಿಕರು ಸಂಚಾರದ ಬಗ್ಗೆ ತಮ್ಮ ದೂರು, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಸಾರ್ವಜನಿಕರು ತಮ್ಮ ಹಿಂದಿನ ಪ್ರಕರಣಗಳ ಬಗ್ಗೆ ವಿವರ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನೂ ಪಡೆಯಬಹುದಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Bengaluru: ಮದ್ವೆಯಾದ ಒಂದೇ ದಿನಕ್ಕೆ ಲವ್ವಿಡವ್ವಿ ಬಯಲು, ಹೆಂಡ್ತಿಗೆ ಹೆದರಿ ಟ್ರಾಫಿಕ್‌ನಲ್ಲೇ ಕಾರು ಇಳಿದು ಹೋಗಿದ್ದ ಪತಿ ನಾಪತ್ತೆ

“ನಾಗರಿಕರು ಹತ್ತಿರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಿ ಟ್ರಾಫಿಕ್ ಅಧಿಕಾರಿಗಳೊಂದಿಗೆ ಸಂವಹನ ನಡೆಸಬಹುದು ಮತ್ತು ಯಾವುದೇ ಟ್ರಾಫಿಕ್ ಸಂಬಂಧಿತ ಸಮಸ್ಯೆಗಳನ್ನು ತಿಳಿಸಿ ಪರಿಹಾರವನ್ನು ಪಡೆಯಬಹುದು” ಸಂಚಾರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ಟ್ರಾಫಿಕ್ ವಿಭಾಗದ ಎಲ್ಲಾ ಉನ್ನತ ಪೊಲೀಸರು ವಿವಿಧ ಠಾಣೆಗಳ ಸಭೆಗಳಲ್ಲಿ ಭಾಗವಹಿಸುತ್ತಾರೆ.

“ನಾಗರಿಕರು ಈ ಅವಕಾಶವನ್ನು ಬಳಸಿಕೊಳ್ಳಬಹುದು ಮತ್ತು ಮಾರ್ಚ್ 11 ರಂದು ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 01:30 ರ ನಡುವೆ ತಮ್ಮ ಹತ್ತಿರದ ಟ್ರಾಫಿಕ್ ಪೊಲೀಸ್ ಠಾಣೆಗಳಲ್ಲಿ ನಡೆಯುವ ಸಂವಾದಾತ್ಮಕ ಸಭೆಯಲ್ಲಿ ಸ್ವಯಂಪ್ರೇರಣೆಯಿಂದ ಭಾಗವಹಿಸಬಹುದು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಹದಗೆಡುತ್ತಿರುವ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ನಾಗರಿಂದ ದೂರುಗಳು ಬರುತ್ತಿದ್ದವು. ಹೀಗಾಗಿ ಡಿಸೆಂಬರ್ 2022 ರಲ್ಲಿ, ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ ಸಲೀಂ ಅವರು ನಾಗರಿಕರ ಸಂಚಾರ ವೇದಿಕೆಯನ್ನು ಮರು ಆರಂಬಿಸಿದ್ದರು. ಈ ಹಿಂದೆ ಸಲೀಂ ಅವರು ಸಿಟಿ ಟ್ರಾಫಿಕ್ ಪೋಲೀಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಬೆಂಗಳೂರಿನಲ್ಲಿ ಈ ಉಪಕ್ರಮವನ್ನು ಪ್ರಾರಂಭಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Fri, 10 March 23