ಬೆಂಗಳೂರಿನಲ್ಲಿ ಪೊಲೀಸರ ವಶಕ್ಕೆ ಮತ್ತೋರ್ವ ಶಂಕಿತ ಉಗ್ರ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 25, 2022 | 8:28 AM

ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಕಟ್ಟಡವೊಂದರ ಮೂರನೇ ಮಹಡಿಯಲ್ಲಿದ್ದ ಕೋಣೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ಶಂಕಿತ ಉಗ್ರನೂ ವಾಸ್ತವ್ಯ ಹೂಡಿದ್ದ.

ಬೆಂಗಳೂರಿನಲ್ಲಿ ಪೊಲೀಸರ ವಶಕ್ಕೆ ಮತ್ತೋರ್ವ ಶಂಕಿತ ಉಗ್ರ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಶಂಕಿತ ಉಗ್ರ (Suspected Terrorist) ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ನಗರ ಅಪರಾಧ ದಳ (City Crime Branch – CCB) ವಿಭಾಗದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭಾನುವಾರ ರಾತ್ರಿ (ಜುಲೈ 24) 7 ಗಂಟೆ ವೇಳೆಯಲ್ಲಿ ಶಂಕಿತ ಉಗ್ರ ವಾಸವಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದರು. ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಕಟ್ಟಡವೊಂದರ ಮೂರನೇ ಮಹಡಿಯಲ್ಲಿದ್ದ ಕೋಣೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ಶಂಕಿತ ಉಗ್ರನೂ ವಾಸ್ತವ್ಯ ಹೂಡಿದ್ದ. ಖಚಿತ ಮಾಹಿತಿ ಮೇರೆಗೆ 30ಕ್ಕೂ ಹೆಚ್ಚು ಸಿಬ್ಬಂದಿಯಿದ್ದ ಸಿಸಿಬಿ ಪೊಲೀಸರ ತಂಡವು ದಾಳಿ ನಡೆಸಿತ್ತು. ಪ್ರಕರಣ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರು ಉಗ್ರರ ಅಡಗುತಾಣವಾಗುತ್ತಿದೆಯೇ ಎನ್ನುವ ಶಂಕೆಯನ್ನೂ ಈ ಪ್ರಕರಣ ಹುಟ್ಟುಹಾಕಿದೆ. ಕಳೆದ ತಿಂಗಳಷ್ಟೇ ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈತ ಶ್ರೀರಾಂಪುರದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ತನ್ನ ಹೆಸರನ್ನೂ ತಾಲಿಕ್ ಎಂದು ಬದಲಿಸಿಕೊಂಡಿದ್ದ. ಬಿಎನ್​ಎಲ್​ ಏರ್​ ಸರ್ವಿಸ್​ನಲ್ಲಿ ಕೆಲಸ ಮಾಡುತ್ತಿದ್ದ ತಾಲಿಬ್, ಕಾಶ್ಮೀರದಿಂದ ಬೆಂಗಳೂರಿಗೆ ಬರುವಾಗ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ತನ್ನ​ ಪತ್ನಿಯನ್ನೂ ಜೊತೆಗೆ ಕರೆತಂದಿದ್ದ. ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದ.

ಶಂಕಿತ ಉಗ್ರರ ಮೇಲೆ ಹದ್ದಿನ ಕಣ್ಣು

ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನದ ನಂತರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಇಂತಹ ಶಂಕಿತರ ಮೇಲೆ ಪೊಲೀಸ್ ಇಲಾಖೆ ನಿರಂತರ ಕಣ್ಣಿಟ್ಟಿದೆ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಹದ್ದಿನ ಕಣ್ಣಿಟ್ಟಿದ್ದಾರೆ. ಹಿಂದೆಯೂ ಭಟ್ಕಳ, ಶಿರಸಿಯಲ್ಲಿ ಶಂಕಿತರನ್ನು ಬಂಧಿಸಲಾಗಿತ್ತು. ಕಾಶ್ಮೀರ ಪೊಲೀಸರಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದ್ದರು.

Published On - 6:41 am, Mon, 25 July 22