ಚೈತ್ರಾ ಕುಂದಾಪುರ ಅರೆಸ್ಟ್: ಪ್ರಕರಣದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಬಿ.ದಯಾನಂದ್
Chaitra Kundapura Cheating Case: ಬೈಂದೂರಿನ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ(Chaitra Kundapura) ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯಿಸಿದ್ದು, ಮಹತ್ವದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 13): ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬೈಂದೂರಿನ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ(Chaitra Kundapura) ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಉಡುಪಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡಿದ ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ ನಿನ್ನೆ (ಸೆಪ್ಟೆಂಬರ್ 12) ಬಂಧಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್(bengaluru city police commissioner B Dayananda) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬಂಡೇಪಾಳ್ಯದಲ್ಲಿ ಉದ್ಯಮಿ ಗೋವಿಂದಬಾಬು ಎಂಬುವರು ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಕೇಸ್ ಸಂಬಂಧ 6 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಅರೋಪಿಗಳು ಒಂದು ರಾಜಕೀಯ ಪಕ್ಷದದಲ್ಲಿ ವಿಧಾನಸಭೆ ಟಿಕೆಟ್ ಕೊಡಿಸುವ ಮಾತು ನೀಡಿ ಹಣ ಪಡೆದು ವಂಚಿಸಿದ್ದಾರೆ. ಬೇರೆ ವ್ಯಕ್ತಿಗಳನ್ನು ರಾಜಕೀಯ ಮುಖಂಡರು ಎಂದು ನಂಬಿಸಿ ವಂಚನೆ ಮಾಡಲಾಗಿದೆ. ಈಗ ಅರೋಪಿಗಳ ಅರೆಸ್ಟ್ ಮಾಡಿ ಪೊಲೀಸ್ ಕಸ್ಟಡಿಗೆ ಪಡೆಯಲಿದ್ದೇವೆ. ನಂತರ ಹೆಚ್ಚಿನ ತನಿಖೆ ಮಾಡುತ್ತೆವೆ ಎಂದು ತಿಳಿಸಿದರು.
ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಮನೆಯಲ್ಲಿ ಆಶ್ರಯ ನೀಡಿದ್ದ ಕಾಂಗ್ರೆಸ್ ಮಾಧ್ಯಮ ವಕ್ತಾರೆಗೂ ಸಂಕಷ್ಟ
ಇನ್ನು ಈ ಬಗ್ಗೆ ದೂರುದಾರ ಉದ್ಯಮಿ ಗೋವಿಂದ ಬಾಬು ಟಿವಿ9ಗೆ ಪ್ರತಿಕ್ರಿಯಿಸಿದ್ದು, ನಾನು ಕೊಟ್ಟ ದೂರಿನಲ್ಲಿ ಪೊಲೀಸರಿಗೆ ಸಂಪೂರ್ಣ ಮಾಹಿತಿ ಕೊಟ್ಟಿದ್ದೇನೆ. ಆರೋಪಿಗಳನ್ನ ಪೊಲೀಸರು ಬಂದಿಸಿದ್ದಾರೆ. ಇನ್ನೂ ಇಬ್ಬರ ಬಂಧನ ಬಾಕಿ ಇದೆ. ಇದೀಗ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಮುಗಿದ ಮೇಲೆ ಸಂಫೂರ್ಣ ಮಾಹಿತಿ ಕೊಡುತ್ತೇನೆ. ಎಲ್ಲಾ ಸಾಕ್ಷ್ಯಗಳನ್ನು ಸಹ ಪೊಲೀಸರಿಗೆ ಕೊಟ್ಟಿದ್ದೇನೆ. ನನ್ನ ಆಸ್ತಿಯನ್ನು ಅಡ ಇಟ್ಟು ಲೋನ್ ಮಾಡಿ ಹಣ ಕೊಟ್ಟಿದ್ದೇನೆ. ಅದಕ್ಕೆ ಸಂಬಂಧಿಸಿದ ಸಂಪೂರ್ಣ ಡಾಕ್ಯುಮೆಂಟ್ಗಳು ನನ್ನ ಹತ್ತಿರ ಇವೆ ಎಂದರು.’
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:04 pm, Wed, 13 September 23