AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಘಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಬೆಂಗಳೂರಿನಲ್ಲಿ ಈದ್​ಮಿಲಾದ್​ಗೆ ಕಠಿಣ ಮಾರ್ಗಸೂಚಿ

ಸೋಮವಾರ ಬೆಂಗಳೂರು ನಗರದಲ್ಲಿ ಈದ್​ಮಿಲಾದ್​ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಪಾಲಿಸಬೇಕಾದ ಕೆಲ ಸೂಚನೆಗಳನ್ನು ಪೊಲೀಸರು ಹೊರಡಿಸಿದ್ದಾರೆ. ಒಂದು ವೇಳೆ ನಿಬಂಧನೆಗಳನ್ನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಾಗಮಂಗಲ ಘಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಬೆಂಗಳೂರಿನಲ್ಲಿ ಈದ್​ಮಿಲಾದ್​ಗೆ ಕಠಿಣ ಮಾರ್ಗಸೂಚಿ
ಈದ್​ ಮಿಲಾದ್​ಗೆ ಪೊಲೀಸ್​ ಸೂಚನೆ
ರಾಚಪ್ಪಾಜಿ ನಾಯ್ಕ್
| Edited By: |

Updated on:Sep 13, 2024 | 2:17 PM

Share

ಬೆಂಗಳೂರು, ಸೆಪ್ಟೆಂಬರ್​ 13: ಈದ್‌ಮಿಲಾದ್ (Eid Milad) ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಪೊಲೀಸರು (Bengaluru Police) ಕೆಲ ಸೂಚನೆಗಳನ್ನು ಹೊರಡಿಸಿದ್ದಾರೆ. ಈದ್‌ಮಿಲಾದ್ ಹಬ್ಬದ ದಿನ ನಗರದಲ್ಲಿ ಮುಸ್ಲಿಮರು ಮೆರವಣಿಗೆ ನಡೆಸಲಿದ್ದಾರೆ. ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ನ ರಸ್ತೆ ಖುದ್ದುಸಾಬ್ ಈದ್ಗಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್‌ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ಸಂಬಂಧ ಹಬ್ಬದ ದಿನದಂದು ಕೆಲವು ಸೂಚನೆಗಳನ್ನು ಪಾಲಿಸುವಂತೆ ಬೆಂಗಳೂರು ಪೊಲೀಸ್​ ಆದೇಶ ಹೊರಡಿಸಿದೆ.

ಸೂಚನೆಗಳು

  • ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು.
  • ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು.
  • ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು.
  • ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು.
  • ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
  • ಮೆರವಣಿಗೆಯ ಸಂದರ್ಭದಲ್ಲಿ ಆಯೋಜಕರು ಬೆಂಕಿನಿಂದಿಸುವ ಸಾಮಗ್ರಿಯನ್ನು ಇಟ್ಟುಕೊಳ್ಳಬೇಕು.
  • ರಾತ್ರಿ ಮೆರವಣಿಗೆ ಮುಗಿದ ನಂತರ ಬೈಕ್‌ನಲ್ಲಿ ಇಬ್ಬರಿಗಿಂತ ಹೆಚ್ಚಾಗಿ ದ್ವಿ-ಚಕ್ರ ವಾಹನವನ್ನು ಚಲಿಸಬಾರದು.
  • ಹಿರಿಯ ನಾಗಕರಿಕರಿಗೆ ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಬೇಕು.
  • ಧ್ವನಿವರ್ಧಕಗಳನ್ನು ಬಳಸಲು ಸ್ಥಳೀಯ ಪೊಲೀಸರ ಅನುಮತಿ/ಪರವಾನಗೆ ಪಡೆದುಕೊಳ್ಳಬೇಕು

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಗುಡ್ ನ್ಯೂಸ್: ಒಟಿಎಸ್ ನವೆಂಬರ್ 30ಕ್ಕೆ ವಿಸ್ತರಣೆ

ಈ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕಗಳಿಂದ ಹೊರಡುವ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳಬೇಕು. ಹಾಗೂ ಯಾವುದೇ ಕಾರಣಕ್ಕೂ ಡಿ.ಜಿ. ಸೌಂಡ್ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:24 pm, Fri, 13 September 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ