ಬೆಂಗಳೂರು, ಸೆಪ್ಟೆಂಬರ್ 13: ಈದ್‌ಮಿಲಾದ್ (Eid Milad) ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಪೊಲೀಸರು (Bengaluru Police) ಕೆಲ ಸೂಚನೆಗಳನ್ನು ಹೊರಡಿಸಿದ್ದಾರೆ. ಈದ್‌ಮಿಲಾದ್ ಹಬ್ಬದ ದಿನ ನಗರದಲ್ಲಿ ಮುಸ್ಲಿಮರು ಮೆರವಣಿಗೆ ನಡೆಸಲಿದ್ದಾರೆ. ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ನ ರಸ್ತೆ ಖುದ್ದುಸಾಬ್ ಈದ್ಗಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್‌ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ಸಂಬಂಧ ಹಬ್ಬದ ದಿನದಂದು ಕೆಲವು ಸೂಚನೆಗಳನ್ನು ಪಾಲಿಸುವಂತೆ ಬೆಂಗಳೂರು ಪೊಲೀಸ್ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಗುಡ್ ನ್ಯೂಸ್: ಒಟಿಎಸ್ ನವೆಂಬರ್ 30ಕ್ಕೆ ವಿಸ್ತರಣೆ
ಈ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕಗಳಿಂದ ಹೊರಡುವ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳಬೇಕು. ಹಾಗೂ ಯಾವುದೇ ಕಾರಣಕ್ಕೂ ಡಿ.ಜಿ. ಸೌಂಡ್ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:24 pm, Fri, 13 September 24