AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ಪೊಲೀಸ್ ವೆಬ್​ಸೈಟ್​ ವಿಳಾಸ ಬದಲಾವಣೆ: ಇಲ್ಲಿದೆ ಹೊಸ ವೆಬ್​ಸೈಟ್​ ವಿಳಾಸ

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸ್​​ ವೆಬ್​ಸೈಟ್ ವಿಳಾಸ ಬದಲಾವಣೆ

ಬೆಂಗಳೂರು ನಗರ ಪೊಲೀಸ್ ವೆಬ್​ಸೈಟ್​ ವಿಳಾಸ ಬದಲಾವಣೆ: ಇಲ್ಲಿದೆ ಹೊಸ ವೆಬ್​ಸೈಟ್​ ವಿಳಾಸ
ಪೊಲೀಸ್​ ಆಯುಕ್ತರ ಕಚೇರಿ ಬೆಂಗಳೂರು
TV9 Web
| Edited By: ವಿವೇಕ ಬಿರಾದಾರ|

Updated on:Oct 22, 2022 | 9:38 PM

Share

ಬೆಂಗಳೂರು: ಸುರಕ್ಷತಾ ದೃಷ್ಟಿಯಿಂದ ಬೆಂಗಳೂರು ನಗರ ಪೊಲೀಸ್ ವೆಬ್​ಸೈಟ್​ ವಿಳಾಸ ಬದಲಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ Bengaluru city police (bcp.gov.in) ವೆಬ್​ಸೈಟ್ ವಿಳಾಸ ಇತ್ತು. ಈಗ www.bcp.Karnataka.gov.in ಎಂದು ವೆಬ್​ಸೈಟ್ ವಿಳಾಸ ಬದಲು ಮಾಡಲಾಗಿದೆ. ಹಾಗೆಯೇ ಎಲ್ಲ ಜಿಲ್ಲೆಗಳ ಪೊಲೀಸ್​​ ವೆಬ್​ಸೈಟ್​, ನಗರದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಆಗ್ನೇಯ, ಈಶಾನ್ಯ, ವೈಟ್ ಫೀಲ್ಡ್ ಡಿಸಿಪಿಗಳು ಹಾಗೂ ಎಸಿಪಿ ಮತ್ತು ಇನ್ಸ್ ಪೆಕ್ಟರ್ ವೆಬ್ ಸೈಟ್ ಬದಲಾವಣೆಗೆ ಸೂಚನೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ ಪಾಲಿಸದ ಕರ್ನಾಟಕ ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್: ಏನಿದು ಪ್ರಕರಣ?

ಸುಪ್ರೀಂ ಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಿಸಿದ 24 ಗಂಟೆಗಳಲ್ಲಿ ಅದನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸದ ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸುಪ್ರೀಂ ಕೋರ್ಟ್ ಆದೇಶ ಪಾಲಿಸುತ್ತಿಲ್ಲ ಎಂದು ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಹಾಗೂ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ವಿಭಾಗೀಯ ಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಸಿಎಸ್ ಹಾಗೂ ಲೋಕಾಯುಕ್ತ ಎಡಿಜಿಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ನವೆಂಬರ್ 9ಕ್ಕೆ ಮುಂದೂಡಿದೆ.

ಅರ್ಜಿದಾರರ ಮನವಿ ಏನು?

ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ 2016 ರಲ್ಲೇ ಆದೇಶಿಸಿದೆ. ಈ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ. ಸುಪ್ರೀಂಕೋರ್ಟ್ ಆದೇಶವನ್ನು ಸಿಬಿಐ ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್‌ ಗಳು ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಅದರಂತೆ ಎಸಿಬಿ ಕೂಡ ನಿಯಮ ಪಾಲಿಸುತ್ತ ಬಂದಿತ್ತು.

2022ರ ಆಗಸ್ಟ್ 11ರಂದು ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸಿ ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿದೆ. ಆದರೆ, ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲನೆ ಮಾಡುತ್ತಿಲ್ಲ.

ಎಫ್ಐಆರ್ ನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸದೇ ಇರುವುದರಿಂದ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ತೊಂದರೆಯಾಗುತ್ತಿದೆ. ಈ ಕುರಿತಂತೆ ತಾವು 2022ರ ಸೆಪ್ಟೆಂಬರ್ 16ರಂದು ಮನವಿ ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:26 pm, Sat, 22 October 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ