AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut ಈ ವಾರಾಂತ್ಯದಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಯಾವ ದಿನ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕೆಪಿಟಿಸಿಎಲ್ ಶುಕ್ರವಾರ ಈ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಬೆಸ್ಕಾಂ ಶನಿವಾರ ಮತ್ತು ಭಾನುವಾರ ಒಂದೆರಡು ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದೆ.

Bengaluru Power Cut ಈ ವಾರಾಂತ್ಯದಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಯಾವ ದಿನ?
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 07, 2022 | 10:29 AM

Share

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ಮಾಹಿತಿಯ ಪ್ರಕಾರ, ಬೆಂಗಳೂರು ನಗರದಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು, ಅಂದರೆ ಅಕ್ಟೋಬರ್ 7, 8 ಮತ್ತು 9 ರಂದು ಕೆಲವು ವಿದ್ಯುತ್ ಕಡಿತ (Power cuts) ಉಂಟಾಗಲಿದೆ. ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿಗಳಿಗೆ 11 ಕಿಲೋವೋಲ್ಟ್ (ಕೆವಿ) , ಫೀಡರ್ ನಿರ್ವಹಣೆ ಕೆಲಸಗಳು, ಜಂಗಲ್ ಕಟಿಂಗ್, ಹೆಚ್ಚುವರಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಒದಗಿಸುವುದು, ತ್ರೈಮಾಸಿಕ ನಿರ್ವಹಣಾ ಕೆಲಸ ಮತ್ತು ಅಸ್ತಿತ್ವದಲ್ಲಿರುವ ಉಪಕರಣಗಳ ಸ್ಥಿತಿಯನ್ನು ಪರಿಶೀಲಿಸುವುದು ಇತ್ಯಾದಿ ಕೆಲಸವನ್ನು ವಿದ್ಯುತ್ ಮಂಡಳಿ ಮಾಡಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕೆಪಿಟಿಸಿಎಲ್ ಶುಕ್ರವಾರ ಈ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಬೆಸ್ಕಾಂ ಶನಿವಾರ ಮತ್ತು ಭಾನುವಾರ ಒಂದೆರಡು ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದೆ. ವಾರಾಂತ್ಯದಲ್ಲಿ ಹೆಚ್ಚಿನ ಕೆಲಸಗಳನ್ನು ನಿಗದಿಪಡಿಸಲಾಗಿದೆ.

ಈ ಕಡಿತ ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಸಂಭವಿಸಬಹುದು. ಎಲ್ಲೆಲ್ಲಿ ವಿದ್ಯುತ್ ಕಡಿತ?

ಅಕ್ಟೋಬರ್ 7, ಶುಕ್ರವಾರ

ಬೆಸ್ಕಾಂ ವಿಭಾಗ- ರಾಮನಗರ ಮತ್ತು ಕುಣಿಗಲ್ ಕೆಟಿಪಿಸಿಎಲ್ ವಿಭಾಗ- ಕೆ.ಬಿ ಕ್ರಾಸ್ ಮತ್ತು ದಾವಣಗೆರೆ ಕೂಟಗಲ್ಲು ಮತ್ತು ಕುಣಮುಂಡ್ನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, 66/11 ಕೆವಿ ಬೇವೂರು ಲೈನ್, 66/11 ಕೆವಿ ದಶಾವರ, 66/11 ಕೆವಿ ಸಂಕಲಗೆರೆ, 66 ಕೆವಿ ಸೌರ ವಿದ್ಯುತ್ ಸ್ಥಾವರ, ಚೌಡನಕುಪ್ಪೆ, ತಾವರೆಕೆರೆ ಜಿಲ್ಲಾಪಂಚಾಯತ್ ಗ್ರಾಮ, ಕಾಡಜ್ಜಿ, ಬೇತೂರು ಬಸವನಾಳು, ನಾಗರಕಟ್ಟೆ ಮತ್ತಿತರ ಗ್ರಾಮಗಳು, ಸವಳಂಗ, ಕೊಡ್ತಾಳು, ಚಿನ್ನಿಕಟ್ಟೆ, ಮಾದಾಪುರ, ಜಯನಗರ, ಕ್ಯಾತಿನಕೊಪ್ಪ, ಮುಸೇನಾಳ್, ಮಾಚಿಗೊಂಡನಹಳ್ಳಿ.

ಅಕ್ಟೋಬರ್ 8, ಶನಿವಾರ

ಬಿಡದಿ ಉಪವಿಭಾಗದಡಿ ಕಾಮಗಾರಿ ನಡೆಯುವುದರಿಂದ ಬೆಸ್ಕಾಂ ವಿಭಾಗದ ರಾಮನಗರದಲ್ಲಿ ವಿದ್ಯುತ್ ಇರುವುದಿಲ್ಲ. ಇನ್ನುಳಿದಂತೆ ಬಿಲ್ಲೆಕೆಂಪನಹಳ್ಳಿ, ಮಾರುತಿನಗರ, ಬೀಮೇನಹಳ್ಳಿ, ನಿಂಗಯ್ಯನದೊಡ್ಡಿ, ರಂಗೇಗೌಡನದೊಡ್ಡಿ, ಲಕ್ಷ್ಮೀಸಾಗರದಲ್ಲಿ ವಿದ್ಯುತ್ ಕಡಿತ ಆಗಲಿದೆ.

ಅಕ್ಟೋಬರ್ 9, ಭಾನುವಾರ

ಬಿಡದಿ ಉಪವಿಭಾಗ ಕಾಮಗಾರಿ ನಡೆಸುವುದರಿಂದ ಬೆಸ್ಕಾಂ ವಿಭಾಗದಡಿಯಲ್ಲಿ ರಾಮನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೆಐಎಡಿಬಿ 1ನೇ ಹಂತದ ಕೈಗಾರಿಕಾ ಪ್ರದೇಶದಲ್ಲೂ ವಿದ್ಯುತ್ ಇರುವುದಿಲ್ಲ.

Follow Us
TV9 Web
TV9 Web

TV9 Kannada

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ