AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ!

ಹೊಸ ವರ್ಷದ ಮೊದಲ ದಿನವೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (ಮನೋಮಹನ್‌ ಸಿಂಗ್‌ ವಿಶ್ವವಿದ್ಯಾಲಯ) ಭಾರೀ ಅಕ್ರಮವೊಂದು ಬಯಲಾಗಿದೆ. ಬಿಕಾಂ ಐದನೇ ಸೆಮಿಸ್ಟರ್‌ನ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆಗಿಂತ ಮೊದಲೇ ಸೋರಿಕೆಯಾಗಿದೆ. ಆದರೂ ಇಂದು ಪರೀಕ್ಷೆ ನಡೆಸಲಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ!
Question Paper Leaked
Vinay Kashappanavar
| Edited By: |

Updated on:Jan 02, 2026 | 7:44 PM

Share

ಬೆಂಗಳೂರು, (ಜನವರಿ 02): ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಇಂದು (ಜನವರಿ 02) ಬಿಕಾಂ ಐದನೇ ಸೆನಿಸ್ಟರ್ ಅಡ್ವಸನ್ಸ್ ಅಕೌಂಟಿಂಗ್ ಪರೀಕ್ಷೆ ಮುಗಿದು ಹೋಗಿದೆ. ಆದ್ರೆ, ಪರೀಕ್ಷೆಗೂ ಮುನ್ನ ಅಂದರೆ ನಿನ್ನೆ(ಜನವರಿ 01) ಸಂಜೆಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣವಾಗಿದೆ.

ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆ ಲೀಕ್!

ಇಂದು ಜರುಗಿದ ಬಿಕಾಂ ಐದನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ನಿನ್ನೆ ಸಂಜೆಯೇ ಲೀಕ್ ಆಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನಿನ್ನೆ ಸಂಜೆಯಿಂದಲೇ ಪ್ರಶ್ನೆಪತ್ರಿಕೆಯ ಪ್ರತಿಗಳು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದ್ದು, ಇಂದು ಪರೀಕ್ಷಾ ಕೇಂದ್ರದಲ್ಲಿ ನೀಡಲಾದ ಪ್ರಶ್ನೆಪತ್ರಿಕೆಗೂ ಲೀಕ್ ಆದ ಪೇಪರ್‌ಗೂ ಸಂಪೂರ್ಣ ಸಾಮ್ಯತೆ ಇರುವುದು ದೃಢಪಟ್ಟಿದೆ. ಇನ್ನು ಈ ವ್ಯವಸ್ಥಿತ ನಕಲು ದಂಧೆಯ ಹಿಂದೆ ಕೆಲವು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ತಮ್ಮ ಕಾಲೇಜಿನ ಫಲಿತಾಂಶ ಉತ್ತಮವಾಗಿ ಬರಲಿ ಎಂಬ ಉದ್ದೇಶದಿಂದ ಪರೀಕ್ಷಾ ವಿಭಾಗದ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಪ್ರಶ್ನೆಪತ್ರಿಕೆಯನ್ನು ಮೊದಲೇ ಪಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ

ವಿದ್ಯಾರ್ಥಿ ಸಂಘಟನೆ NSUI ಈ ವಿಚಾರದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಸಮರ ಸಾರಿದೆ. ಇಂದಿನ ಪ್ರಶ್ನೆಪತ್ರಿಕೆ ನಿನ್ನೆ ಸಂಜೆಯೇ ನಮಗೆ ಲಭ್ಯವಾಗಿತ್ತು. ಇದನ್ನು ದುರುಪಯೋಗಪಡಿಸಿಕೊಂಡು ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರಾಮಾಣಿಕವಾಗಿ ಓದಿದ ವಿದ್ಯಾರ್ಥಿಗಳಿಗೆ ಇದು ಮಾಡಿದ ದ್ರೋಹ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾಹಿತಿ ಇದ್ದರೂ ಸಹ ಬೆಂಗಳೂರು ನಗರ ವಿವಿಯ ಪರೀಕ್ಷಾ ವಿಭಾಗ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಹಗರಣದ ಬಗ್ಗೆ ವಿಶ್ವವಿದ್ಯಾಲಯವು ಮೌನಕ್ಕೆ ಶರಣಾಗಿರುವುದು ವಿದ್ಯಾರ್ಥಿಗಳ ಆಕ್ರೋಶವನ್ನು ಇನ್ನಷ್ಟು ಹೆಚ್ಚಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:43 pm, Fri, 2 January 26

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್