AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳಿಗೆ ಬ್ರೇಕ್! ಒಂದೇ ದಿನ 11 ಕಟ್ಟಡ ಸೀಲ್, ಫುಟ್‌ಪಾತ್ ಒತ್ತುವರಿ ತೆರವು

ಬೆಂಗಳೂರಿನಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ ಹಾಗೂ ಒತ್ತುವರಿ ವಿರುದ್ಧ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಆರ್‌ಎಂವಿ 2ನೇ ಹಂತದಲ್ಲಿ ಅನುಮತಿಯಿಲ್ಲದೆ ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದ 11 ಕಟ್ಟಡಗಳಿಗೆ ಬೀಗ ಹಾಕಲಾಗಿದೆ. ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದ್ದು, ಗೋವಿಂದಪುರದಲ್ಲಿ ಫುಟ್‌ಪಾತ್‌ಗಳನ್ನು ತೆರವುಗೊಳಿಸಲಾಗಿದೆ. ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳಿಗೆ ಬ್ರೇಕ್! ಒಂದೇ ದಿನ 11 ಕಟ್ಟಡ ಸೀಲ್, ಫುಟ್‌ಪಾತ್ ಒತ್ತುವರಿ ತೆರವು
ಬೆಂಗಳೂರಿನಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳಿಗೆ ಬ್ರೇಕ್
ಭಾವನಾ ಹೆಗಡೆ
|

Updated on: Nov 24, 2026 | 1:14 PM

Share

ಮುಖ್ಯಾಂಶಗಳು

  • ಆರ್‌ಎಂವಿ ಎರಡನೇ ಹಂತದಲ್ಲಿ ಅನುಮತಿಯಿಲ್ಲದ 11 ಕಟ್ಟಡಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ.
  • ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಒತ್ತುವರಿ ತೆರವಿಗೆ ಮಾರ್ಷಲ್‌ಗಳ ನಿಯೋಜನೆ, ನಿಯಮ ಉಲ್ಲಂಘಿಸಿದವರಿಗೆ ದಂಡ.
  • ಗೋವಿಂದಪುರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಪಾಲಿಕೆ ಅನುಕೂಲ ಕಲ್ಪಿಸಿದೆ.

ಬೆಂಗಳೂರು, ನವೆಂಬರ್ 24: ಬೆಂಗಳೂರಿನಲ್ಲಿ ವಸತಿ ಪ್ರದೇಶಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ವಾಣಿಜ್ಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಸ್ಥಳಗಳ ಒತ್ತುವರಿ ವಿರುದ್ಧ ನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಒಂದೆಡೆ, ಆರ್‌ಎಂವಿ 2ನೇ ಹಂತದಲ್ಲಿ ಅಗತ್ಯ ಅನುಮತಿ ಇಲ್ಲದೆ ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದ 11 ಕಟ್ಟಡಗಳಿಗೆ ಬೀಗ ಹಾಕಲಾಗಿದೆ. ಮತ್ತೊಂದೆಡೆ, ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಅನಧಿಕೃತ ವ್ಯಾಪಾರಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಇನ್ನು ಗೋವಿಂದಪುರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಸುರಕ್ಷಿತ ಸಂಚಾರ ಹಾಗೂ ನಗರದಲ್ಲಿ ಸುಗಮ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ.

ಆರ್‌ಎಂವಿ 2ನೇ ಹಂತದಲ್ಲಿ 11 ಕಟ್ಟಡಗಳಿಗೆ ಬೀಗ!

ವಸತಿ ಕಟ್ಟಡಗಳಲ್ಲಿ ಅಗತ್ಯ ಅನುಮತಿ ಪಡೆಯದೆ ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದ ಸಂಸ್ಥೆಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆ ಜಂಟಿ ಕಾರ್ಯಾಚರಣೆ ನಡೆಸಿದೆ. ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರಿನ ಹಿನ್ನೆಲೆಯಲ್ಲಿ ಹಾಗೂ ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಒಟ್ಟು 21 ವಾಣಿಜ್ಯ ಸಂಸ್ಥೆಗಳನ್ನು ಗುರುತಿಸಲಾಗಿತ್ತು. ಈ ಪೈಕಿ ಇಂದು 11 ಸಂಸ್ಥೆಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಉಳಿದ 10 ಸಂಸ್ಥೆಗಳ ವಿರುದ್ಧವೂ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚುತ್ತಿರುವುದು ಹಲವು ಬಡಾವಣೆಗಳ ನಿವಾಸಿಗಳಿಗೆ ಸಮಸ್ಯೆಯಾಗಿದೆ. ಮನೆಗಳಿರುವ ಪ್ರದೇಶಗಳಲ್ಲಿ ಅನುಮತಿಯಿಲ್ಲದೆ ಅಂಗಡಿ, ಕಚೇರಿ ಹಾಗೂ ಇತರ ವಾಣಿಜ್ಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಹೀಗಾಗಿ ನಗರದ ಇತರ ವಸತಿ ಬಡಾವಣೆಗಳಲ್ಲೂ ಇದೇ ರೀತಿಯ ಕಾರ್ಯಾಚರಣೆ ನಡೆಯುವ ಸಾಧ್ಯತೆ ಇದೆ.

ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಒತ್ತುವರಿ ತೆರವು

ಇನ್ನು ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲೂ ಬಿಬಿಎಂಪಿ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳಿಸಿದೆ. ಹಳದಿ ಗೆರೆ ದಾಟಿ ವ್ಯಾಪಾರ ನಡೆಸುವ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಕಾಂಪ್ಲೆಕ್ಸ್‌ನ ಗೇಟ್ ಹಾಗೂ ಕಾರಿಡಾರ್‌ಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗುವ ವಸ್ತುಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಕಳೆದ 10ರಿಂದ 15 ದಿನಗಳಿಂದ ನಿರಂತರವಾಗಿ ಜಾಗೃತಿ ಮೂಡಿಸಿದರೂ ವ್ಯಾಪಾರಿಗಳು ನಿಯಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇಂದಿನಿಂದ ಕಾಂಪ್ಲೆಕ್ಸ್‌ನಲ್ಲಿ ಮಾರ್ಷಲ್‌ಗಳನ್ನು ನಿಯೋಜಿಸಲು ಆದೇಶಿಸಲಾಗಿದೆ. ನಿಗದಿತ ಸ್ಥಳ ಮೀರಿ ವ್ಯಾಪಾರ ನಡೆಸುವವರಿಗೆ ದಂಡ ವಿಧಿಸಲಾಗುತ್ತದೆ. ಅನಧಿಕೃತ ಜಾಹೀರಾತು ಫಲಕಗಳು ಹಾಗೂ ಗೋದಾಮು ಮಳಿಗೆಗಳ ಪರಿಶೀಲನೆಯನ್ನೂ ನಡೆಸಲಾಗುತ್ತದೆ.

ಗೋವಿಂದಪುರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು

ಇನ್ನೊಂದೆಡೆ, ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಗೋವಿಂದಪುರದಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಪಾದಚಾರಿಗಳು ಸುರಕ್ಷಿತವಾಗಿ ಹಾಗೂ ಯಾವುದೇ ಅಡೆತಡೆಯಿಲ್ಲದೆ ಸಂಚರಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸುವ ಮೂಲಕ ಸಾರ್ವಜನಿಕರ ಓಡಾಟಕ್ಕೆ ಸುಗಮ ವ್ಯವಸ್ಥೆ ಕಲ್ಪಿಸುವುದು ಹಾಗೂ ಫುಟ್‌ಪಾತ್‌ಗಳ ಬಳಕೆಯನ್ನು ಸಾರ್ವಜನಿಕರಿಗೆ ಮರಳಿ ಒದಗಿಸುವುದು ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ಪಾದಚಾರಿಗಳ ಸುರಕ್ಷತೆ ಮತ್ತು ಸಾರ್ವಜನಿಕ ಸ್ಥಳಗಳ ಲಭ್ಯತೆಯನ್ನು ಸುಧಾರಿಸಲು ಪಾಲಿಕೆ ಈ ಕ್ರಮ ಕೈಗೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಪತ್ರಿಕೋದ್ಯಮ ಇವರು ಇಷ್ಟಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್‌ನಲ್ಲಿ ವೃತ್ತಿ ಜೀವನ ಆರಂಭಿಸಿರುವ ಇವರು, ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ