AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಬಿಎಯಿಂದ ಮಹತ್ವದ ನಿರ್ಣಯ: ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಇನ್ಮುಂದೆ ಸಂಜೆ ವೇಳೆಯಲ್ಲೂ ಕಸ ಸಂಗ್ರಹ

Evening Garbage Collection: ಬೆಂಗಳೂರಿನ ಕಸದ ಸಮಸ್ಯೆಗೆ ಬ್ರೇಕ್ ಹಾಕಲು ಜಿಬಿಎ ಮಹತ್ವದ ನಿರ್ಧಾರ ಕೈಗೊಂಡಿದ್ದು, ತ್ಯಾಜ್ಯ ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಇನ್ಮುಂದೆ ಸಂಜೆ ವೇಳೆಯೂ ಆಟೋ ಟಿಪ್ಪರ್‌ಗಳ ಮೂಲಕ ಕಸ ಸಂಗ್ರಹಿಸಲು ಮುಖ್ಯ ಆಯುಕ್ತರು ಸೂಚಿಸಿದ್ದಾರೆ. ಕಸದ ನಿರ್ವಹಣೆಯಲ್ಲಿ ಸಹಕರಿಸುವಂತೆ ಸಾರ್ವಜನಿಕರಿಗೂ ಮನವಿ ಮಾಡಿರುವ ಅವರು, ಯಾವುದೇ ಪ್ರದೇಶದಲ್ಲಿ ಕಸ ರಾಶಿಯಾಗಿದ್ದರೆ ಅಥವಾ ಆಟೋ ಟಿಪ್ಪರ್ ಸಮಯಕ್ಕೆ ಬಾರದಿದ್ದರೆ ತಕ್ಷಣ ನಿಗಮಕ್ಕೆ ಮಾಹಿತಿ ನೀಡಿ ಎಂದು ತಿಳಿಸಿದ್ದಾರೆ.

ಜಿಬಿಎಯಿಂದ ಮಹತ್ವದ ನಿರ್ಣಯ: ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಇನ್ಮುಂದೆ ಸಂಜೆ ವೇಳೆಯಲ್ಲೂ ಕಸ ಸಂಗ್ರಹ
ಸಾಂದರ್ಭಿಕ ಚಿತ್ರImage Credit source: deccanherald.com
ಪ್ರಸನ್ನ ಹೆಗಡೆ
|

Updated on:Jun 28, 2026 | 6:43 AM

Share

ಮುಖ್ಯಾಂಶಗಳು

  • ಬೆಂಗಳೂರಿನ ಕಸದ ಸಮಸ್ಯೆ ನಿವಾರಣೆಗೆ ಜಿಬಿಎ ಮಾಸ್ಟರ್​​ ಪ್ಲ್ಯಾನ್​​
  • ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಸಂಜೆಯೂ ಕಸ ಸಂಗ್ರಕ್ಕೆ ನಿರ್ಧಾರ
  • ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ದಂಡಾಸ್ತ್ರದ ಎಚ್ಚರಿಕೆ

ಬೆಂಗಳೂರು, ಜೂನ್ 28​​: ನಗರದಲ್ಲಿ ಕಸದ ಸಮಸ್ಯೆಗೆ ಶತಾಯಗತಾಯ ಬ್ರೇಕ್​​ ಹಾಕಲು ಮುಂದಾಗಿರುವ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಮಹತ್ವದ ನಿರ್ಣಯಕ್ಕೆ ಮುಂದಾಗಿದೆ. ನಿರಂತರವಾಗಿ ಕಸದ ಸಮಸ್ಯೆ ಎದುರಾಗುತ್ತಿರುವ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವೆಡೆ ಸಂಜೆ ವೇಳೆಯಲ್ಲೂ ಆಟೋ ಟಿಪ್ಪರ್‌ಗಳನ್ನು ನಿಯೋಜಿಸಿ ಕಸವನ್ನು ಸಕಾಲದಲ್ಲಿ ಸಂಗ್ರಹಿಸುವಂತೆ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಎಲ್ಲೆಡೆ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಹಾಗೂ ರಸ್ತೆ ಬದಿಯಲ್ಲಿ ಕಸ ಹಾಕುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ನಿರ್ದೇಶನ ನೀಡಿದ್ದು, ಕಸದ ನಿರ್ವಹಣೆಯಲ್ಲಿ ಸಹಕರಿಸುವಂತೆ ಸಾರ್ವಜನಿಕರಿಗೂ ಅವರು ಮನವಿ ಮಾಡಿದ್ದಾರೆ. ಯಾವುದೇ ಪ್ರದೇಶದಲ್ಲಿ ಕಸ ರಾಶಿಯಾಗಿದ್ದರೆ ಅಥವಾ ಆಟೋ ಟಿಪ್ಪರ್ ಸಮಯಕ್ಕೆ ಬಾರದಿದ್ದರೆ ತಕ್ಷಣ ನಿಗಮಕ್ಕೆ ಮಾಹಿತಿ ನೀಡಿ. ಮಾಹಿತಿ ಬಂದ ಕೂಡಲೇ ನಿಗಮದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

‘ನಾಗರಿಕರು ಸಹಕರಿಸಿ’

ನಗರದ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕಾದರೆ ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅಗತ್ಯ. ನಾಗರಿಕರು ನಿಗಮದೊಂದಿಗೆ ಕೈಜೋಡಿಸಿದಾಗ ಮಾತ್ರ ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಸುಧಾರಿಸಲು ಸಾಧ್ಯ. ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಸ್ವಯಂಸೇವಕರು ರಸ್ತೆ ಬದಿಯಲ್ಲಿ ಕಸ ಎಸೆಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ಬಗ್ಗೆ ತಕ್ಷಣ ನಿಗಮದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ದಂಡ ವಿಧಿಸಲಾಗುವುದು ಎಂದು ಕೂಡ ಅವರು ಎಚ್ಚರಿಸಿದ್ದಾರೆ.

ಕಸ ಸಂಗ್ರಹಕ್ಕೆ ಜಿಬಿಎಯ ವಾಹನಗಳು ಸರಿಯಾಗಿ ಬರಲ್ಲ ಎಂಬ ಆರೋಪವೂ ಇರುವ ಕಾರಣ ತಂತ್ರಜ್ಞಾನ ಬಳಸಿ ಇವುಗಳ ಓಡಾಟ ನಿರ್ವಹಣೆಗೆ ಜಿಬಿಎ ಮುಂದಾಗಿದೆ. ‘ಮಾತ್ರ’ ಎಂಬ ಆ್ಯಪ್ ಮೂಲಕ ಕಸದ ವಾಹನಗಳ ಚಲನವಲನ ಗಮನಿಸಿಲು ನಿರ್ಧರಿಸಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋರಮಂಗಲದಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲಾಗಿದೆ. ಕಸದ ವಾಹನಗಳ ಚಾಲಕರ ಮೊಬೈಲ್​​ನಲ್ಲಿ ‘ಮಾತ್ರ’ ಆ್ಯಪ್ ಇನ್ಸ್ಟಾಲ್ ಮಾಡಲಾಗಿದ್ದು, ಅವರು ಕಸ ಸಂಗ್ರಹಣೆ ಮಾಡುವ ಮಾರ್ಗ ತಪ್ಪಿಸಿದರೆ ಈ ಆ್ಯಪ್ ಮೂಲಕ ಅಧಿಕಾರಿಗಳು ತಿಳಿದುಕೊಳ್ಳಬಹುದಾಗಿದೆ. ಈ ವ್ಯವಸ್ಥೆ ಕ್ಲಿಕ್ ಆದರೆ ಉಳಿದ ನಾಲ್ಕೂ ನಗರ ಪಾಲಿಕೆಗಳಿಗೂ ಈ ವ್ಯವಸ್ಥೆಯನ್ನ ವಿಸ್ತರಿಸುವ ಚಿಂತನೆ ಕೂಡ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:36 am, Sun, 28 June 26

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ