ಬೆಂಗಳೂರು: ಹೆಬ್ಬಾಳದಲ್ಲಿ ಪುಣ್ಯಕೋಟಿ ದತ್ತು ಯೋಜನೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಗೋಶಾಲೆಗಳಲ್ಲಿನ ಗೋವುಗಳ ದತ್ತು ಪಡೆಯುವ ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾಗಿರುವ ಪುಣ್ಯಕೋಟಿ ದತ್ತು ಯೋಜನೆಯನ್ನು ಬೆಂಗಳೂರಿನಲ್ಲೂ ಉದ್ಘಾಟಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಮಾರ್ಚ್ 23) ಹೆಬ್ಬಾಳದಲ್ಲಿ ಉದ್ಘಾಟಿಸಿದ್ದಾರೆ.

ಬೆಂಗಳೂರು: ಹೆಬ್ಬಾಳದಲ್ಲಿ ಪುಣ್ಯಕೋಟಿ ದತ್ತು ಯೋಜನೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಹೆಬ್ಬಾಳದಲ್ಲಿ ಪುಣ್ಯಕೋಟಿ ದತ್ತು ಯೋಜನೆ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ (ಸಾಂದರ್ಭಿಕ ಚಿತ್ರ)
Follow us
|

Updated on: Mar 23, 2023 | 6:53 PM

ಬೆಂಗಳೂರು: ಗೋಶಾಲೆಗಳಲ್ಲಿನ ಗೋವುಗಳ ದತ್ತು ಪಡೆಯುವ ಕರ್ನಾಟಕ ಸರ್ಕಾರದ (Karnataka Govt) ಮಹತ್ವದ ಯೋಜನೆಯಾಗಿರುವ ಪುಣ್ಯಕೋಟಿ ದತ್ತು ಯೋಜನೆಯನ್ನು (Punyakoti Dattu Yojane) ಬೆಂಗಳೂರಿನಲ್ಲೂ ಉದ್ಘಾಟಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಮಾರ್ಚ್ 23) ಹೆಬ್ಬಾಳದಲ್ಲಿ ಉದ್ಘಾಟಿಸಿದ್ದು, ಈ ವೇಳೆ ಪಶುಸಂಗೋಪನ ಇಲಾಖೆ ಸಚಿವ ಪ್ರಭು ಚವ್ಹಾಣ್ (Prabhu Chauhan)​ ಉಪಸ್ಥಿತರಿದ್ದರು. ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಭಾರತದಲ್ಲಿ ಗೋವು ಸಾಕಾಣಿಕೆಗೆ ಅದರದ್ದೇ ಆದ ಮಹತ್ವವಿದೆ. ಗೋಶಾಲೆಗಳ ವಿಭಿನ್ನ ಸಂಕೇತವೂ ನಮ್ಮಲಿದೆ. ಆದರೆ ಜಾನುವಾರಗಳ ಹತ್ಯೆ, ಗೋವುಗಳ ಮಾರಾಟದಿಂದಾಗಿ ರೈತರು ಹಸುಗಳನ್ನು ಸಾಕಲು ಹಿಂದೇಟು ಹಾಕುತ್ತಿದ್ದಾರೆ. ಇದನ್ನೂ ಮನಗಂಡ ರಾಜ್ಯ ಸರ್ಕಾರವು ಜುಲೈ 28ರಿಂದ ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಪುಣ್ಯಕೋಟಿ ದತ್ತು ಯೋಜನೆಯ ಮೂಲಕ ಗೋ ಸಂತತಿಯನ್ನು ಕಾಪಾಡುವ ಹೊಣೆಯನ್ನು ಕರ್ನಾಟಕ ಸರ್ಕಾರ ಹೊತ್ತಿದೆ. ಗೋಶಾಲೆಗಳಲ್ಲಿನ ಗೋವುಗಳ ದತ್ತು ಪಡೆಯಲು ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ ನೀಡಲಾಗಿದೆ.

ಇದನ್ನೂ ಓದಿ: Bengaluru: ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಪಿಸಮಾತುಗಳಲ್ಲಿ ಚರ್ಚಿಸಿದ್ದು ಏನು ಗೊತ್ತಾ?

ಗೋ ಹತ್ಯೆ ನಿಷೇಧದ ಬಳಿಕ ರಾಜ್ಯದಲ್ಲಿ ಅನೇಕ ಗೋಶಾಲೆಗಳನ್ನು ತೆರೆಯಲಾಗಿದ್ದು, ಆ ಮೂಲಕ ಅವುಗಳ ರಕ್ಷಣೆ ಮಾಡಲಾಗುತ್ತಿದೆ. ಆದರೆ ಈ ಗೋಶಾಲೆಗಳ ನಿರ್ವಣಹೆ ದೃಷ್ಠಿಯಿಂದ ಸಾರ್ವಜನಿಕರನ್ನು ಇದರ ಭಾಗವನ್ನಾಗಿಸಲು ಪಶುಸಂಗೋಪನಾ ಇಲಾಖೆ ಪುಣ್ಯಕೋಟಿ ದತ್ತು ಯೋಜನೆಯನ್ನು ಪರಿಚಯಿಸಿದೆ.

ಈ ಯೋಜನೆಯ ಮೂಲಕ ಸಾರ್ವಜನಿಕರು ಸರ್ಕಾರಿ ಅಥವಾ ಖಾಸಗಿ ಗೋಶಾಲೆಗಳಲ್ಲಿರುವ ಗೋವುಗಳನ್ನು ನೇರವಾಗಿ ದತ್ತು ಪಡೆಯಬಹುದಾಗಿದೆ. ಸರ್ಕಾರದ ವೆಬ್​ಸೈಟ್​ನಲ್ಲಿ ದತ್ತು ಪಡೆಯುವವರು ಮೊದಲು ನೊಂದಣಿ ಮಾಡಿಕೊಳ್ಳಬೇಕು. ಇದಕ್ಕೆ ವಾರ್ಷಿಕ 11 ಸಾವಿರ ರೂ. ನೀಡಬೇಕು. ದತ್ತು ಪಡೆದಕೊಂಡ ಬಳಿಕ ಗೋವುಗಳ ಮಾಹಿತಿಯನ್ನು ದತ್ತು ಪಡೆದವರಿಗೆ ನೀಡಲಾಗುತ್ತಿದೆ. ಇನ್ನು, ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ-ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ಸರ್ಕಾರದ ಮಹತ್ವಾಕಾಂಕ್ಷೆಯ ಪುಣ್ಯಕೋಟಿ ಯೋಜನೆಗೆ ಸ್ಯಾಂಡಲ್​ವುಡ್ ನಟ ಕಿಚ್ಚು ಸುದೀಪ್​ ಅವರನ್ನು ರಾಯಭಾರಿಯನ್ನಾಗಿ ಮಾಡಲಾಗಿದೆ.

ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಉದ್ಘಾಟನೆ

ಬೆಂಗಳೂರು: ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮತ್ತು ನಾಲ್ಕು ಹೊಸ ತಂತ್ರಾಂಶಗಳನ್ನು ಬೆಂಗಳೂರಿನಲ್ಲಿ ಉದ್ಘಾಟಿಸಲಾಯಿತು.  ಉನ್ನತ ಶಿಕ್ಷಣ ಮತ್ತು ಇ- ಆಡಳಿತ ಇಲಾಖೆಯ ಸಹಯೋಗದಲ್ಲಿ ವಿಕಾಸಸೌಧದಲ್ಲಿ ನಡೆದ ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ (Dr. C.N. Ashwath Narayan), ವಿಶ್ವವಿದ್ಯಾಲಯಗಳ ಕುಲಸಚಿವರು ಮತ್ತು ಹಣಕಾಸು ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!