ಪ್ರಧಾನಮಂತ್ರಿಗಳ ವಸ್ತುಸಂಗ್ರಹಾಲಯದಂತೆ ಕರ್ನಾಟಕದಲ್ಲಿ ಸಿಎಂಗಳ ವಸ್ತು ಸಂಗ್ರಹಾಲಯ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಿದ ಬಸವರಾಜ ಬೊಮ್ಮಾಯಿ

ನಮ್ಮ ಮುಂದಿನ ಪೀಳಿಗೆ ಕರ್ನಾಟಕವನ್ನು ಕಟ್ಟಿದವರನ್ನು ಮರೆಯಬಾರದು. ಅವರ ತ್ಯಾಗ, ದೂರದೃಷ್ಟಿ, ಆದರ್ಶಗಳು ಮತ್ತು ತತ್ವಗಳು ರಾಜ್ಯವು ನಿಲ್ಲುವಂತೆ ಮಾಡಿದೆ. ಹಾಗಾಗಿ ಅವರನ್ನು ಹಾಗೂ ಅವರ ಕಾರ್ಯಗಳನ್ನು ಸ್ಮರಿಸಿ ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಧಾನಮಂತ್ರಿಗಳ ವಸ್ತುಸಂಗ್ರಹಾಲಯದಂತೆ ಕರ್ನಾಟಕದಲ್ಲಿ ಸಿಎಂಗಳ ವಸ್ತು ಸಂಗ್ರಹಾಲಯ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಿದ ಬಸವರಾಜ ಬೊಮ್ಮಾಯಿ
ಕೆ.ಸಿ.ರೆಡ್ಡಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬಸವರಾಜ ಬೊಮ್ಮಾಯಿ
Follow us
|

Updated on:Feb 25, 2023 | 10:09 PM

ಬೆಂಗಳೂರು: ದೆಹಲಿಯಲ್ಲಿರುವ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯದ ಮಾದರಿಯಲ್ಲಿ ಕರ್ನಾಕಟದ ಮುಖ್ಯಮಂತ್ರಿಗಳಿಗಾಗಿ ಒಂದು ಮ್ಯೂಸಿಯಂ ತೆರೆಯುವ ಅಗತ್ಯವಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಫೆ.25) ಹೇಳಿದ್ದಾರೆ. ರಾಜ್ಯದ ಏಕೀಕರಣದ ಹೋರಾಟ ಮತ್ತು ಎಲ್ಲಾ ಮುಖ್ಯಮಂತ್ರಿಗಳು ನೀಡಿದ ಪ್ರಮುಖ ಕೊಡುಗೆಗಳನ್ನು ಪ್ರತಿನಿಧಿಸುವ ಮ್ಯೂಸಿಯಂ ಅವಶ್ಯಕತೆ ಇದೆ. ಸದ್ಯಕ್ಕೆ ಇದು ಕೇವಲ ಕಲ್ಪನೆಯಾಗಿದ್ದು, ಸಂಬಂಧಪಟ್ಟ ಎಲ್ಲರೊಂದಿಗೆ ಚರ್ಚಿಸಿದ ನಂತರ ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಸಿದ್ಧಪಡಿಸಬಹುದು ಎಂದು ಹೇಳಿದರು.

ವಿಧಾನಸೌಧದಲ್ಲಿ ಮೈಸೂರು ರಾಜ್ಯದ (ಈಗಿನ ಕರ್ನಾಟಕ) ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮುಂದಿನ ಪೀಳಿಗೆ ಕರ್ನಾಟಕವನ್ನು ಕಟ್ಟಿದವರನ್ನು ಮರೆಯಬಾರದು. ಅವರ ತ್ಯಾಗ, ದೂರದೃಷ್ಟಿ, ಆದರ್ಶಗಳು ಮತ್ತು ತತ್ವಗಳು ರಾಜ್ಯವು ನಿಲ್ಲುವಂತೆ ಮಾಡಿದೆ. ಹಾಗಾಗಿ ಅವರನ್ನು ಹಾಗೂ ಅವರ ಕಾರ್ಯಗಳನ್ನು ಸ್ಮರಿಸಿ ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೊಡುಗೆಗಳ ಬಗ್ಗೆ ಸಾಕಷ್ಟು ಸಾಹಿತ್ಯ ಈಗಾಗಲೇ ಲಭ್ಯವಿದ್ದು, ಎಲ್ಲಾ ಮುಖ್ಯಮಂತ್ರಿಗಳ ಬಗ್ಗೆ ಅದನ್ನು ಸಿದ್ಧಪಡಿಸಬೇಕು ಮತ್ತು ಇಂದಿನ ಯುವಜನರಲ್ಲಿ ಪ್ರಚಾರ ಮಾಡಬೇಕು ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ದೆಹಲಿಯಲ್ಲೂ ಕನ್ನಡ ಕಂಪು ನನಗೆ ಕಾಣಿಸುತ್ತಿದೆ, ಈ ನಾಡಲ್ಲಿ ಹುಟ್ಟಿದೇ ಸೌಭಾಗ್ಯ: ಸಿಎಂ ಬೊಮ್ಮಾಯಿ

ಕರ್ನಾಟಕ ರಾಜ್ಯವಾದಾಗ ಇದ್ದ ಜನರ ಮನಸ್ಥಿತಿ ಮತ್ತು ಪರಿಸ್ಥಿತಿಯನ್ನು ಪ್ರತಿನಿಧಿಸುವ ವಸ್ತುಸಂಗ್ರಹಾಲಯದ ಅವಶ್ಯಕತೆಯಿದೆ ಎಂದು ನಾನು ಭಾವಿಸುತ್ತೇನೆ. ವಿವಿಧ ಪ್ರದೇಶಗಳ ಜನರ ಮನಸ್ಸುಗಳು ಹೇಗೆ ಒಗ್ಗೂಡಿದವು, ಇದು ಹೇಗೆ ಕರ್ನಾಟಕ ಏಕೀಕರಣ ಹೋರಾಟಕ್ಕೆ ಕಾರಣವಾಯಿತು. ಅಲ್ಲದೆ, ರಾಜ್ಯದ ಹಿತದೃಷ್ಟಿಯಿಂದ ನಡೆದ ವಿವಿಧ ಆಂದೋಲನಗಳು ಅಥವಾ ಚಳವಳಿಗಳು ಮತ್ತು ಎಲ್ಲಾ ಮುಖ್ಯಮಂತ್ರಿಗಳು ಕೈಗೊಂಡ ಪ್ರಮುಖ ನಿರ್ಧಾರಗಳನ್ನು ಜನರಿಗೆ ತಿಳಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಕೆ.ಸಿ.ರೆಡ್ಡಿ ಅವರು ಶ್ರೀಮಂತ ಪರಂಪರೆಯನ್ನು ತೊರೆದಿದ್ದಾರೆ ಮತ್ತು ಕೋಲಾರದಲ್ಲಿ ರೆಡ್ಡಿ ಅವರ ಸ್ಮಾರಕವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ಸಹಕಾರ ನೀಡಲು ಸಿದ್ಧವಾಗಿದೆ ಎಂದು ಹೇಳಿದ ಬೊಮ್ಮಾಯಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ರೆಡ್ಡಿ ಅವರು ರೈತ ಕುಟುಂಬದಿಂದ ಬಂದವರು, ವಕೀಲರಾಗಿ ಮತ್ತು ಪತ್ರಕರ್ತರಾಗಿ ಕೆಲಸ ಮಾಡಿದ್ದರು ಎಂದು ಸ್ಮರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 pm, Sat, 25 February 23

ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ