AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ರೌಡಿಗಳು ಲೋಕಲ್ ಪೊಲೀಸರ ಸಂಪರ್ಕದಲ್ಲಿದ್ದು ಟಿಪ್ ಪಡೆಯುತ್ತಾರೆ”: ಅಪರಾಧ, ಡ್ರಗ್ಸ್ ಜಾಲ ಮಟ್ಟಹಾಕಲು ಪ್ರತ್ಯೇಕ ಸ್ಕ್ವಾಡ್ ರಚಿಸುವುದಾಗಿ ಸಿಎಂ ಡಿಕೆಶಿ ಘೋಷಣೆ

ಬೆಂಗಳೂರಿನಲ್ಲಿ ರೌಡಿ ಚಟುವಟಿಕೆ ಹಾಗೂ ಮಾದಕವಸ್ತು ದಂಧೆ ಮಟ್ಟಹಾಕಲು ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಸ್ಥಳೀಯ ಪೊಲೀಸರ ಹಸ್ತಕ್ಷೇಪವಿಲ್ಲದೆ, ನೇರವಾಗಿ ಕಮಿಷನರೇಟ್ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ 'ಪ್ರತ್ಯೇಕ ರೌಡಿ ಸ್ಕ್ವಾಡ್' ರಚಿಸಲಾಗುವುದು. ಸ್ಥಳೀಯ ಠಾಣೆಗಳೊಂದಿಗೆ ರೌಡಿಗಳ ಸಂಪರ್ಕ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಅಪರಾಧ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಇದು ಮೊದಲ ಹೆಜ್ಜೆ.

ರೌಡಿಗಳು ಲೋಕಲ್ ಪೊಲೀಸರ ಸಂಪರ್ಕದಲ್ಲಿದ್ದು ಟಿಪ್ ಪಡೆಯುತ್ತಾರೆ: ಅಪರಾಧ, ಡ್ರಗ್ಸ್ ಜಾಲ ಮಟ್ಟಹಾಕಲು ಪ್ರತ್ಯೇಕ ಸ್ಕ್ವಾಡ್ ರಚಿಸುವುದಾಗಿ ಸಿಎಂ ಡಿಕೆಶಿ ಘೋಷಣೆ
ಡಿಕೆ ಶಿವಕುಮಾರ್
ಅನಿಲ್​ ಕಲ್ಕೆರೆ
| Edited By: |

Updated on: Nov 15, 2026 | 3:53 PM

Share

ಬೆಂಗಳೂರು, ನ.15: ರಾಜಧಾನಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಹಾಗೂ ಮಾದಕವಸ್ತು ದಂಧೆಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳೀಯ ಪೊಲೀಸ್ ಠಾಣೆಗಳ ವ್ಯಾಪ್ತಿ ಮತ್ತು ನಿಯಂತ್ರಣವನ್ನು ಹೊರತುಪಡಿಸಿ, ನೇರವಾಗಿ ಪೊಲೀಸ್ ಕಮಿಷನರೇಟ್‌ನ ಪ್ರತ್ಯೇಕ ಕಂಟ್ರೋಲ್‌ನಲ್ಲಿ ಕಾರ್ಯನಿರ್ವಹಿಸುವ ‘ಪ್ರತ್ಯೇಕ ರೌಡಿ ಸ್ಕ್ವಾಡ್’ ರಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ರೌಡಿಗಳು ಸ್ಥಳೀಯ ಪೊಲೀಸರ ಜೊತೆ ಹೊಂದಾಣಿಕೆ ಹಾಗೂ ಸಂಪರ್ಕದಲ್ಲಿರುತ್ತಾರೆ ಎಂಬ ಮಾಹಿತಿ ಸರ್ಕಾರಕ್ಕಿದೆ. ದಾಳಿ ನಡೆಯುವ ಮುನ್ನವೇ ರೌಡಿಗಳಿಗೆ ‘ಟಿಪ್’ (ಮಾಹಿತಿ) ಕೊಡುವುದು, ರಕ್ಷಣೆ ನೀಡುವುದು ನಡೆಯುತ್ತದೆ. ಹೀಗಾಗಿ ಇಂತಹ ಯಾವುದೇ ಹೊಂದಾಣಿಕೆಗೆ ಅವಕಾಶ ನೀಡದಂತೆ ಪ್ರತ್ಯೇಕ ತಂಡವನ್ನು ರಚಿಸಲಾಗುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಅಪರಾಧ ಚಟುವಟಿಕೆಗಳು ಮತ್ತು ಡ್ರಗ್ಸ್ ಜಾಲವನ್ನು ಮಟ್ಟಹಾಕಲು ರಚನೆಯಾಗುವ ಈ ಪ್ರತ್ಯೇಕ ರೌಡಿ ಸ್ಕ್ವಾಡ್, ಸ್ಥಳೀಯ ಠಾಣೆಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ಮೇಲಿನ ಅಧಿಕಾರಿಗಳ (ಕಮಿಷನರೇಟ್) ಕಂಟ್ರೋಲ್‌ನಲ್ಲಿ ಸ್ವತಂತ್ರವಾಗಿ ಕಾರ್ಯಾಚರಣೆ ನಡೆಸಲಿದೆ.

“ಬೆಂಗಳೂರು ನಗರದಲ್ಲಿ ಸಣ್ಣ ಅಪರಾಧ ಘಟನೆಗೂ ಅವಕಾಶ ಕೊಡಬಾರದು. ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಪ್ಲ್ಯಾನ್ ಮಾಡಿದ್ದೇವೆ. ಈಗಾಗಲೇ ಕೆಲವು ಕಡೆ ಡ್ರಗ್ಸ್ ಸೀಜ್ ಮಾಡಿದ್ದೇವೆ, ನಮ್ಮ ಬಳಿ ಸಾಕಷ್ಟು ಮಾಹಿತಿಯಿದ್ದು ಮುಂದೆಯೂ ಕಠಿಣ ಕಾರ್ಯಾಚರಣೆ ಮುಂದುವರಿಯಲಿದೆ. ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: “ಬಡ ಆಟೋ ಡ್ರೈವರ್ ಮಕ್ಕಳು ಆಟೋ ಡ್ರೈವರ್ ಕೆಲಸಾನೆ ಮಾಡೋದು”: ಶಿವಮೊಗ್ಗ ಸರ್ಕಾರಿ ಉರ್ದು ಶಾಲೆ ಶಿಕ್ಷಕಿಯಿಂದ ಮಕ್ಕಳ ಮೇಲೆ ದೌರ್ಜನ್ಯ

ಸಿಎಂ ಪ್ರಮಾಣವಚನದ ನಂತರ ಮಹತ್ವದ ನಿರ್ಧಾರ;

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ ಇಲಾಖೆಯ ಸುಧಾರಣೆ ಹಾಗೂ ರೌಡಿಗಳ ಮಟ್ಟಹಾಕುವ ವಿಚಾರದಲ್ಲಿ ಆರಂಭದಿಂದಲೂ ಕಠಿಣ ನಿಲುವು ತಾಳಿದ್ದರು. ಈ ಹಿಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನಡೆದ ಸಚಿವ ಸಂಪುಟ ಸಭೆಯಲ್ಲೂ ಸಿಎಂ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ ಠಾಣೆಗಳ ಕಾರ್ಯವೈಖರಿ ಹಾಗೂ ರೌಡಿಗಳ ಹಾವಳಿಯ ಕುರಿತು ಗಂಭೀರವಾಗಿ ಪ್ರಸ್ತಾಪಿಸಿದ್ದರು. ಕೆಲವೆಡೆ ರೌಡಿಗಳೇ ಇಡೀ ಪೊಲೀಸ್ ಸ್ಟೇಷನ್ ಅನ್ನು ನಿಯಂತ್ರಿಸುವ (ಕಂಟ್ರೋಲ್ ಮಾಡುವ) ಪರಿಸ್ಥಿತಿ ಇದೆ ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಅವರು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕುವಂತೆ ಪೊಲೀಸ್ ವರಿಷ್ಠರಿಗೆ ಖಡಕ್ ಸೂಚನೆ ನೀಡಿದ್ದರು. ಇದೀಗ ಅದರ ಮುಂದುವರಿದ ಭಾಗವಾಗಿ ನೇರ ಕಮಿಷನರೇಟ್ ಅಡಿಯಲ್ಲಿ ಪ್ರತ್ಯೇಕ ರೌಡಿ ಸ್ಕ್ವಾಡ್ ರಚಿಸುವ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್