AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿದ್ದ ವ್ಯಕ್ತಿಯ ಬಂಧನ

ಬೆಂಗಳೂರಿನ ಧನಂಜಯ ಎಂಬುವವರನ್ನು , ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ರೋಗಿಗಳಿಂದ ಆಧಾರ್, ಬ್ಯಾಂಕ್ ಮಾಹಿತಿ ಪಡೆದು ನಕಲಿ ಅರ್ಜಿಗಳನ್ನು ಸಲ್ಲಿಸಿ, ಮಂಜೂರಾದ ಹಣದಲ್ಲಿ ಕಮಿಷನ್ ಪಡೆಯುತ್ತಿದ್ದರು. ಸರ್ಕಾರಿ ನಿಧಿ ದುರ್ಬಳಕೆ ಮಾಡುತ್ತಿದ್ದ ಇವರ ಕೃತ್ಯ ಮೇ ತಿಂಗಳಲ್ಲಿ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸಿಎಂ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿದ್ದ ವ್ಯಕ್ತಿಯ ಬಂಧನ
ಸಾಂದರ್ಭಿಕ ಚಿತ್ರ Image Credit source: Google
ಅಕ್ಷಯ್​ ಪಲ್ಲಮಜಲು​​
|

Updated on: Nov 10, 2025 | 12:08 PM

Share

ಬೆಂಗಳೂರು, .10: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ (CM Relief Fund Fraud) ಪಡೆಯಲು ನಕಲಿ ವೈದ್ಯಕೀಯ ದಾಖಲೆಗಳನ್ನು ನೀಡಿರುವ ಆರೋಪದ ಮೇಲೆ 59 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ಆರೋಪಿಯನ್ನು ಬೆಂಗಳೂರಿನ ನೆಲಮಂಗಲದ ಜಿ ಧನಂಜಯ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಪೊಲೀಸರು ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ಹಣಕಾಸಿನ ನೆರವು ನೀಡುವುದಾಗಿ ಹೇಳಿ ಅವರಿಂದ ನಕಲಿ ಆಸ್ಪತ್ರೆ ಬಿಲ್‌ಗಳು ಮತ್ತು ವೈದ್ಯಕೀಯ ದಾಖಲೆಗಳನ್ನು ಪಡೆದು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಧನಂಜಯ ಅವರು ಶಿಕ್ಷಕರಾಗಿದ್ದು, ಯಶವಂತಪುರದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ರೋಗಿಗಳ ವಿವರಗಳನ್ನು ಸಂಗ್ರಹಿಸಿ, ಅವರ ಮಾಹಿತಿಯನ್ನು ಬಳಸಿಕೊಂಡು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರಿಹಾರ ಮೊತ್ತವನ್ನು ಪಡೆಯಲು ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣ’ಕ್ಕೆ ಕಳಿಸಿದ್ದರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಧನಂಜಯ ಒಬ್ಬರೇ ಕೆಲಸ ಮಾಡಿಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ಯಾತಣ್ಣ, ಜಯಮ್ಮ, ಯಶೋದಮ್ಮ ಮತ್ತು ಚಂದ್ರಶೇಖರ್ ಎಂಬುವವರ ಹೆಸರು ಕೂಡ ತನಿಖೆಯಲ್ಲಿ ಕೇಳಿ ಬಂದಿದೆ. ಇದರಲ್ಲಿ ಕ್ಯಾತಣ್ಣ ಮತ್ತು ಇನ್ನೊಬ್ಬ ಶಂಕಿತ ವ್ಯಕ್ತಿ ನಿಧನರಾದ ನಂತರ ಧನಂಜಯ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮತ್ತೊಂದು ಅರ್ಜಿಯನ್ನು ಸಲ್ಲಿಸಿ, ಎರಡನೇ ಬಾರಿಗೆ ಪ್ರಯೋಜನಗಳನ್ನು ಪಡೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಇನ್ನು ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣ’ಕ್ಕೆ ಮೇಯಲ್ಲಿ ಬಂದ ಅರ್ಜಿಗಳನ್ನು ಪರಿಶೀಲನೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ. ಆದರೆ ಅಕ್ರಮದ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಪತ್ತೆ ಮಾಡಲು ಸಾಧ್ಯವಾಗಲಿರಲಿಲ್ಲ. ನವೆಂಬರ್ 5 ರಂದು ಧನಂಜಯ ಅವರು ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕಚೇರಿಗೆ ನಕಲಿ ಅರ್ಜಿಗಳಲ್ಲಿ ಒಂದಕ್ಕೆ ಪರಿಹಾರ ಬಿಡುಗಡೆ ಮಾಡಲು ಯಾಕೆ ವಿಳಂಬವಾಗಿದೆ ಎಂದು ವಿಚಾರಿಸಲು ಬಂದಾಗ ಪ್ರಕರಣದ ಹಿಂದೆ ಧನಂಜಯ ಅವರು ಇರುವ ಬಗ್ಗೆ ತಿಳಿದು ಬಂದಿದೆ. ಅಧಿಕಾರಿಗಳು ಅವರನ್ನು ಬಗ್ಗೆ ಕೇಳಿದಾಗ ಸತ್ಯಾಂಶ ಹೊರಬಿದ್ದಿದೆ.

ಇದನ್ನೂ ಓದಿ: ಬೆಂಗಳೂರಿನ ‘ಸೂಪರ್​​ಮ್ಯಾನ್’ ಮಣಿವೇಲ್; ಸ್ಯಾನಿಟರಿ ಪ್ಯಾಡ್, ವೈಫೈ ಮತ್ತು ಪುಸ್ತಕಗಳ ಜೊತೆ ಇವರ ಆಟೋದಲ್ಲಿ ಇನ್ನೂ ಏನೇನಿದೆ ಗೊತ್ತಾ?

ಹಲವಾರು ಜನರಿಗೆ ಸಹಾಯ ಮಾಡುವುದಾಗಿ ಹೇಳಿ, ಅವರಿಂದ ಆಧಾರ್ ಸಂಖ್ಯೆಗಳು, ಬ್ಯಾಂಕ್ ಖಾತೆ ಮಾಹಿತಿ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಿ, ನಕಲಿ ಅರ್ಜಿ ಸಲ್ಲಿಸಿದ್ದಾರೆ. ಹಣ ಮಂಜೂರು ಮಾಡಿದ ನಂತರ ಪ್ರತಿಯೊಬ್ಬರಿಂದ 50,000 ರೂ. ಕಮಿಷನ್ ಪಡೆಯುತ್ತಿದ್ದರು. ಧನಂಜಯ ಹಿಂದೆಯೂ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್​​​ ತನಿಖೆಯಲ್ಲಿ ತಿಳಿದು ಬಂದಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ