AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಪೊಲೀಸ್ ಠಾಣೆ ಬಳಿಯೇ ಕೊಕೇನ್ ಡೆಲಿವರಿ ದಂಧೆ! 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ

Bangalore Crime News: ಚಾಮರಾಜಪೇಟೆ ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲೇ ಡೆಲಿವರಿ ಬೈಕ್‌ಗಳ ಮೂಲಕ ಕೊಕೇನ್ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 50 ಲಕ್ಷ ರೂಪಾಯಿ ಮೌಲ್ಯದ 116.3 ಗ್ರಾಂ ಕೊಕೇನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ.

ಚಾಮರಾಜಪೇಟೆ ಪೊಲೀಸ್ ಠಾಣೆ ಬಳಿಯೇ ಕೊಕೇನ್ ಡೆಲಿವರಿ ದಂಧೆ! 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on: Aug 03, 2026 | 11:15 AM

Share

ಮುಖ್ಯಾಂಶಗಳು

  • ಮಧ್ಯರಾತ್ರಿ ಅಪಾರ್ಟ್​ಮೆಂಟ್​ಗೆ ಪದೇಪದೆ ಬರ್ತಿತ್ತು ಲಾಜಸ್ಟಿಕ್ಸ್ ಬೈಕ್!
  • ಚಾಮರಾಜಪೇಟೆ ಪೊಲೀಸ್ ಠಾಣೆ ಬಳಿಯೇ ಘಟನೆ
  • ಡೆಲಿವರಿ ಬಾಯ್ ಜಾಡು ಹಿಡಿದ ಪೊಲೀಸರಿಗೆ ಸಿಕ್ಕಿದ್ದೇ ಬೇರೆ

ಬೆಂಗಳೂರು, ಆಗಸ್ಟ್ 3: ಬೆಂಗಳೂರಿನ (Bengaluru) ಚಾಮರಾಜಪೇಟೆ ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲೇ ಬೈಕ್ ಆಧಾರಿತ ಡೆಲಿವರಿ ಸೇವೆ ಬಳಸಿಕೊಂಡು ಕೊಕೇನ್ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ಪದೇಪದೆ ಡೆಲಿವರಿ ಬೈಕ್‌ಗಳು ಅಪಾರ್ಟ್‌ಮೆಂಟ್ ಬಳಿ ಬರುತ್ತಿರುವುದನ್ನು ಗಮನಿಸಿದ ಪೊಲೀಸರಿಗೆ ಡ್ರಗ್ಸ್ ಜಾಲದ ಸುಳಿವು ಸಿಕ್ಕಿದ್ದು, ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು 50 ಲಕ್ಷ ರೂ. ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ.

ಬಂಧಿತನನ್ನು ಉತ್ತರ ಪ್ರದೇಶ ಮೂಲದ, ಬೆಂಗಳೂರಿನ ಬೇಗೂರು ಮೇನ್‌ರೋಡ್ ನಿವಾಸಿ 30 ವರ್ಷದ ರಾಜು ಎಂದು ಗುರುತಿಸಲಾಗಿದೆ. ಜುಲೈ 19ರ ಮಧ್ಯರಾತ್ರಿ ಕನ್ಸರ್ವೆನ್ಸಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್ ಬಳಿ ಪ್ರತಿ 15ರಿಂದ 20 ನಿಮಿಷಕ್ಕೊಮ್ಮೆ ಲಾಜಿಸ್ಟಿಕ್ಸ್ ಸೇವೆಯ ಬೈಕ್‌ಗಳು ಬರುತ್ತಿರುವುದು ಪೊಲೀಸರ ಗಮನಕ್ಕೆ ಬಂದಿತ್ತು.

ಪಾರ್ಸೆಲ್ ನೀಡುವ ಬದಲು ಸಣ್ಣ ಪ್ಯಾಕೆಟ್ ಪಡೆಯುತ್ತಿದ್ದ ಡೆಲಿವರಿ ಬಾಯ್!

ಡೆಲಿವರಿ ಸಿಬ್ಬಂದಿ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಪಾರ್ಸೆಲ್ ನೀಡುವ ಬದಲು, ಕಾರಿನ ಬಳಿ ನಿಂತಿದ್ದ ವ್ಯಕ್ತಿಯಿಂದ ಸಣ್ಣ ಪ್ಯಾಕೆಟ್‌ಗಳನ್ನು ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ಚಟುವಟಿಕೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಡೆಲಿವರಿ ರೈಡರ್‌ವೊಬ್ಬರನ್ನು ತಡೆದು ವಿಚಾರಣೆ ನಡೆಸಿದಾಗ, ಪಾರ್ಸೆಲ್‌ಗಳನ್ನು ರಾಜು ಬುಕ್ ಮಾಡಿರುವುದು ಗೊತ್ತಾಗಿದೆ.

ಪೊಲೀಸರ ಪ್ರಕಾರ, ಕೇವಲ 50 ರೂ. ಡೆಲಿವರಿ ಶುಲ್ಕವಿದ್ದರೂ, ವೇಗವಾಗಿ ಡೆಲಿವರಿ ಮಾಡಿಸಲು ಹಾಗೂ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಲು ರಾಜು ಪ್ರತಿ ರೈಡರ್‌ಗೆ ಸುಮಾರು 300 ರೂ. ಟಿಪ್ ನೀಡುತ್ತಿದ್ದ ಎನ್ನಲಾಗಿದೆ.

ಚಾಕೊಲೇಟ್ ಬಾಕ್ಸ್ ಒಳಗೆ ಕೊಕೇನ್ ಸಾಗಾಟ

ಪಾರ್ಸೆಲ್ ಪರಿಶೀಲಿಸಿದಾಗ ಸಣ್ಣ ಚಾಕೊಲೇಟ್ ಬಾಕ್ಸ್‌ಗಳ ಒಳಗೆ ಕೊಕೇನ್‌ ಅನ್ನು ಬಚ್ಚಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ. ಪೊಲೀಸರು ಸ್ಥಳದಲ್ಲೇ ರಾಜುವನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಶಾಮೀಲಾಗಿದ್ದಾನೆ ಎನ್ನಲಾದ ಮತ್ತೊಬ್ಬ ಆರೋಪಿ ಅಕ್ಷಿತ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಮುಂದುವರಿದಿದೆ.

ಕೊಕೇನ್, ಕಾರು ಜಪ್ತಿ

ಪೊಲೀಸರು 116.3 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದು, ಇದರ ಅಂದಾಜು ಮೌಲ್ಯ ಸುಮಾರು 50 ಲಕ್ಷ ರೂ. ಎಂದು ತಿಳಿದುಬಂದಿದೆ. ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕಾರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಜುವಿನ ಗ್ರಾಹಕರಲ್ಲಿ ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು ಹಾಗೂ ಉದ್ಯಮಿಗಳು ಇದ್ದಿರಬಹುದು ಎಂದು ಶಂಕಿಸಲಾಗಿದೆ.

ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಧಿತ ರಾಜುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಕೇನ್ ಎಲ್ಲಿಂದ ಬರುತ್ತಿತ್ತು, ಯಾರಿಗೆ ಪೂರೈಕೆ ಮಾಡಲಾಗುತ್ತಿತ್ತು, ಎಷ್ಟು ದಿನಗಳಿಂದ ಈ ದಂಧೆ ನಡೆಸಲಾಗುತ್ತಿತ್ತು ಮತ್ತು ಇದರ ಹಿಂದೆ ದೊಡ್ಡ ಅಂತರರಾಜ್ಯ ಡ್ರಗ್ಸ್ ಜಾಲವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು